ಬಂಧನಕ್ಕೊಳಗಾಗಿರುವ ಮಾಜಿ ಶಾಸಕ ಮುನಿರತ್ನ online desk
ರಾಜ್ಯ

ಬಂಧನಕ್ಕೊಳಗಾದ ಮುನಿರತ್ನ ವೈದ್ಯಕೀಯ ಪರೀಕ್ಷೆ ಅಂತ್ಯ; ಅಶೋಕ್​​ನಗರ ಠಾಣೆಗೆ ಶಿಫ್ಟ್!

ಇತ್ತೀಚಿನ ಮಾಹಿತಿಯ ಪ್ರಕಾರ ವೈದ್ಯಕೀಯ ತಪಾಸಣೆ ಮುಕ್ತಾಯಗೊಂಡಿದ್ದು ಮುನಿರತ್ನ ಅವರನ್ನು ಅಶೋಕ್​​ನಗರ ಠಾಣೆಗೆ ಕರೆತರಲಾಗಿದೆ.

ಬೆಂಗಳೂರು: ಗುತ್ತಿಗೆದಾರರೊಬ್ಬರಿಗೆ ಜೀವ ಬೆದರಿಕೆ ಹಾಕಿ, ಜಾತಿ ನಿಂದನೆ ಮಾಡಿದ ಆರೋಪ ಎದುರಿಸುತ್ತಿರುವ ಬಿಜೆಪಿ ಶಾಸಕ ಮುನಿರತ್ನ ನಾಯ್ಡು ಅವರನ್ನು ಪೊಲೀಸರು ಬಂಧಿಸಿದ್ದು, ವೈದ್ಯಕೀಯ ಪರೀಕ್ಷೆಗೆ ಒಳಪಡಿಸಲಾಗಿದೆ.

ಇತ್ತೀಚಿನ ಮಾಹಿತಿಯ ಪ್ರಕಾರ ವೈದ್ಯಕೀಯ ತಪಾಸಣೆ ಮುಕ್ತಾಯಗೊಂಡಿದ್ದು ಮುನಿರತ್ನ ಅವರನ್ನು ಅಶೋಕ್​​ನಗರ ಠಾಣೆಗೆ ಕರೆತರಲಾಗಿದೆ.

ಕೋಲಾರದಿಂದ ಆಂಧ್ರದ ಚಿತ್ತೂರಿಗೆ ತೆರಳುತ್ತಿದ್ದ ಮುನಿರತ್ನ ಅವರನ್ನು ಮೊಬೈಲ್ ಫೋನ್ ಲೊಕೇಷನ್ ಆಧರಿಸಿ ಪತ್ತೆ ಮಾಡಿ ಬಂಧಿಸಲಾಗಿತ್ತು.

ಗುತ್ತಿಗೆದಾರ ಚಲುವರಾಜು ಎಂಬವರು ಶಾಸಕ ಮುನಿರತ್ನ ನನಗೆ ಕೊಲೆ ಬೆದರಿಕೆ, ಜಾತಿ ನಿಂದನೆ ಮಾಡಿದ್ದಾರೆ ಎಂದು ಆರೋಪಿಸಿ ಬೆಂಗಳೂರು ನಗರ ಪೊಲೀಸ್ ಆಯುಕ್ತ ಬಿ.ದಯಾನಂದಗೆ ದೂರು ನೀಡಿದ್ದರು.

ಮುನಿರತ್ನ ಅವರ ವಿರುದ್ಧ ಎರಡು ಎಫ್‌ಐಆರ್‌ಗಳನ್ನು ದಾಖಲಿಸಲಾಗಿದೆ. ಬಿಬಿಎಂಪಿ(ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ) ಗುತ್ತಿಗೆದಾರ ಚೆಲುವರಾಜು ಅವರು ದಾಖಲಿಸಿದ ಮೊದಲ ಎಫ್‌ಐಆರ್‌ನಲ್ಲಿ, ಶಾಸಕರು 30 ಲಕ್ಷ ರೂಪಾಯಿ ಲಂಚಕ್ಕೆ ಬೇಡಿಕೆಯಿಟ್ಟಿದ್ದಾರೆ ಮತ್ತು ಮೊತ್ತವನ್ನು ಪಾವತಿಸದಿದ್ದರೆ ತನ್ನ ಗುತ್ತಿಗೆಯನ್ನು ರದ್ದುಗೊಳಿಸುವುದಾಗಿ ಬೆದರಿಕೆ ಹಾಕಿರುವ ಆರೋಪವಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ರಾಜ್ಯದ ಮುಂದಿನ ಮುಖ್ಯಮಂತ್ರಿಯಾಗಿ ಡಿಕೆ ಶಿವಕುಮಾರ್ ಹೆಸರು ಬಹುತೇಕ ಫೈನಲ್? ಕಾಂಗ್ರೆಸ್‌ನಲ್ಲಿ ಗರಿಗೆದರಿದ ರಾಜಕೀಯ ಚಟುವಟಿಕೆ..!

ದೆಹಲಿ ಸಭೆ ಬಳಿಕ ಬೆಂಗಳೂರಿನಲ್ಲಿ ಶಕ್ತಿ ಪ್ರದರ್ಶನಕ್ಕೆ ಸಿದ್ದರಾಮಯ್ಯ ಸಜ್ಜು: ಬೆಂಬಲಿಗರ ಜೊತೆ ಮಹತ್ವದ ಸಭೆ, ಹೆಚ್ಚಿದ ಕುತೂಹಲ

ಹೈಕಮಾಂಡ್ ಸೂಚನೆಗೆ ಮಣಿದ ಸಿದ್ದರಾಮಯ್ಯ: ಮುಖ್ಯಮಂತ್ರಿ ಸ್ಥಾನ ತ್ಯಜಿಸಲು ಸಮ್ಮತಿ; ಕಾಂಗ್ರೆಸ್ ಪವರ್ ಶಿಫ್ಟ್‌ಗೆ ಕೌಂಟ್‌ಡೌನ್ ಶುರು, ಡಿಕೆಶಿಗೆ ಸಿಎಂ ಪಟ್ಟ..?

ಬೆಂಗಳೂರಿಗೂ ಎಂಟ್ರಿ ಕೊಟ್ಟಿತೇ ಮಹಾಮಾರಿ ಎಬೋಲಾ? ಆಫ್ರಿಕಾದಿಂದ ಬಂದ ಮಹಿಳೆಯಲ್ಲಿ ಸೋಂಕಿನ ಲಕ್ಷಣ ಪತ್ತೆ, ಆರೋಗ್ಯ ಇಲಾಖೆ ಹೈ ಅಲರ್ಟ್

CMRL ಹಣ ಅಕ್ರಮ ವರ್ಗಾವಣೆ ಪ್ರಕರಣ: ಕೇರಳ ಮಾಜಿ ಸಿಎಂ ಪಿಣರಾಯಿ ವಿಜಯನ್ ನಿವಾಸದ ಮೇಲೆ ED ದಾಳಿ..!

SCROLL FOR NEXT