ರಾಜ್ಯ

Namma Metro: ನಮ್ಮ ಮೆಟ್ರೋ ಮಹಿಳಾ ಸಿಬ್ಬಂದಿ ಸಮಯಪ್ರಜ್ಞೆಯಿಂದ ಉಳಿಯಿತು ಯುವಕನ ಜೀವ; Video!

ಜ್ಞಾನ ಭಾರತಿ ನಿಲ್ದಾಣದಲ್ಲಿ ನಿಂತಿದ್ದ ಯುವಕ ರೈಲು ಬರುತ್ತಿದ್ದಂತೆ ಹಳಿಗೆ ಜಿಗಿದಿದ್ದಾನೆ. ಈ ವೇಳೆ ಎಚ್ಚೆತ್ತ ಸಿಬ್ಬಂದಿ ತುರ್ತು ನಿರ್ವಹಣಾ ಬಟನ್ ಒತ್ತಿ ವಿದ್ಯುತ್‌ ಸರಬರಾಜನ್ನು ಸ್ಥಗಿತಗೊಳಿಸಿದ್ದರು.

ಬೆಂಗಳೂರು: ನಮ್ಮ ಮೆಟ್ರೋ ಜ್ಞಾನ ಭಾರತಿ ನಿಲ್ದಾಣದಲ್ಲಿ ಯುವಕನೊಬ್ಬ ಹಳಿಗೆ ಜಿಗಿದು ಆತ್ಮಹತ್ಯೆಗೆ ಯತ್ನಿಸಿದ್ದಾನೆ. ಬಿಹಾರ ಮೂಲದ 30 ವರ್ಷದ ಸಿದ್ದಾರ್ಥ್ ಎಂಬಾತ ಮೆಟ್ರೋ ಹಳಿಗೆ ಹಾರಿದ್ದು ಕೂಡಲೇ ಎಚ್ಚೆತ್ತುಕೊಂಡ ಸಿಬ್ಬಂದಿಗಳು ಆತನ ರಕ್ಷಣೆ ಮಾಡಿದ್ದಾರೆ. ಇದರಿಂದಾಗಿ ರೈಲು ಸಂಚಾರದಲ್ಲಿ ಕೆಲಕಾಲ ವ್ಯತ್ಯಯವಾಗಿತ್ತು.

ಜ್ಞಾನ ಭಾರತಿ ನಿಲ್ದಾಣದಲ್ಲಿ ನಿಂತಿದ್ದ ಯುವಕ ರೈಲು ಬರುತ್ತಿದ್ದಂತೆ ಹಳಿಗೆ ಜಿಗಿದಿದ್ದಾನೆ. ಈ ವೇಳೆ ಎಚ್ಚೆತ್ತ ಸಿಬ್ಬಂದಿ ತುರ್ತು ನಿರ್ವಹಣಾ ಬಟನ್ ಒತ್ತಿ ವಿದ್ಯುತ್‌ ಸರಬರಾಜನ್ನು ಸ್ಥಗಿತಗೊಳಿಸಿದ್ದರು. ಇನ್ನು ರೈಲಿನ ಕೆಳಗೆ ಸಿಲುಕಿದ ಯುವಕ ಹೊರ ಬರಲಾರದೇ ಪರದಾಟ ನಡೆಸಿದ್ದನು. ಈ ವೇಳೆ ಸಿಬ್ಬಂದಿಗಳು ಆತನನ್ನ ಹಳಿಯಿಂದ ಹೊರಕ್ಕೆ ತಂದಿದ್ದಾರೆ.

ಮಂಗಳವಾರ ಮಧ್ಯಾಹ್ನ 2-13ರ ಸುಮಾರಿಗೆ ಘಟನೆ ನಡೆದಿದ್ದು, ಇದರಿಂದಾಗಿ ಮೆಟ್ರೋ ಸಂಚಾರ ಸ್ಥಗಿತಗೊಳಿಸಲಾಗಿತ್ತು. ಸದ್ಯ ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ದೆಹಲಿ ಸಭೆ ಬಳಿಕ ಬೆಂಗಳೂರಿನಲ್ಲಿ ಶಕ್ತಿ ಪ್ರದರ್ಶನಕ್ಕೆ ಸಿದ್ದರಾಮಯ್ಯ ಸಜ್ಜು: ಬೆಂಬಲಿಗರ ಜೊತೆ ಮಹತ್ವದ ಸಭೆ, ಹೆಚ್ಚಿದ ಕುತೂಹಲ

ಹೈಕಮಾಂಡ್ ಸೂಚನೆಗೆ ಮಣಿದ ಸಿದ್ದರಾಮಯ್ಯ: ಮುಖ್ಯಮಂತ್ರಿ ಸ್ಥಾನ ತ್ಯಜಿಸಲು ಸಮ್ಮತಿ; ಕಾಂಗ್ರೆಸ್ ಪವರ್ ಶಿಫ್ಟ್‌ಗೆ ಕೌಂಟ್‌ಡೌನ್ ಶುರು, ಡಿಕೆಶಿಗೆ ಸಿಎಂ ಪಟ್ಟ..?

ಬೆಂಗಳೂರಿಗೂ ಎಂಟ್ರಿ ಕೊಟ್ಟಿತೇ ಮಹಾಮಾರಿ ಎಬೋಲಾ? ಆಫ್ರಿಕಾದಿಂದ ಬಂದ ಮಹಿಳೆಯಲ್ಲಿ ಸೋಂಕಿನ ಲಕ್ಷಣ ಪತ್ತೆ, ಆರೋಗ್ಯ ಇಲಾಖೆ ಹೈ ಅಲರ್ಟ್

CMRL ಹಣ ಅಕ್ರಮ ವರ್ಗಾವಣೆ ಪ್ರಕರಣ: ಕೇರಳ ಮಾಜಿ ಸಿಎಂ ಪಿಣರಾಯಿ ವಿಜಯನ್ ನಿವಾಸದ ಮೇಲೆ ED ದಾಳಿ..!

IPL 2026: ಗುಜರಾತ್ ವಿರುದ್ಧ ಭರ್ಜರಿ ಗೆಲುವು; ಸತತ 2ನೇ ಬಾರಿ ಫೈನಲ್ಸ್ ಪ್ರವೇಶಿಸಿದ RCB

SCROLL FOR NEXT