ಕೃಷಿ ಸಚಿವ ಎನ್ ಚಲುವರಾಯಸ್ವಾಮಿ 
ರಾಜ್ಯ

ಕೆಲವು ಅಮಾಯಕರನ್ನು ಬಂಧಿಸಿರುವುದು‌ ನಿಜ, ‌ಅವರ ಹೆಸರು ಕೈಬಿಡಲು ಸೂಚಿಸಿದ್ದೇನೆ: ಸಚಿವ ಚಲುವರಾಯಸ್ವಾಮಿ

ಇಂದು ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಚಲುವರಾಯಸ್ವಾಮಿ, ಈ ಘಟನೆಗೆ ಕಾರಣರಾದವರನ್ನು ಪತ್ತೆ ಹಚ್ಚಿ ಬಂಧಿಸಲಾಗುವುದು ಎಂದು ತಿಳಿಸಿದ್ದಾರೆ.

ಮಂಡ್ಯ: ಮಂಡ್ಯ ಜಿಲ್ಲೆಯ ನಾಗಮಂಗಲದಲ್ಲಿ ಗಣೇಶ ಮೂರ್ತಿ ಮೆರವಣಿಗೆ ವೇಳೆ ನಡೆದ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಕೆಲವು ಅಮಾಯಕರನ್ನು ಬಂಧಿಸಿರುವುದು‌ ನಿಜ. ಚಾರ್ಜ್​ಶೀಟ್​​ನಲ್ಲಿ ‌ಅವರ ಹೆಸರು ಕೈಬಿಡಲು ಸೂಚನೆ ‌ನೀಡಿದ್ದೇನೆ ಎಂದು ಸಚಿವ ಚಲುವರಾಯಸ್ವಾಮಿ ಅವರು ಶನಿವಾರ ಹೇಳಿದ್ದಾರೆ.

ಇಂದು ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಚಲುವರಾಯಸ್ವಾಮಿ, ಈ ಘಟನೆಗೆ ಕಾರಣರಾದವರನ್ನು ಪತ್ತೆ ಹಚ್ಚಿ ಬಂಧಿಸಲಾಗುವುದು ಎಂದು ತಿಳಿಸಿದ್ದಾರೆ.

ಇದೇ ವೇಳೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರಾಜೇಶ್ ಹೆಸರು ಕೈಬಿಟ್ಟಿರುವ ವಿಚಾರವಾಗಿ ಪ್ರತಿಕ್ರಿಯಿಸಿದ ಸಚಿವರು, ಗಲಭೆಯಲ್ಲಿ ರಾಜೇಶ್ ಭಾಗವಹಿಸಿರಲಿಲ್ಲ. ಸಿಸಿಟಿವಿ ಆಧರಿಸಿ ಅರೆಸ್ಟ್ ಮಾಡಿದರೆ 500 ಜನರು ಆಗುತ್ತಾರೆ. ಮೆರವಣಿಗೆ ‌ಟೀಂನಲ್ಲಿ ರಾಜೇಶ್ ಪುತ್ರ ಇದ್ದಿದ್ದಕ್ಕೆ ಬಂಧಿಸಿದ್ದಾರೆ. ಯಾರನ್ನೂ‌ ರಕ್ಷಣೆ ಮಾಡುವ ಕೆಲಸ ಮಾಡಿಲ್ಲ. ಆ ಮೂಲಕ ತಮ್ಮ ಆಪ್ತನನ್ನು ಚಲುವರಾಯಸ್ವಾಮಿ ಸಮರ್ಥಿಸಿಕೊಂಡಿದ್ದಾರೆ.

ಒಂದು ಬಾರಿ ಬಂಧನವಾದರೆ ಅವರು ಜಾಮೀನು ಪಡೆಯಲೇಬೇಕು. ಅಮಾಯಕರೆಂದು ಖಚಿತವಾದರೆ ಜಾರ್ಜ್‌ಶೀಟ್ ವೇಳೆ ಅವರ ಹೆಸರು ಕೈಬಿಡುತ್ತೇವೆ. ಗುಂಪು ಘರ್ಷಣೆಗಳಾದ ಕೆಲವೊಮ್ಮೆ ಕೆಲವರನ್ನ ವಶಕ್ಕೆ ಪಡೆಯಲಾಗುತ್ತದೆ. ಸಿಸಿಟವಿ ನೋಡಿಯೋ, ಗುಂಪಲ್ಲಿದ್ದರು ಅನ್ನೋ‌ ಕಾರಣಕ್ಕೋ ಬಂಧಿಸಿರುತ್ತಾರೆ. ಅಮಾಯಕರಿದ್ದರೆ ಖಂಡಿತವಾಗಿ ಜಾರ್ಜ್‌ಶೀಟ್ ವೇಳೆ ಕೈಬಿಡುತ್ತೇವೆ ಎಂದರು.

ನಾಗಮಂಗಲದಲ್ಲಿ ಮತ್ತೆ ಶಾಂತಿ ಸ್ಥಾಪನೆ ಕುರಿತು ಚರ್ಚೆ ಮಾಡಿದ್ದೇವೆ. ನಾಳೆಯಿಂದ ನಾಗಮಂಗಲದಲ್ಲಿ ಗಣಪತಿ ಉತ್ಸವ ನಡೆಯಲಿದೆ. ಶಾಂತಿ ಸ್ಥಾಪನೆಗೆ ಎಲ್ಲ ಪಕ್ಷ, ಸಂಸ್ಥೆ, ಸಾರ್ವಜನಿಕರು ಸಹಕರಿಸಬೇಕು ಎಂದು ಸಚಿವರು ಹೇಳಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ- ಭಗವಂತನ ಸಂಬಂಧ ಇದೆ, RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿಕೆ ಶಿವಕುಮಾರ್

ಭಾರತದ ಮೇಲೆ ಶೇ. 50 ರಷ್ಟು ಸುಂಕ ನಾಳೆ ಜಾರಿ, ಅಮೆರಿಕ ಕರಡು ಸೂಚನೆ; ಔಷಧ, ಎಲೆಕ್ಟ್ರಾನಿಕ್ಸ್‌ ವಸ್ತುಗಳಿಗೆ ವಿನಾಯಿತಿ

ಪದಕ ಹಾಕಿಸಿಕೊಳ್ಳಲು ನಿರಾಕರಿಸಿದ DMK ಸಚಿವನ ಪುತ್ರ, BJP ನಾಯಕ Annamalai ಹೇಳಿದ್ದೇನು? Video

'ಶಾಂತಿ ಬೇಕಾದರೆ ಯುದ್ಧಕ್ಕೆ ಸಿದ್ಧರಾಗಿ.. Sudarshan Chakra ವಾಯುರಕ್ಷಣಾ ವ್ಯವಸ್ಥೆಗೆ ಮೂರೂ ಸೇನೆಗಳ ಬೃಹತ್ ಪ್ರಯತ್ನ ಬೇಕು': CDS Chauhan

ಧರ್ಮಸ್ಥಳ ಬುರುಡೆ ಕೇಸು: ಮಹೇಶ್ ತಿಮರೋಡಿ ನಿವಾಸದಲ್ಲಿ ಆರೋಪಿ ಚಿನ್ನಯ್ಯನ ಮೊಬೈಲ್ ಪತ್ತೆ

SCROLL FOR NEXT