ಸಿಲಿಂಡರ್ ಸ್ಫೋಟ (ಸಾಂದರ್ಭಿಕ ಚಿತ್ರ) 
ರಾಜ್ಯ

LPG ಸಿಲಿಂಡರ್ ಸ್ಫೋಟ: ಬಾಲಕಿ ಸೇರಿ ನಾಲ್ವರಿಗೆ ಗಾಯ, 12 ಮನೆಗಳಿಗೆ ಹಾನಿ

ಸ್ಫೋಟದಿಂದ ಅಕ್ಕಪಕ್ಕದ ನಾಲ್ಕು ಮನೆಗಳಿಗೂ ತೀವ್ರ ಹಾನಿಯಾಗಿದ್ದು, ಎಂಟು ಮನೆಗಳಿಗೆ ಭಾಗಶಃ ಹಾನಿಯಾಗಿದೆ.

ಬೆಂಗಳೂರು: ಎಲ್‌ಪಿಜಿ ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡು ಮಹಿಳೆ, ಮಗು ಸೇರಿ ನಾಲ್ವರು ಗಾಯಗೊಂಡು, 12 ಮನೆಗಳಿಗೆ ಹಾನಿಯಾಗಿರುವ ಘಟನೆ ಹಳೇ ಬೈಯಪ್ಪನಹಳ್ಳಿ ರಸ್ತೆಯ ಸಂಜಯ್ ಗಾಂಧಿ ನಗರದ 2ನೇ ಕ್ರಾಸ್‌ನಲ್ಲಿ ಸೋಮವಾರ ನಡೆದಿದೆ.

ಘಟನೆಯಲ್ಲಿ ಅಣ್ಣಾದೊರೈ (40) ಬಿಂದರ್ಶ್ (40), ಅವರ ಪತ್ನಿ ರೇಖಾ (30) ಮತ್ತು 10 ವರ್ಷದ ಮಗುವಿಗೆ ಗಾಯಗಳಾಗಿದ್ದು, ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಘಟನೆಯಲ್ಲಿ ಪ್ರಾಣಹಾನಿ ಸಂಭವಿಸಿಲ್ಲ.

ಅಣ್ಣಾದೊರೈ ಅವರ ಮನೆಯಲ್ಲಿ ಬೆಳಗ್ಗೆ 6.50ಕ್ಕೆ ಸ್ಫೋಟ ಸಂಭವಿಸಿದ್ದು, ಅವರಿಗೆ ಮತ್ತು ಅವರ ನೆರೆಯ ಮನೆಯವರಿಗೆ ಗಾಯಗಳಾಗಿವೆ.

ಸ್ಫೋಟದಿಂದ ಅಕ್ಕಪಕ್ಕದ ನಾಲ್ಕು ಮನೆಗಳಿಗೂ ತೀವ್ರ ಹಾನಿಯಾಗಿದ್ದು, ಎಂಟು ಮನೆಗಳಿಗೆ ಭಾಗಶಃ ಹಾನಿಯಾಗಿದೆ. ಮನೆಯೊಳಗಿನ ವಸ್ತುಗಳು ಮತ್ತು ನಿಲ್ಲಿಸಿದ್ದ ವಾಹನಕ್ಕೂ ಹಾನಿಯಾಗಿದೆ. ಅನಿಲ ಸೋರಿಕೆಯಿಂದ ಸ್ಫೋಟ ಸಂಭವಿಸಿದೆ ಎಂದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ.

ಘಟನೆ ನಂತರ ಸ್ಥಳೀಯ ನಿವಾಸಿಗಳು ಅಗ್ನಿಶಾಮಕ ಮತ್ತು ತುರ್ತು ಸೇವೆಗಳಿಗೆ ಮಾಹಿತಿ ನೀಡಿದ್ದು, ಸುದ್ದಿ ತಿಳಿಯುತ್ತಿದ್ದಂತೆ ಸ್ಥಳಕ್ಕೆ ದೌಡಾಯಿಸಿದ ಅಗ್ನಿಶಾಮಕ ದಳದ ಸಿಬ್ಬಂದಿಗಳು, ಬೆಂಕಿ ನಂದಿಸಿದರು.

ಘಟನೆ ಬಳಿಕ ಬೈಯಪ್ಪನಹಳ್ಳಿ ಪೊಲೀಸರು ಅಣ್ಣಾದೊರೈ ಅವರ ಹೇಳಿಕೆಯನ್ನು ದಾಖಲಿಸಿಕೊಂಡಿದ್ದು, ಮುಂದಿನ ತನಿಖೆ ಕೈಗೊಂಡಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಬಾಲಿವುಡ್ ಹಿರಿಯ ನಟ ನಾನಾ ಪಾಟೇಕರ್ ಇನ್ನಿಲ್ಲ

"ಜೀವಕ್ಕೆ ಕುತ್ತು ತರುವ ಹಾದಿ": ರಷ್ಯಾ ಸೇನಾ ನೇಮಕಾತಿ ಆಮಿಷಗಳಿಗೆ ಬಲಿಯಾಗದಂತೆ ನಾಗರಿಕರಿಗೆ ಭಾರತ ಕಟ್ಟುನಿಟ್ಟಿನ ಸೂಚನೆ, 69 ಭಾರತೀಯರ ಬಿಡುಗಡೆಗೆ ಪಟ್ಟು..!

INDIA ಬ್ಲಾಕ್ ನಲ್ಲಿ ಬಿರುಕು?: ಆಪ್ ಕೈ ಕೊಟ್ಟ ಬೆನ್ನಲ್ಲೇ ಭೋಜನ ಕೂಟಕ್ಕೆ ಸಮಾಜವಾದಿ ಪಕ್ಷ ಗೈರು!

ರಾಹುಲ್, ಪ್ರಿಯಾಂಕಾ ಗಾಂಧಿಯನ್ನು ಎಳೆದೊಯ್ದು ವಶಕ್ಕೆ ಪಡೆದ ಪೊಲೀಸರು; ಬಸ್‌ನ ಟೈರ್ ಪಂಕ್ಚರ್ ಮಾಡಿದ ಕಾರ್ಯಕರ್ತರು

ಭಾರತವನ್ನು ಜಾಗತಿಕ ಶಕ್ತಿಯಾಗಿಸಿದ್ದು ಮೋದಿ, ಅಂತಹವರ ವಿರುದ್ಧವೇ ಸಂಚು: ಸರ್ಬಿಯಾ ಮಾಜಿ ಅಧ್ಯಕ್ಷ, Video ವೈರಲ್