ರಾಜ್ಯ

ಸುವರ್ಣ ಸೌಧ ವಾರ್ಷಿಕ ನಿರ್ವಹಣೆಗೆ 2.5 ಕೋಟಿ ರೂ ಅಗತ್ಯವಿದೆ: ಬೆಳಗಾವಿ ಡಿಸಿ

ಕಟ್ಟಡ ನಿರ್ವಹಣೆಗೆ ಅಗತ್ಯವಿರುವ 2.5 ಕೋಟಿ ರೂಪಾಯಿಗಳ ಹಣ ಈಗಾಗಲೇ ಜಿಲ್ಲಾಡಳಿತದ ಬಳಿ ಇದ್ದು, ಅಗತ್ಯ ಕ್ರಮಗಳನ್ನು ಕೈಗೊಳ್ಳುವಲ್ಲಿ ಯಾವುದೇ ತೊಂದರೆ ಇಲ್ಲ ಎಂದರು.

ಬೆಳಗಾವಿ: ನವೆಂಬರ್ ಅಥವಾ ಡಿಸೆಂಬರ್‌ನಲ್ಲಿ ಬೆಳಗಾವಿಯಲ್ಲಿ ನಡೆಯಲಿರುವ ರಾಜ್ಯ ವಿಧಾನಮಂಡಲದ ಚಳಿಗಾಲದ ಅಧಿವೇಶನಕ್ಕೆ ಮೊದಲು ರಾಜ್ಯ ಸರ್ಕಾರ ಅದಕ್ಕೆ ಸಿದ್ಧತೆ ಮಾಡಿಕೊಳ್ಳುತ್ತಿದೆ.

ಮುಂಬರುವ ಅಧಿವೇಶನಕ್ಕೆ ಬೆಳಗಾವಿಯ ಸುವರ್ಣ ವಿಧಾನ ಸೌಧ ಸಕಾಲಕ್ಕೆ ಸಿದ್ಧವಾಗಲಿದೆ. ಸೌಧದ ವಾರ್ಷಿಕ ನಿರ್ವಹಣೆಗೆ ಕನಿಷ್ಠ 2.5 ಕೋಟಿ ರೂಪಾಯಿ ನಿಧಿಯ ಅಗತ್ಯವಿದ್ದು, ಸರ್ಕಾರ ಇಷ್ಟು ವರ್ಷ ಸಮಯಕ್ಕೆ ಸರಿಯಾಗಿ ಬಿಡುಗಡೆ ಮಾಡಿದೆ ಎಂದು ಬೆಳಗಾವಿ ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ತಿಳಿಸಿದ್ದಾರೆ.

ಸುವರ್ಣ ಸೌಧವನ್ನು ಅಧಿವೇಶನಕ್ಕೆ ಸಜ್ಜುಗೊಳಿಸಲು ಅಗತ್ಯವಿರುವ ಎಲ್ಲಾ ಕ್ರಮಗಳನ್ನು ಜಾರಿಗೊಳಿಸಲಾಗಿದೆಯೆ ಎಂದು ಖಚಿತಪಡಿಸಿಕೊಳ್ಳಲು ಪಿಡಬ್ಲ್ಯುಡಿ ಕಾರ್ಯನಿರ್ವಾಹಕ ಎಂಜಿನಿಯರ್ ಅವರೊಂದಿಗೆ ಮಾತುಕತೆ ನಡೆಸುತ್ತಿದ್ದೇನೆ ಎಂದು ಡಿಸಿ ಹೇಳಿದರು. ಕಟ್ಟಡ ನಿರ್ವಹಣೆಗೆ ಅಗತ್ಯವಿರುವ 2.5 ಕೋಟಿ ರೂಪಾಯಿಗಳ ಹಣ ಈಗಾಗಲೇ ಜಿಲ್ಲಾಡಳಿತದ ಬಳಿ ಇದ್ದು, ಅಗತ್ಯ ಕ್ರಮಗಳನ್ನು ಕೈಗೊಳ್ಳುವಲ್ಲಿ ಯಾವುದೇ ತೊಂದರೆ ಇಲ್ಲ ಎಂದರು.

ಸರ್ಕಾರವು ಅಧಿವೇಶನದ ದಿನಾಂಕಗಳನ್ನು ಘೋಷಿಸಿದ ನಂತರ, ಬೆಳಗಾವಿ ಮತ್ತು ಅದರ ಸುತ್ತಮುತ್ತಲಿನ ಹೆಚ್ಚಿನ ಹೊಟೇಲ್ ಮತ್ತು ರೆಸಾರ್ಟ್‌ಗಳು ಅಧಿವೇಶನದಲ್ಲಿ ಪಾಲ್ಗೊಳ್ಳುವ ಅಧಿಕಾರಿಗಳು, ಶಾಸಕರು ಮತ್ತು ಸಚಿವರು ಸೇರಿದಂತೆ ಸಾವಿರಾರು ಅತಿಥಿಗಳಿಗಾಗಿ ಕಾಯ್ದಿರಿಸಲ್ಪಡುತ್ತವೆ ಎಂದು ಮೂಲಗಳು ತಿಳಿಸಿವೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜನಪ್ರಿಯ ಪ್ಯಾಲೆಸ್ತೀನ್ ನಾಯಕ ಮರ್ವಾನ್ ಬರ್ಘೌಟಿ ಬಿಡುಗಡೆಗೆ ಇಸ್ರೇಲ್ ನಕಾರ: 250 ಕೈದಿಗಳ ಪಟ್ಟಿ ಸಿದ್ಧ

'ನಮ್ಮ ಪಾತ್ರವಿಲ್ಲ': ಆಫ್ಘನ್ ಸಚಿವರ ಸುದ್ದಿಗೋಷ್ಠಿ ವೇಳೆ ಮಹಿಳಾ ಪತ್ರಕರ್ತೆಯರಿಗೆ ನಿರ್ಬಂಧ ಕುರಿತು 'ಕೇಂದ್ರ' ಸ್ಪಷ್ಟನೆ

'ನಂಗೇ ಕೊಡಿ ಎಂದು ನಾನೇನು ಕೇಳಿಲ್ಲ..': ನೊಬೆಲ್ ಶಾಂತಿ ಪ್ರಶಸ್ತಿ ಕುರಿತು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮಾತು!

ಬೆಳಗಾವಿ: ಬೀದಿ ನಾಯಿಗಳ ಅಟ್ಟಹಾಸ, 2 ವರ್ಷದ ಬಾಲಕಿ ಮೇಲೆ ಭೀಕರ ದಾಳಿ

ಬ್ಯಾಂಕ್‌ಗೆ ನಕಲಿ ಗ್ಯಾರಂಟಿ: ರಿಲಯನ್ಸ್‌ ಪವರ್‌ನ ಮುಖ್ಯ ಹಣಕಾಸು ಅಧಿಕಾರಿ ಅಶೋಕ್ ಪಾಲ್ ಬಂಧನ

SCROLL FOR NEXT