ಅಪಘಾತದ ಪ್ರತ್ಯಕ್ಷ ದೃಶ್ಯ 
ರಾಜ್ಯ

ಪ್ರತ್ಯೇಕ ಅಪಘಾತದಲ್ಲಿ 8 ಮಂದಿ ದುರ್ಮರಣ: ಟಿಪ್ಪರ್ ಹರಿದು ಮೂವರು, ಮರಕ್ಕೆ ಕಾರು ಡಿಕ್ಕಿ ಹೊಡೆದು ಐವರು ಸಾವು!

ಮಾಗಡಿ ತಾಲೂಕಿನ ಗುಡೆಮಾರನಹಳ್ಳಿ ಬಳಿ ದುರಂತ ಸಂಭವಿಸಿದೆ. ಮೃತರು ತುಮಕೂರು ಜಿಲ್ಲೆಯ ಕುಣಿಗಲ್ ಮೂಲದವರೆಂದು ತಿಳಿದುಬಂದಿದೆ. ಸಂಬಂಧಿಕರ ತಿಥಿ ಕಾರ್ಯ ಮುಗಿಸಿ ದೇವಸ್ಥಾನಕ್ಕೆ ತೆರಳುತ್ತಿದ್ದಾಗ ಈ ಅಪಘಾತ ಸಂಭವಿಸಿದೆ.

ರಾಮನಗರ/ಚಾಮರಾಜನಗರ: ರಾಜ್ಯದಲ್ಲಿ ಸಂಭವಿಸಿದ ಪ್ರತ್ಯೇಕ ಅಪಘಾತದಲ್ಲಿ ಒಟ್ಟು 8 ಮಂದಿ ಮೃತಪಟ್ಟಿದ್ದಾರೆ. ಅತಿವೇಗವಾಗಿ ತೆರಳುತ್ತಿದ್ದಾಗ ನಿಯಂತ್ರಣ ತಪ್ಪಿ ಮರಕ್ಕೆ ಕಾರು ಡಿಕ್ಕಿ ಹೊಡೆದ ಪರಿಣಾಮ ಒಂದೇ ಕುಟುಂಬದ ಐವರು ಸಾವನ್ನಪ್ಪಿದ್ದಾರೆ.

ಮಾಗಡಿ ತಾಲೂಕಿನ ಗುಡೆಮಾರನಹಳ್ಳಿ ಬಳಿ ದುರಂತ ಸಂಭವಿಸಿದೆ. ಮೃತರು ತುಮಕೂರು ಜಿಲ್ಲೆಯ ಕುಣಿಗಲ್ ಮೂಲದವರೆಂದು ತಿಳಿದುಬಂದಿದೆ. ಸಂಬಂಧಿಕರ ತಿಥಿ ಕಾರ್ಯ ಮುಗಿಸಿ ದೇವಸ್ಥಾನಕ್ಕೆ ತೆರಳುತ್ತಿದ್ದಾಗ ಈ ಅಪಘಾತ ಸಂಭವಿಸಿದೆ. ಕುಣಿಗಲ್​ನಿಂದ ಬೆಂಗಳೂರು ಕಡೆಗೆ ಮಾರುತಿ ಸುಜುಕಿ ಎರ್ಟಿಗಾ ಕಾರಿನಲ್ಲಿ ಹೋಗುತ್ತಿದ್ದಾಗ ಕಾರು ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದಿದೆ. ಈ ವೇಳೆ ಕಾರಿನಲ್ಲಿದ್ದ ಏರ್​ಬ್ಯಾಗ್ ಓಪನ್ ಆದರೂ ಐವರು ಸಾವನ್ನಪ್ಪಿದ್ದಾರೆ.

ಮತ್ತೊಂದೆಡೆ, ಟಿಪ್ಪರ್ ಹರಿದು ಕೇರಳ ಮೂಲದ ಒಂದೇ ಕುಟುಂಬದ ಮೂವರು ಸಾವನ್ನಪ್ಪಿದ್ದಾರೆ. ಚಾಮರಾಜನಗರದ ಗುಂಡ್ಲುಪೇಟೆ ಪಟ್ಟಣದ ಹೊರ ವಲಯದಲ್ಲಿ ಅಪಘಾ ನಡೆದಿದೆ. ಮೃತರನ್ನು ಕೇರಳದ ದಿನೇಶ್, ಅವರ ಪತ್ನಿ ಅಂಜು ಹಾಗೂ ಮಗ ಇಶಾನ್ ಕೃಷ್ಣ ಎಂದು ಗುರುತಿಸಲಾಗಿದೆ. ಬೈಕ್​ನಲ್ಲಿ ಮೂವರು ಹೋಗುತ್ತಿದ್ದಾಗ ಟಿಪ್ಪರ್ ವಾಹನ ಡಿಕ್ಕಿ ಹೊಡೆದಿದೆ. ಈ ವೇಳೆ ಆಯತಪ್ಪಿ ಕೆಳಗೆ ಬಿದ್ದ ಮೂವರ ಮೇಲೆ ಲಾರಿ ಹರಿದು ಮೃತಪಟ್ಟಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Delhi CJP Protest: ಅಭಿಜೀತ್ ದೀಪ್ಕೆ, ಸೌರವ್ ದಾಸ್, ಆಶುತೋಷ್ ರಂಕಾ,ಯೂಟ್ಯೂಬರ್ ಧ್ರುವ್ ರಾಠಿ ಸೇರಿ 200ಕ್ಕೂ ಹೆಚ್ಚು ಮಂದಿ ಪೊಲೀಸ್ ವಶಕ್ಕೆ; Video

CEC ಜ್ಞಾನೇಶ್ ಕುಮಾರ್ ವಜಾಕ್ಕೆ ಆಗ್ರಹಿಸಿ CJP ಪ್ರತಿಭಟನೆ: ದೆಹಲಿಯಲ್ಲಿ ಬಂಧನ ಪ್ರಕ್ರಿಯೆ ಆರಂಭ, ತೀವ್ರ ಭದ್ರತೆ; Video

‘ಪ್ರೇಮದ ಊರಲಿ’ ಭರ್ಜರಿ ಕಲೆಕ್ಷನ್: ಬಾಕ್ಸ್ ಆಫೀಸ್‌ನಲ್ಲಿ ಬರೋಬ್ಬರಿ 39 ಕೋಟಿ ರೂ. ಗಳಿಕೆ!

‘ಕಾನೂನು ಸುವ್ಯವಸ್ಥೆಗೆ ಗಂಭೀರ ಅಪಾಯವಿದೆ’: ಸಿಜೆಪಿ ಪ್ರತಿಭಟನೆಗೆ ಕೆಲವೇ ಗಂಟೆ ಮೊದಲು ರಾಜ್ಯಗಳಿಗೆ ಪತ್ರ ಬರೆದು MHA ಹೇಳಿದ್ದೇನು?

ನವೆಂಬರ್‌ನಲ್ಲಿ ಕರ್ನಾಟಕ ಬಿಜೆಪಿಗೆ ಮೇಜರ್ ಸರ್ಜರಿ: ಬಿವೈ ವಿಜಯೇಂದ್ರ, ಆರ್ ಅಶೋಕಗೆ ಗೇಟ್ ಪಾಸ್?; ಹೊಸ ಮುಖಗಳಿಗೆ ಮಣೆ!