ಸಿಎಂ ಸಿದ್ದರಾಮಯ್ಯ 
ರಾಜ್ಯ

ಸಿಎಂ ಸಿದ್ದರಾಮಯ್ಯ ಮಾಗಡಿ ಭೇಟಿ: ಒಕ್ಕಲಿಗರ ಮನ ಗೆಲ್ಲುವ ಪ್ರಯತ್ನ!

ಒಕ್ಕಲಿಗ ನಾಯಕ ಎನಿಸಿಕೊಂಡವರು ಕೆಂಪೇಗೌಡ ಜಯಂತೋತ್ಸವ ಮಾಡಲಿಲ್ಲ. ನಾವು ನಾಡಪ್ರಭು ಕೆಂಪೇಗೌಡ ಜಯಂತಿ ಮಾಡಿದ್ದು ಎಂದು ಹೇಳುವ ಮೂಲಕ ಪರೋಕ್ಷವಾಗಿ ಹೆಚ್ ಡಿ ಕುಮಾರಸ್ವಾಮಿ ವಿರುದ್ಧ ವಾಗ್ದಾಳಿ ನಡೆಸಿದರು. ತಾವು ಒಕ್ಕಲಿಗ ವಿರೋಧಿ ಅಲ್ಲ ಎಂದು ಬಿಂಬಿಸಿಕೊಳ್ಳಲು ಯತ್ನಿಸಿದರು.

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಶುಕ್ರವಾರ ಒಕ್ಕಲಿಗರ ಹೃದಯಭಾಗ ಮಾಗಡಿಗೆ ಸಚಿವ ಸಂಪುಟ ಸಹೋದ್ಯೋಗಿಗಳೊಂದಿಗೆ ತೆರಳಿ ಪೂರ್ಣಗೊಂಡಿರುವ ಕಾಮಗಾರಿಗಳ ಉದ್ಘಾಟನೆ ಹಾಗೂ 120 ಕೋಟಿ ರೂ.ಗಳ ಅಭಿವೃದ್ಧಿ ಯೋಜನೆಗಳಿಗೆ ಶಂಕುಸ್ಥಾಪನೆ ನೆರವೇರಿಸಿದರು.

ಸಾರಿಗೆ ಸಚಿವ ರಾಮಲಿಂಗಾರೆಡ್ಡಿ, ಸಹಕಾರ ಸಚಿವ ಕೆ.ಎನ್.ರಾಜಣ್ಣ, ವಸತಿ ಸಚಿವ ಜಮೀರ್ ಅಹಮದ್ ಖಾನ್, ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಮಧು ಬಂಗಾರಪ್ಪ ಸಿಎಂ ಜೊತೆಗಿದ್ದರು. ಅಮೆರಿಕ ಪ್ರವಾಸದಲ್ಲಿರುವ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಗೈರು ಹಾಜರಿಯಲ್ಲಿ ನಡೆದ ಕಾರ್ಯಕ್ರಮ ಕುತೂಹಲ ಕೆರಳಿಸಿತು.

ಒಕ್ಕಲಿಗ ನಾಯಕ ಎನಿಸಿಕೊಂಡವರು ಕೆಂಪೇಗೌಡ ಜಯಂತೋತ್ಸವ ಮಾಡಲಿಲ್ಲ. ನಾವು ನಾಡಪ್ರಭು ಕೆಂಪೇಗೌಡ ಜಯಂತಿ ಮಾಡಿದ್ದು ಎಂದು ಹೇಳುವ ಮೂಲಕ ಪರೋಕ್ಷವಾಗಿ ಹೆಚ್ ಡಿ ಕುಮಾರಸ್ವಾಮಿ ವಿರುದ್ಧ ವಾಗ್ದಾಳಿ ನಡೆಸಿದರು. ತಾವು ಒಕ್ಕಲಿಗ ವಿರೋಧಿ ಅಲ್ಲ ಎಂದು ಬಿಂಬಿಸಿಕೊಳ್ಳಲು ಯತ್ನಿಸಿದರು.

ಒಕ್ಕಲಿಗ ನಾಯಕ, ಶಾಸಕ ಹೆಚ್. ಸಿ. ಬಾಲಕೃಷ್ಣ ಸಚಿವರಾಗಲು ಅರ್ಹರು. ಆದರೆ ಸಿಎಂ ಸೇರಿದಂತೆ 34 ಶಾಸಕರನ್ನು ಮಾತ್ರ ಸಂಪುಟಕ್ಕೆ ಸೇರಿಸಿಕೊಳ್ಳಬಹುದಾಗಿದೆ. ಬಾಲಕೃಷ್ಣ ಅವರು ಅಭಿವೃದ್ಧಿ ಕಾಮಗಾರಿಗಳ ಅನುಷ್ಠಾನದಲ್ಲಿ ಅತ್ಯುತ್ತಮ ಶಾಸಕ ಎಂದು ಸಾಬೀತುಪಡಿಸುತ್ತಿದ್ದಾರೆ. ಅವರ ಯಾವುದೇ ಪ್ರಸ್ತಾಪಗಳಿಗೆ ಎಂದಿಗೂ ಇಲ್ಲ ಎಂದು ನಾನು ಹೇಳಿಲ್ಲ ಎಂದರು.

'ಮಾಗಡಿ ಅತ್ಯಂತ ಮಹತ್ವದ ಪಟ್ಟಣವಾಗಿದ್ದು, ಅಭಿವೃದ್ಧಿಯಾಗಬೇಕು. ಇದು ಕೆಂಪೇಗೌಡರ ರಾಜಧಾನಿಯಾಗಿತ್ತು. 2016-17ರಲ್ಲಿ ನಾನು ಸಿಎಂ ಆಗಿದ್ದಾಗ ಕೆಂಪೇಗೌಡ ಜಯಂತಿಗೆ ಸರ್ಕಾರ ರಜೆ ಘೋಷಿಸಲಾಯಿತು. ಒಕ್ಕಲಿಗರ ನಾಯಕರೆಂದು ಹೇಳಿಕೊಂಡವರು ಇದನ್ನು ಮಾಡಲಿಲ್ಲ ಎಂದು ವಾಗ್ದಾಳಿ ನಡೆಸಿದರು.

ಗ್ಯಾರಂಟಿ ಅನುಷ್ಟಾನದ ನಂತರ ಅಭಿವೃದ್ಧಿ ಕಾಮಗಾರಿಗಳಿಗೆ ಹಣ ಇಲ್ಲ ಎಂದು ಬಿಜೆಪಿ ಸುಳ್ಳು ಆರೋಪ ಮಾಡುತ್ತಿದೆ ಎಂದು ಆರೋಪಿಸಿದ ಮುಖ್ಯಮಂತ್ರಿ, ಮಾಗಡಿಯಲ್ಲಿ ರೂ.120 ಕೋಟಿ ಮೊತ್ತದ ಅಭಿವೃದ್ಧಿ ಕಾಮಗಾರಿಗಳಿಗೆ ಸರ್ಕಾರ ಹೇಗೆ ಮುಂದೆ ಬಂದಿದೆ ಎಂದು ಪ್ರಶ್ನಿಸಿದರು.

2014ರಲ್ಲಿ 53.11 ಲಕ್ಷ ಕೋಟಿಗೆ ಹೋಲಿಸಿದರೆ 10 ವರ್ಷಗಳಲ್ಲಿ ಭಾರತದ ಸಾಲ 182 ಲಕ್ಷ ಕೋಟಿ ದಾಟಿದೆ. ಕೇಂದ್ರ ಸರ್ಕಾರ ಕೈಗಾರಿಕೋದ್ಯಮಿಗಳಿಗೆ ನೀಡಿದ್ದ 16 ಲಕ್ಷ ರೂಪಾಯಿ ಸಾಲ ಮನ್ನಾ ಮಾಡಿದ್ದರಿಂದ ಮೋದಿ ಬಂಡವಾಳಶಾಹಿ ಪರವಾಗಿದ್ದಾರೆ ಎಂದು ವಾಗ್ದಾಳಿ ನಡೆಸಿದರು.

ಕಾನೂನು ಮತ್ತು ನ್ಯಾಯಾಲಯಗಳ ಮೇಲೆ ನಂಬಿಕೆಯಿದೆ: ಮುಡಾ ನಿವೇಶನ ಹಂಚಿಕೆ ಪ್ರಕರಣದ ತನಿಖೆಗೆ ರಾಜ್ಯಪಾಲರ ಅನುಮತಿಯನ್ನು ಪ್ರಶ್ನಿಸಿ ಸಲ್ಲಿಸಿರುವ ಅರ್ಜಿಯ ವಿಚಾರಣೆಯನ್ನು ಕರ್ನಾಟಕ ಹೈಕೋರ್ಟ್‌ನಲ್ಲಿ ಪೂರ್ಣಗೊಳಿಸಿ ತೀರ್ಪು ಕಾಯ್ದಿರಿಸಿರುವ ಕುರಿತು ಪ್ರತಿಕ್ರಿಯಿಸಿದ ಸಿಎಂ ಸಿದ್ದರಾಮಯ್ಯ, ನಾನು ಯಾವುದೇ ತಪ್ಪು ಮಾಡಿಲ್ಲದ ಕಾರಣ ನ್ಯಾಯ ಸಿಗುವ ವಿಶ್ವಾಸವಿದೆ ಎಂದರು.

ಈ ನೆಲದ ಕಾನೂನು ಮತ್ತು ನ್ಯಾಯಾಲಯಗಳ ಮೇಲೆ ನನಗೆ ನಂಬಿಕೆಯಿದೆ. ನಾನು ಯಾವುದೇ ತಪ್ಪು ಮಾಡಿಲ್ಲ ಮತ್ತು ಮುಂದೆಯೂ ಮಾಡುವುದಿಲ್ಲ. 40 ವರ್ಷಗಳ ನನ್ನ ರಾಜಕೀಯ ಜೀವನ ತೆರೆದ ಪುಸ್ತಕವಿದ್ದಂತೆ. ನಾನು ಬಡವರಿಗಾಗಿ ಅಧಿಕಾರದಲ್ಲಿದ್ದೇನೆ ಎಂದು ಮುಖ್ಯಮಂತ್ರಿ ಹೇಳಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ- ಭಗವಂತನ ಸಂಬಂಧ ಇದೆ, RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿಕೆ ಶಿವಕುಮಾರ್

ಭಾರತದ ಮೇಲೆ ಶೇ. 50 ರಷ್ಟು ಸುಂಕ ನಾಳೆ ಜಾರಿ, ಅಮೆರಿಕ ಕರಡು ಸೂಚನೆ; ಔಷಧ, ಎಲೆಕ್ಟ್ರಾನಿಕ್ಸ್‌ ವಸ್ತುಗಳಿಗೆ ವಿನಾಯಿತಿ

ಪದಕ ಹಾಕಿಸಿಕೊಳ್ಳಲು ನಿರಾಕರಿಸಿದ DMK ಸಚಿವನ ಪುತ್ರ, BJP ನಾಯಕ Annamalai ಹೇಳಿದ್ದೇನು? Video

ಧರ್ಮಸ್ಥಳ ಬುರುಡೆ ಕೇಸು: ಮಹೇಶ್ ತಿಮರೋಡಿ ನಿವಾಸದಲ್ಲಿ ಆರೋಪಿ ಚಿನ್ನಯ್ಯನ ಮೊಬೈಲ್ ಪತ್ತೆ

Gaza Hospital Strike: ಹಮಾಸ್ ಸೋಲಿಸುವುದಷ್ಟೇ ನಮ್ಮ ಗುರಿ, ನಾಗರೀಕರನ್ನು ಗೌರವಿಸುತ್ತೇವೆ; ದಾಳಿ ಕುರಿತು ಮೊದಲ ಬಾರಿಗೆ ಇಸ್ರೇಲ್ ವಿಷಾದ

SCROLL FOR NEXT