ಯುವಕನನ್ನು ವಶಕ್ಕೆ ಪಡೆದ ಪೊಲೀಸರು 
ರಾಜ್ಯ

ಭದ್ರತಾ ಲೋಪ: ಸಿಎಂ ಸಿದ್ದರಾಮಯ್ಯಗೆ ಶಾಲು ಹೊದಿಸಲು ವೇದಿಕೆಗೆ ಜಿಗಿದ ಯುವಕನ ಬಂಧನ

ವಿಧಾನಸೌಧದ ಮುಂಭಾಗ ನಡೆಯುತ್ತಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಭಾಗಿಯಾಗಿದ್ದ ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನದ ಕಾರ್ಯಕ್ರಮದಲ್ಲಿ ಭದ್ರತಾ ನಿಯಮ ಉಲ್ಲಂಘನೆಯಾಗಿರುವ ಘಟನೆ ನಡೆದಿದೆ.

ಬೆಂಗಳೂರು: ಸಿಎಂ ಸಿದ್ದರಾಮಯ್ಯ ಭಾಗಿಯಾಗಿದ್ದ ಕಾರ್ಯಕ್ರಮದಲ್ಲಿ ಭದ್ರತಾ ಲೋಪವಾಗಿದ್ದು, ಸಿಎಂ ಇದ್ದ ಕಾರ್ಯಕ್ರಮದ ವೇದಿಕೆ ಮೇಲೆ ಯುವಕನೋರ್ವ ಜಿಗಿದ ಪರಿಣಾಮ ಕೆಲಕಾಲ ಆತಂಕ ಸೃಷ್ಟಿಯಾಗಿತ್ತು.

ವಿಧಾನಸೌಧದ ಮುಂಭಾಗ ನಡೆಯುತ್ತಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಭಾಗಿಯಾಗಿದ್ದ ಅಂತರರಾಷ್ಟ್ರೀಯ ಪ್ರಜಾಪ್ರಭುತ್ವ ದಿನದ ಕಾರ್ಯಕ್ರಮದಲ್ಲಿ ಭದ್ರತಾ ನಿಯಮ ಉಲ್ಲಂಘನೆಯಾಗಿರುವ ಘಟನೆ ನಡೆದಿದೆ.

ಕಾರ್ಯಕ್ರಮದ ವೇದಿಕೆಯಲ್ಲಿ ಸಿ.ಎಂ ಸಿದ್ದರಾಮಯ್ಯ, ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ, ಸಚಿವರಾದ ಹೆಚ್​.ಸಿ.ಮಹದೇವಪ್ಪ, ದಿನೇಶ್ ಗುಂಡೂರಾವ್, ಕೆ.ಜೆ.ಜಾರ್ಜ್, ಪ್ರಿಯಾಂಕ್ ಖರ್ಗೆ ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು.

ಕಾರ್ಯಕ್ರಮ ನಡೆಯುತ್ತಿದ್ದ ವೇಳೆ ಯುವಕನೊಬ್ಬ ಏಕಾಏಕಿ ವೇದಿಕೆ ಮೇಲೆ ಜಿಗಿದು ಸಿದ್ದರಾಮಯ್ಯ ಅವರ ಕಡೆ ಧಾವಿಸಿ ಶಾಲು ಹೊದಿಸಲು ಪ್ರಯತ್ನಿಸಿದ್ದಾನೆ. ಈ ವೇಳೆ ಸ್ಥಳದಲ್ಲಿದ್ದ ಪೊಲೀಸರು ಕೂಡಲೇ ಆ ಯುವಕನನ್ನು ವಶಕ್ಕೆ ಪಡೆದಿದ್ದಾರೆ.

ಕನ್ನಡ ಬಾವುಟದ ಶಾಲು ಧರಿಸಿದ್ದ ಯುವಕ, ಸಿದ್ದರಾಮಯ್ಯ ಅವರಿಗೆ ಶಾಲು ಹಾಕಲು ವೇದಿಕೆಯತ್ತ ತೆರಳಿದ್ದ, ಈ ವೇಳೆ ಪೊಲೀಸರು ವಶಕ್ಕೆ ಪಡೆಯುತ್ತಿದ್ದಂತೆ ಶಾಲನ್ನು ಸಿದ್ದರಾಮಯ್ಯ ಅವರ ಕಡೆ ಎಸೆದ ಎಂದು ಪೊಲೀಸರು ತಿಳಿಸಿದ್ದಾರೆ.

ಬಂಧಿತ ಯುವಕ ಕನಕಪುರ ಮೂಲದವನು ಎನ್ನಲಾಗಿದ್ದು, ಆತನನ್ನು ವಶಕ್ಕೆ ಪಡೆದಿರುವ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಪ್ರದೋಶ್ ಮಾಫಿ ಸಾಕ್ಷಿ ಅರ್ಜಿ ಅಂಗೀಕರಿಸಿದ ಕೋರ್ಟ್; 'ದಾಸ'ನಿಗೆ ಬಿಗ್ ಶಾಕ್!

ನಾಳೆ ಜಗತ್ತಿನಾದ್ಯಂತ ಯಶ್ ನಟನೆಯ 'Toxic' ಚಿತ್ರ ಬಿಡುಗಡೆ; ಇಂದು ದಿಢೀರ್ ಕೋರ್ಟ್ ಮೆಟ್ಟಿಲೇರಿದ ನಿರ್ಮಾಪಕ!

ಬೆಂಗಳೂರು: ಸಿಗ್ನಲ್‌ನಲ್ಲಿ ನಿಂತಿದ್ದ ಬೈಕ್‌ಗೆ ವೇಗವಾಗಿ ಬಂದ ಕಾರು ಡಿಕ್ಕಿ, ಹೇರ್ ಸ್ಟೈಲಿಸ್ಟ್ ಸಾವು; Video

BPSC ಪರೀಕ್ಷೆ ವಿವಾದ: ಬಿಹಾರ ಸಿಎಂ ನಿವಾಸದ ಬಳಿ ಬ್ಯಾರಿಕೇಡ್ ಮುರಿದ ವಿದ್ಯಾರ್ಥಿಗಳು, ಜಲಫಿರಂಗಿಗೆ ಜಗ್ಗದೆ ರೇನ್ ಡ್ಯಾನ್ಸ್ ಮಾಡಿ ಪ್ರತಿಭಟನೆ!

'ಕಾಂಗ್ರೆಸ್ ಸರ್ಕಾರದ ವೈಫಲ್ಯ' ವಿರೋಧಿಸಿ ಸೆಪ್ಟೆಂಬರ್ 1 ರಿಂದ 10ರವರೆಗೆ ರಾಯಚೂರಿನಿಂದ ಬಳ್ಳಾರಿಗೆ BJP-JDS ಪಾದಯಾತ್ರೆ!