ಸಿಎಂ ಸಿದ್ದರಾಮಯ್ಯ 
ರಾಜ್ಯ

ಕಲ್ಯಾಣ ಕರ್ನಾಟಕ ಉತ್ಸವ: 1,685 ಕೋಟಿ ರೂ ವೆಚ್ಚದಲ್ಲಿ ಸ್ಮಾರ್ಟ್ ಸಿಟಿಯಾಗಿ ಕಲಬುರಗಿ ಅಭಿವೃದ್ಧಿ!

ಸ್ಟಾರ್ಟ್ ಸಿಟಿಯಾಗಿ ಅಭಿವೃದ್ಧಿಪಡಿಸುವುದರಿಂದ ಇಲ್ಲಿನ ಜನರ ಜೀವನ ಗುಣಮಟ್ಟ ಸುಧಾರಿಸಲಿದ್ದು, ಹಿಂದುಳಿದ ಜಿಲ್ಲೆಗಳಿಗೆ ಹೂಡಿಕೆಯನ್ನು ಆಕರ್ಷಿಸುತ್ತದೆ.

ಕಲಬುರಗಿ: ಕಲಬುರಗಿ ನಗರವನ್ನು ರೂ. 1,685 ಕೋಟಿ ವೆಚ್ಚದಲ್ಲಿ ಸ್ಮಾರ್ಟ್ ಸಿಟಿಯನ್ನಾಗಿ ಅಭಿವೃದ್ಧಿಪಡಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಮಂಗಳವಾರ ಹೇಳಿದರು.

ನಗರದ ಪೊಲೀಸ್ ಪರೇಡ್ ಮೈದಾನದಲ್ಲಿ ಕಲ್ಯಾಣ ಕರ್ನಾಟಕ ಉತ್ಸವದ ಅಂಗವಾಗಿ ರಾಷ್ಟ್ರ ಧ್ವಜಾರೋಹಣ ನೆರವೇರಿಸಿ ಮಾತನಾಡಿದ ಮುಖ್ಯಮಂತ್ರಿ, ಸ್ಟಾರ್ಟ್ ಸಿಟಿಯಾಗಿ ಅಭಿವೃದ್ಧಿಪಡಿಸುವುದರಿಂದ ಇಲ್ಲಿನ ಜನರ ಜೀವನ ಗುಣಮಟ್ಟ ಸುಧಾರಿಸಲಿದ್ದು, ಹಿಂದುಳಿದ ಜಿಲ್ಲೆಗಳಿಗೆ ಹೂಡಿಕೆಯನ್ನು ಆಕರ್ಷಿಸುತ್ತದೆ ಎಂದರು.

ಮಹಾತ್ಮಾ ಗಾಂಧಿ ನಗರ ವಿಕಾಸ ಯೋಜನೆ 2.0 ಅಡಿಯಲ್ಲಿ ಕಲಬುರಗಿ ಮತ್ತು ಬಳ್ಳಾರಿ ಮಹಾನಗರ ಪಾಲಿಕೆಗಳಲ್ಲಿ ಮೂಲ ಸೌಕರ್ಯ ಅಭಿವೃದ್ಧಿಗೆ ತಲಾ 200 ಕೋಟಿ ರೂ.ಗಳನ್ನು ನೀಡಲಾಗುವುದು, ಕಲ್ಯಾಣ ಕರ್ನಾಟಕ ಪ್ರದೇಶದಲ್ಲಿ ರಸ್ತೆ ಸಂಪರ್ಕ ಮತ್ತು ಗ್ರಾಮೀಣಾಭಿವೃದ್ಧಿಯನ್ನು ಸುಧಾರಿಸಲು "ಕಲ್ಯಾಣ ಪಥ" ಎಂಬ ಯೋಜನೆಯನ್ನು ಅಭಿವೃದ್ಧಿಪಡಿಸಲಾಗಿದೆ ಎಂದು ಅವರು ಹೇಳಿದರು.ಕಲ್ಯಾಣಪಥ ಯೋಜನೆಯಡಿ ರಾಜ್ಯ ಸರ್ಕಾರ ರೂ. 1,000 ಕೋಟಿ ವೆಚ್ಚದಲ್ಲಿ ಗ್ರಾಮೀಣ ವಿಧಾನಸಭಾ ಕ್ಷೇತ್ರಗಳಲ್ಲಿ 1,150 ಕಿ.ಮೀ ರಸ್ತೆಗಳನ್ನು ಅಭಿವೃದ್ಧಿಪಡಿಸಲಾಗುವುದು, ರಾಯಚೂರಿನಲ್ಲಿ ಏಮ್ಸ್ ಸಂಸ್ಥೆ ಸ್ಥಾಪಿಸಲು ಅಗತ್ಯವಿರುವ ಎಲ್ಲ ನೆರವು ನೀಡಲು ಸರ್ಕಾರ ಸಿದ್ಧವಿದ್ದು, ಏಮ್ಸ್ ಆರಂಭಿಸಲು ಕೇಂದ್ರ ಸರ್ಕಾರ ತಕ್ಷಣ ಕ್ರಮಕೈಗೊಳ್ಳಬೇಕು ಎಂದು ಸಿದ್ದರಾಮಯ್ಯ ಒತ್ತಾಯಿಸಿದರು.

2024-25 ರಲ್ಲಿಈ ಪ್ರದೇಶದ ಏಳು ಜಿಲ್ಲೆಗಳಲ್ಲಿ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ (MGNREGS) ಅಡಿಯಲ್ಲಿ 4.85 ಕೋಟಿ ಮಾನವ ದಿನಗಳ ಕೆಲಸವನ್ನು ಸೃಜಿಸುವ ಗುರಿಯನ್ನು ರಾಜ್ಯ ಸರ್ಕಾರ ಹೊಂದಿದೆ. ಇಲ್ಲಿಯವರೆಗೆ, 3.43 ಕೋಟಿ ಮಾನವ ದಿನಗಳನ್ನು ಸೃಜಿಸಲಾಗಿದ್ದು, 13.69 ಲಕ್ಷ ಜನರಿಗೆ ಉದ್ಯೋಗವನ್ನು ಒದಗಿಸಲಾಗಿದೆ. ಕೊಪ್ಪಳ ಜಿಲ್ಲೆಯ ಪ್ರಸಿದ್ಧ ಅಂಜನಾದ್ರಿ ಬೆಟ್ಟ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಪ್ರವಾಸೋದ್ಯಮವನ್ನು ಅಭಿವೃದ್ಧಿಪಡಿಸಲು 100 ಕೋಟಿ ರೂ.ಗಳನ್ನು ನೀಡಲಾಗುವುದು ಎಂದು ಮುಖ್ಯಮಂತ್ರಿ ಹೇಳಿದರು.

ಬಳ್ಳಾರಿಯಲ್ಲಿ ಅಸಂಘಟಿತ ಜೀನ್ಸ್‌ ಕೈಗಾರಿಕೆಗಳನ್ನು ಸಂಘಟಿಸಿ ಜೀನ್ಸ್‌ ಅಪ್ಯಾರಲ್‌ ಪಾರ್ಕ್‌ ಮತ್ತು ಸಾಮಾನ್ಯ ಸೌಲಭ್ಯ ಕೇಂದ್ರವನ್ನು ಅಭಿವೃದ್ಧಿಪಡಿಸಿ ಅವುಗಳನ್ನು ವಿಶ್ವದರ್ಜೆ ಮಟ್ಟಕ್ಕೆ ಏರಿಸಲಾಗುವುದು ಎಂದು ಹೇಳಿದ ಮುಖ್ಯಮಂತ್ರಿ, ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿಗೆ ಪ್ರಸಕ್ತ 2024-25ನೇ ಸಾಲಿನ ಆಯವ್ಯಯದಲ್ಲಿ ದಾಖಲೆ ಪ್ರಮಾಣದಲ್ಲಿ 5,000 ಕೋಟಿ ರೂ. ಘೋಷಿಸಿ ಅನುದಾನ ಹಂಚಿಕೆ ಮಾಡಲಾಗಿದೆ. ಮಂಡಳಿಯು 5,000 ಕೋಟಿ ರೂ. ಮೊತ್ತಕ್ಕೆ ಸಲ್ಲಿಸಿದ ಕ್ರಿಯಾ ಯೋಜನೆಗೆ ನಮ್ಮ ಸರ್ಕಾರ ಈಗಾಗಲೆ ಅನುಮೋದನೆ ನೀಡಿದ್ದು, ಪ್ರದೇಶದಲ್ಲಿ ಅಭಿವೃದ್ಧಿಯ ಹೊಸ ಕ್ರಾಂತಿ ನಿರೀಕ್ಷಿಸಲಾಗಿದೆ ಎಂದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

'ನನ್ನ ಕುರ್ಚಿ'ಗೆ ಪ್ರಧಾನಿ ಮೋದಿ ಗೌರವ ನೀಡಬೇಕು: ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಕಿಡಿ!

ಸುಪ್ರೀಂ ಕೋರ್ಟ್‌ಗೆ ನ್ಯಾ. ಪಾಂಚೋಲಿ ಹೆಸರು ಶಿಫಾರಸು: ನ್ಯಾ. ಬಿ. ವಿ. ನಾಗರತ್ನ ತೀವ್ರ ಅಸಮಾಧಾನ!

SCROLL FOR NEXT