ಬಂಧನಕ್ಕೊಳಗಾಗಿರುವ ಮಾಜಿ ಶಾಸಕ ಮುನಿರತ್ನ online desk
ರಾಜ್ಯ

ಗುತ್ತಿಗೆದಾರನಿಗೆ ಜೀವ ಬೆದರಿಕೆ, ಜಾತಿ ನಿಂದನೆ ಪ್ರಕರಣ: ಶಾಸಕ ಮುನಿರತ್ನ 2 ದಿನ ಪೊಲೀಸ್‌ ಕಸ್ಟಡಿಗೆ

ಶನಿವಾರ ಪೊಲೀಸರು ಮುನಿರತ್ನ ಅವರನ್ನು ಕೋಲಾರ ಜಿಲ್ಲೆಯ ಮುಳಬಾಗಿಲು ತಾಲೂಕಿನ ನಂಗಲಿ ಗ್ರಾಮದ ಬಳಿ ಬಂಧಿಸಿ ಕರೆತಂದರು. ರಾತ್ರಿ ಆರೋಗ್ಯ ತಪಾಸಣೆ ನಡೆಸಿ, ಬಳಿಕ ನ್ಯಾಯಾಧೀಶರ ಮುಂದೆ ಹಾಜರು ಪಡಿಸಿದರು.

ಬೆಂಗಳೂರು: ಬಿಬಿಎಂಪಿ ಗುತ್ತಿಗೆದಾರರ ವಿರುದ್ಧ ಜಾತಿ ನಿಂದನೆ, ಕಿರುಕುಳ, ಬೆದರಿಕೆ ಹಾಗೂ ಜಾತಿ ನಿಂದನೆ ಮಾಡಿರುವ ಆರೋಪದಡಿ ಬಂಧನಕ್ಕೊಳಗಾಗಿರುವ ಬಿಜೆಪಿ ಶಾಸಕ ಮುನಿರತ್ನ ಅವರನ್ನು 2 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ಒಪ್ಪಿಸಿ 82ನೇ ಜನಪ್ರತಿನಿಧಿಗಳ ನ್ಯಾಯಾಲಯ ಆದೇಶಿಸಿದೆ.

ಶನಿವಾರ ಪೊಲೀಸರು ಮುನಿರತ್ನ ಅವರನ್ನು ಕೋಲಾರ ಜಿಲ್ಲೆಯ ಮುಳಬಾಗಿಲು ತಾಲೂಕಿನ ನಂಗಲಿ ಗ್ರಾಮದ ಬಳಿ ಬಂಧಿಸಿ ಕರೆತಂದರು. ರಾತ್ರಿ ಆರೋಗ್ಯ ತಪಾಸಣೆ ನಡೆಸಿ, ಬಳಿಕ ನ್ಯಾಯಾಧೀಶರ ಮುಂದೆ ಹಾಜರು ಪಡಿಸಿದರು.

ಈ ವೇಳೆ ಪೊಲೀಸರು ಒಂದು ವಾರ ಕಸ್ಟಡಿಗೆ ನೀಡುವಂತೆ ನ್ಯಾಯಾಧೀಶ ಸಂತೋಷ್ ಗಜಾನನ ಭಟ್ ಅವರಿಗೆ ಮನವಿ ಮಾಡಿದರು. ವಿಚಾರಣೆ ನಡೆಸಿದ ನ್ಯಾಯಾಧೀಶರು, ಎರಡು ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡಿ ಆದೇಶ ಹೊರಡಿಸಿದರು.

ಏನಿದು ಪ್ರಕರಣ?

ಗುತ್ತಿಗೆದಾರ ಚಲುವರಾಜು ಎಂಬವರು ಶಾಸಕ ಮುನಿರತ್ನ ನನಗೆ ಕೊಲೆ ಬೆದರಿಕೆ, ಜಾತಿ ನಿಂದನೆ ಮಾಡಿದ್ದಾರೆ ಎಂದು ಆರೋಪಿಸಿ ಬೆಂಗಳೂರು ನಗರ ಪೊಲೀಸ್ ಆಯುಕ್ತ ಬಿ.ದಯಾನಂದಗೆ ದೂರು ನೀಡಿದ್ದಲ್ಲದೆ, ರಕ್ಷಣೆ ನೀಡುವಂತೆ ಮನವಿ ಮಾಡಿದ್ದರು.

ಜೀವ ಬೆದರಿಕೆ ಪ್ರಕರಣದಲ್ಲಿ ಒಟ್ಟು ನಾಲ್ವರು ಆರೋಪಿಗಳಿದ್ದು, ಪ್ರಮುಖ ಆರೋಪಿ ಶಾಸಕ ಮುನಿರತ್ನ ಆಗಿದ್ದಾರೆ. ಎ2 ಮುನಿರತ್ನರ ಆಪ್ತ ಸಹಾಯಕ ವಿಜಯ್ ಕುಮರ್, ಎ3 ಸೆಕ್ಯೂರಿಟಿ ಅಭಿಷೇಕ್ ಮತ್ತು ಎ4 ವಸಂತ್ ಕುಮಾರ್ ಆಗಿದ್ದಾರೆಂಜು ಆರೋಪಿಸಿದ್ದರು.

ಶಾಸಕ ಮುನಿರತ್ನ ಸೆಪ್ಟೆಂಬರ್​ 9 ರಂದು 20 ಲಕ್ಷ ರೂಪಾಯಿ ಹಣ ಕೇಳಿದ್ದರು. ದುಡ್ಡು ಕೊಡದಿದ್ದರೆ ರೇಣುಕಾಸ್ವಾಮಿ ರೀತಿ ಕೊಲೆ ಮಾಡುವುದಾಗಿ ಬೆದರಿಕೆ ಹಾಕಿದ್ದರು. ಇಷ್ಟೇ ಅಲ್ಲದೆ, ಜಾತಿ ನಿಂದನೆ ಮಾಡಿದ್ದಾರೆ ಎಂದು ಗುತ್ತಿಗೆದಾರ ಚಲುವರಾಜು ಆರೋಪಿಸಿದ್ದರು.

ಈ ಪ್ರಕರಣ ಸಂಬಂಧ ಮುನಿರತ್ನ ಅವರಿಗೆ ನೋಟಿಸ್ ನೀಡಲು ವೈಯಾಲಿಕಾವಲ್ ಪೊಲೀಸರು ಸಿದ್ಧತೆ ನಡೆಸಿದ್ದರು. ಆದರೆ, ಅಷ್ಟರಲ್ಲಾಗಲೇ ಮುನಿರತ್ನ ನಾಪತ್ತೆಯಾಗಿದ್ದರು. ಬಳಿಕ ಹುಡುಕಾಟ ನಡೆಸಿದ ಪೊಲೀಸರು ಶನಿವಾರ ರಾತ್ರಿ ಮುನಿರತ್ನ ಅವರನ್ನು ಕೋಲಾರ ಜಿಲ್ಲೆಯ ಮುಳಬಾಗಿಲು ತಾಲೂಕಿನ ನಂಗಲಿ ಗ್ರಾಮದ ಬಳಿ ಬಂಧನಕ್ಕೊಳಪಡಿಸಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

CEC ಜ್ಞಾನೇಶ್ ಕುಮಾರ್ ವಜಾಕ್ಕೆ ಆಗ್ರಹಿಸಿ CJP ಪ್ರತಿಭಟನೆ: ದೆಹಲಿಯಲ್ಲಿ ಬಂಧನ ಪ್ರಕ್ರಿಯೆ ಆರಂಭ, ತೀವ್ರ ಭದ್ರತೆ; Video

‘ಕಾನೂನು ಸುವ್ಯವಸ್ಥೆಗೆ ಗಂಭೀರ ಅಪಾಯವಿದೆ’: ಸಿಜೆಪಿ ಪ್ರತಿಭಟನೆಗೆ ಕೆಲವೇ ಗಂಟೆ ಮೊದಲು ರಾಜ್ಯಗಳಿಗೆ ಪತ್ರ ಬರೆದು MHA ಹೇಳಿದ್ದೇನು?

ಬಾಕಿ ಸಾಲ ವಸೂಲಿಗೆ 'ಗೃಹಲಕ್ಷ್ಮಿ' ಯೋಜನೆಯ ಹಣ ಕಡಿತಗೊಳಿಸದಂತೆ ಬ್ಯಾಂಕುಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದ ಸರ್ಕಾರ!

ಮಾಜಿ ಸಂಸದ ಪ್ರಜ್ವಲ್ ರೇವಣ್ಣಗೆ ನಿರಾಳ; ಬೆಳಗಾವಿಯ ಹಿಂಡಲಗಾ ಕೇಂದ್ರ ಕಾರಾಗೃಹಕ್ಕೆ ಸ್ಥಳಾಂತರಿಸುವ ನಿರ್ಧಾರ ರದ್ದು!

'ನ್ಯಾಯಾಂಗ ತನಿಖೆಗೆ ಒಪ್ಪಿಸಿ, ₹1 ಕೋಟಿ ಪರಿಹಾರ ನೀಡಿ': ಹನೂರು ಶೂಟೌಟ್ ಪ್ರಕರಣದ ಮಹಿಮಾ ದಾಸ್ ಸೇರಿ ಸಂತ್ರಸ್ತರ ಆಗ್ರಹ