ಬೆಂಗಳೂರು: ನಾಡಹಬ್ಬ ಮೈಸೂರು ದಸರಾ ಉತ್ಸವವನ್ನ ಅದ್ಧೂರಿಯಾಗಿ ಆಚರಿಸಬೇಕು ಎಂಬ ಸರ್ಕಾರದ ನಿರ್ಧಾರವನ್ನು ವಿಪಕ್ಷ ನಾಯಕ ಆರ್. ಅಶೋಕ್ ಸ್ವಾಗತಿಸಿದ್ದಾರೆ.
ಆದರೆ ಅದ್ಧೂರಿ ದಸರಾ, ಕಾಂಗ್ರೆಸ್ ಸರ್ಕಾರದ ಮತ್ತೊಂದು ಅದ್ಧೂರಿ ಹಗರಣಕ್ಕೆ ವೇದಿಕೆ ಆಗದಿರಲಿ ಎನ್ನುವುದೇ ಕನ್ನಡಿಗರ ಆಶಯ ಎಂದಿದ್ದಾರೆ.
ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಫೋಸ್ಟ್ ಮಾಡಿರುವ ಅಶೋಕ್, ಕಳೆದ ವರ್ಷ ಅಂತಾರಾಷ್ಟ್ರೀಯ ಖ್ಯಾತಿಯ ಸರೋದ್ ವಾದಕ ಪಂಡಿತ್ ತಾರಾನಾಥ್ ಅವರ ಬಳಿಯೂ ಪರ್ಸಂಟೇಜ್ ಕಮಿಷನ್ ಕೇಳಿ ಕರ್ನಾಟಕದ ಮಾನ ಹರಾಜು ಹಾಕಿದ್ದ ಕಾಂಗ್ರೆಸ್ ಸರ್ಕಾರ, ಈ ವರ್ಷವಾದರೂ ನಾಡಹಬ್ಬ ದಸರಾ ಮಹೋತ್ಸವಕ್ಕೆ ಭ್ರಷ್ಟಾಚಾರದ ಸೋಂಕು ತಗುಲಿಸದೆ ನಾಡಿನ ಸಂಸ್ಕೃತಿ, ಪರಂಪರೆಯ ಗೌರವ ಉಳಿಸುತ್ತೋ ಅಥವಾ ಈ ವರ್ಷವೂ ಮತ್ತೊಂದು ಭ್ರಷ್ಟಾಚಾರದ ಅಂಬಾರಿ ಹೊತ್ತು ಕನ್ನಡಿಗರ ಮಾನ ಕಳಿಯುತ್ತೋ ಕಾದು ನೋಡಬೇಕು ಎಂದಿದ್ದಾರೆ.