ರೌಡಿ ಶೀಟರ್ ಪವನ್ 
ರಾಜ್ಯ

ಯುವಕನಿಗೆ ಬಟ್ಟೆ ಬಿಚ್ಚಿಸಿ ಹಲ್ಲೆ ಪ್ರಕರಣ: ರೌಡಿ ಶೀಟರ್ ಪವನ್ ಕಾಲಿಗೆ ಗುಂಡೇಟು, ಬಂಧನ!

ಜ್ಞಾನಭಾರತಿ ಪೊಲೀಸ್ ಠಾಣೆ ವ್ಯಾಪ್ತಿಯ ಉಲ್ಲಾಳ ಬಳಿ ಇಂದು ಬೆಳಂಬೆಳಿಗ್ಗೆ ರೌಡಿ ಶೀಟರ್ ಪವನ್ ನನ್ನು ಬಂಧಿಸಲು ಪೊಲೀಸರು ಮುಂದಾದಾಗ ಆತ ಪೊಲೀಸರ ಮೇಲೆಯೇ ಹಲ್ಲೆಗೆ ಯತ್ನಿಸಿದ್ದಾನೆ.

ಬೆಂಗಳೂರು: ಇತ್ತೀಚಿಗೆ ನಡುರಸ್ತೆಯನ್ನು ಯುವಕನೊಬ್ಬನನ್ನು ವಿವಸ್ತ್ರಗೊಳಿಸಿ ಹಲ್ಲೆಗೈದಿದ್ದ ರೌಡಿಶೀಟರ್ ಪವನ್ ಅಲಿಯಾಸ್ ಕಡುಬುನನ್ನು ಪೋಲಿಸರು ಬಂಧಿಸಿದ್ದಾರೆ.

ಜ್ಞಾನಭಾರತಿ ಪೊಲೀಸ್ ಠಾಣೆ ವ್ಯಾಪ್ತಿಯ ಉಲ್ಲಾಳ ಬಳಿ ಇಂದು ಬೆಳಂಬೆಳಿಗ್ಗೆ ರೌಡಿ ಶೀಟರ್ ಪವನ್ ನನ್ನು ಬಂಧಿಸಲು ಪೊಲೀಸರು ಮುಂದಾದಾಗ ಆತ ಪೊಲೀಸರ ಮೇಲೆಯೇ ಹಲ್ಲೆಗೆ ಯತ್ನಿಸಿದ್ದಾನೆ. ಬಳಿಕ ಪೊಲೀಸರು ಆತನ ಬಲಗಾಲಿಗೆ ಗುಂಡು ಹಾರಿಸಿ ಬಂಧಿಸಿದ್ದಾರೆ.

ಪವನ್ ಮೇಲೆ ಬಂಧನದ ವಾರಂಟ್ ಇದ್ದರೂ ತಲೆಮರೆಸಿಕೊಂಡು ಓಡಾಡುತ್ತಿದ್ದ. ಈ ನಡುವೆ ಯುವಕನನ್ನು ನಡು ರಸ್ತೆಯಲ್ಲಿ ನಗ್ನಗೊಳಿಸಿ, ಹಲ್ಲೆ ಮಾಡಿದ್ದ. ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿತ್ತು. ಈ ಸಂಬಂಧ ಪ್ರಕರಣ ದಾಖಲಿಸಿಕೊಂಡು ಪೊಲೀಸರು ಉಲ್ಲಾಳದ ಹಿಲ್‌ರಾಕ್ ಸ್ಕೂಲ್ ಬಳಿ ಆತನ ಬಂಧನಕ್ಕೆ ತೆರಳಿದ್ದರು. ಬಂಧನಕ್ಕೆ ವೇಳೆ ಕಡುಬು ಹೆಡ್ ಕಾನ್‌ಸ್ಟೇಬಲ್ ವೆಂಕಟೇಶ್ ಮೇಲೆ ಲಾಂಗ್‌ನಿಂದ ಹಲ್ಲೆ ನಡೆಸಿದ್ದಾನೆ.

ಆತ್ಮರಕ್ಷಣೆಗಾಗಿ ರೌಡಿಯ ಬಲಗಾಲಿಗೆ ಗೋವಿಂದರಾಜ ನಗರದ ಇನ್ಸ್ ಪೆಕ್ಟರ್ ಸರ್ವಿಸ್ ರಿವಾಲ್ವರ್‌ನಿಂದ ಗುಂಡು ಹೊಡೆದಿದ್ದಾರೆ. ಬಳಿಕ ಕಾಮಾಕ್ಷಿಪಾಳ್ಯ ಪೊಲೀಸರು ಕಡುಬುನನ್ನು ಬಂಧಿಸಿದ್ದಾರೆ. ಇನ್ನೂ ಬಂಧಿತ ರೌಡಿ ಶೀಟರ್ ಪವನ್ ಆಲಿಯಾಸ್ ಕಡುಬು ವಿರುದ್ಧ ನಗರದ ಹಲವು ಪೊಲೀಸ್ ಠಾಣೆಗಳಲ್ಲಿ ವಿವಿಧ ಪ್ರಕರಣಗಳು ದಾಖಲಾಗಿವೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Asian Games 2026: ಫೈನಲ್ ನಲ್ಲಿ ಪಾಕಿಸ್ತಾನ ವಿರುದ್ಧ ಭಾರತಕ್ಕೆ ರೋಚಕ ಜಯ, ಮತ್ತೊಂದು ಚಿನ್ನದ ಪದಕ

ಕರ್ನಾಟಕದಲ್ಲಿ ತೀವ್ರ ಬರ: ತುರ್ತು ಮಧ್ಯಪ್ರವೇಶಿಸುವಂತೆ ಪ್ರಧಾನಿ ಮೋದಿಗೆ ಖರ್ಗೆ ಒತ್ತಾಯ; ಅಮಿತ್ ಶಾಗೆ ಪತ್ರ!

ಮಹತ್ವದ ಬೆಳವಣಿಗೆಯಲ್ಲಿ ಆಪ್ ಮಾಜಿ ವಕ್ತಾರೆ ಪ್ರಿಯಾಂಕಾ, ಮಾಜಿ ಶಾಸಕ ಶ್ಯಾಮ್ ಸುಂದರ್ ಸೇರಿ ಹಲವು ನಾಯಕರು ಕಾಂಗ್ರೆಸ್‌ ಸೇರ್ಪಡೆ!

Asian Games 2026: 'ಈಗ ಮಾಡು ಡಾಕ್ಯುಮೆಂಟರಿ': ಬುಮ್ರಾ ವೇಗದ ಹೊಡೆತಕ್ಕೆ ಪತರುಗುಟ್ಟಿದ ಪಾಕ್ ನಾಯಕ

ಮೈಸೂರು: ಕುಸಿದು ಬಿದ್ದ ದೀಪಾಲಂಕಾರದ ಬೃಹತ್ ಕಟೌಟ್; ವಿದ್ಯಾರ್ಥಿಗಳು ಪಾರು, ದಸರಾ ಆರಂಭದಲ್ಲೇ ತಪ್ಪಿದ ದೊಡ್ಡ ದುರಂತ!