ಬಿಜೆಪಿ ಪ್ರತಿಭಟನೆ 
ರಾಜ್ಯ

ಮೀಸಲಾತಿ ಕುರಿತು ರಾಹುಲ್ ಗಾಂಧಿ ಹೇಳಿಕೆ: BJP ಪ್ರತಿಭಟನೆ

ವಿಧಾನ ಪರಿಷತ್ತಿನ ಪ್ರತಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಅವರ ನೇತೃತ್ವದಲ್ಲಿ ಸ್ವಾತಂತ್ರ್ಯ ಉದ್ಯಾನದಲ್ಲಿ ಪ್ರತಿಭಟನೆ ನಡೆದಿದ್ದು, ಬಿಜೆಪಿ ಕಾರ್ಯಕರ್ತರು ರಾಹುಲ್ ಗಾಂಧಿ ವಿರುದ್ಧ ಧಿಕ್ಕಾರ ಕೂಗಿ ಆಕ್ರೋಶ ಹೊರಹಾಕಿದರು.

ಬೆಂಗಳೂರು: ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್‌ ಗಾಂಧಿ ಅವರು ಮೀಸಲಾತಿ ಕುರಿತು ನೀಡಿದ್ದ ಹೇಳಿಕೆ ಖಂಡಿಸಿ, ಬಿಜೆಪಿ ಮುಖಂಡರು ಹಾಗೂ ಕಾರ್ಯಕರ್ತರು ನಗರದಲ್ಲಿ ಶನಿವಾರ ಪ್ರತಿಭಟನೆ ನಡೆಸಿದರು.

ವಿಧಾನ ಪರಿಷತ್ತಿನ ಪ್ರತಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಅವರ ನೇತೃತ್ವದಲ್ಲಿ ಸ್ವಾತಂತ್ರ್ಯ ಉದ್ಯಾನದಲ್ಲಿ ಪ್ರತಿಭಟನೆ ನಡೆದಿದ್ದು, ಬಿಜೆಪಿ ಕಾರ್ಯಕರ್ತರು ರಾಹುಲ್ ಗಾಂಧಿ ವಿರುದ್ಧ ಧಿಕ್ಕಾರ ಕೂಗಿ ಆಕ್ರೋಶ ಹೊರಹಾಕಿದರು.

ಇದೇ ವೇಳೆ ರಾಹುಲ್‌ ಗಾಂಧಿ ಅವರ ಪ್ರತಿಕೃತಿ ದಹಿಸಲು ಮುಂದಾದ ವೇಳೆ ಪ್ರತಿಭಟನಕಾರರನ್ನು ಪೊಲೀಸರು ತಡೆದರು.

ಈ ಸಂದರ್ಭದಲ್ಲಿ ಮಾತನಾಡಿದ ಛಲವಾದಿ ನಾರಾಯಣಸ್ವಾಮಿ ಅವರು, ಮಾಜಿ ಪ್ರಧಾನಿ ಜವಾಹರಲಾಲ್‌ ನೆಹರೂ ಅವರು ತಾವು ಮೀಸಲಾತಿ ವಿರೋಧಿ ಎಂದಿದ್ದರು. ಇಂದಿರಾ ಗಾಂಧಿ, ರಾಜೀವ್ ಗಾಂಧಿ ಅವರೂ ಅದನ್ನೇ ಮುಂದುವರೆಸಿದ್ದರು. ಈಗ ರಾಹುಲ್ ಗಾಂಧಿ ಸಹ ಆ ಪರಂಪರೆಯನ್ನು ಮುಂದುವರೆಸಿದ್ದಾರೆಂದು ಟೀಕಿಸಿದರು.

ಇದೇ ವೇಳೆ ರಾಹುಲ್ ಹೇಳಿಕೆ ಕುರಿತು ತಮ್ಮ ನಿಲುವು ಸ್ಪಷ್ಟಪಡಿಸುವಂತೆ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಯವರನ್ನು ಒತ್ತಾಯಿಸಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Delhi CJP Protest: ಅಭಿಜೀತ್ ದೀಪ್ಕೆ, ಸೌರವ್ ದಾಸ್, ಆಶುತೋಷ್ ರಂಕಾ,ಯೂಟ್ಯೂಬರ್ ಧ್ರುವ್ ರಾಠಿ ಸೇರಿ 200ಕ್ಕೂ ಹೆಚ್ಚು ಮಂದಿ ಪೊಲೀಸ್ ವಶಕ್ಕೆ; Video

CEC ಜ್ಞಾನೇಶ್ ಕುಮಾರ್ ವಜಾಕ್ಕೆ ಆಗ್ರಹಿಸಿ CJP ಪ್ರತಿಭಟನೆ: ದೆಹಲಿಯಲ್ಲಿ ಬಂಧನ ಪ್ರಕ್ರಿಯೆ ಆರಂಭ, ತೀವ್ರ ಭದ್ರತೆ; Video

‘ಕಾನೂನು ಸುವ್ಯವಸ್ಥೆಗೆ ಗಂಭೀರ ಅಪಾಯವಿದೆ’: ಸಿಜೆಪಿ ಪ್ರತಿಭಟನೆಗೆ ಕೆಲವೇ ಗಂಟೆ ಮೊದಲು ರಾಜ್ಯಗಳಿಗೆ ಪತ್ರ ಬರೆದು MHA ಹೇಳಿದ್ದೇನು?

ನವೆಂಬರ್‌ನಲ್ಲಿ ಕರ್ನಾಟಕ ಬಿಜೆಪಿಗೆ ಮೇಜರ್ ಸರ್ಜರಿ: ಬಿವೈ ವಿಜಯೇಂದ್ರ, ಆರ್ ಅಶೋಕಗೆ ಗೇಟ್ ಪಾಸ್?; ಹೊಸ ಮುಖಗಳಿಗೆ ಮಣೆ!

ಬಾಕಿ ಸಾಲ ವಸೂಲಿಗೆ 'ಗೃಹಲಕ್ಷ್ಮಿ' ಯೋಜನೆಯ ಹಣ ಕಡಿತಗೊಳಿಸದಂತೆ ಬ್ಯಾಂಕುಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದ ಸರ್ಕಾರ!