ಸಿಎಂ ಸಿದ್ದರಾಮಯ್ಯ, ಪರಮೇಶ್ವರ್, ದಿನೇಶ್ ಗುಂಡೂರಾವ್ 
ರಾಜ್ಯ

ರಾಜ್ಯದಲ್ಲಿ ಡ್ರಗ್ಸ್ ಹಾವಳಿ ನಿಯಂತ್ರಣಕ್ಕೆ ಡಾ. ಪರಮೇಶ್ವರ್ ನೇತೃತ್ವದಲ್ಲಿ ಕಾರ್ಯಪಡೆ ರಚನೆ: ಸಿಎಂ ಸಿದ್ದರಾಮಯ್ಯ

ಮಾದಕ ವಸ್ತು ಜಾಲದ ವಿರುದ್ಧ ದಾಖಲಾದ ಪ್ರಕರಣಗಳಲ್ಲಿ ಶೇ. 50 ರಷ್ಟು ಬೆಂಗಳೂರು ಹಾಗೂ ಶೇ. 22ರಷ್ಟು ಮಂಗಳೂರಿನಲ್ಲಿ ವರದಿಯಾಗಿದೆ. ಉಳಿದ ಶೇ. 28 ರಷ್ಟು ಪ್ರಕರಣಗಳು ರಾಜ್ಯದ ಇತರೆ ಜಿಲ್ಲೆಗಳಲ್ಲಿ ದಾಖಲಾಗಿವೆ.

ಬೆಂಗಳೂರು: ರಾಜ್ಯದಲ್ಲಿ ಮಾದಕ ವಸ್ತು ಜಾಲಕ್ಕೆ ಸಂಪೂರ್ಣ ಕಡಿವಾಣ ಹಾಕಲು ಕನಿಷ್ಠ 10 ವರ್ಷಗಳ ಜೈಲು ಶಿಕ್ಷೆ ಅಥವಾ ಜೀವಮಾನ ಶಿಕ್ಷೆ ನಿಗದಿ ಮಾಡಲು ಕಾನೂನಿಗೆ ತಿದ್ದುಪಡಿ ತರಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಬುಧವಾರ ಹೇಳಿದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮುಖ್ಯಮಂತ್ರಿ, ಮಾದಕ ವಸ್ತುಗಳ ನಿಯಂತ್ರಣಕ್ಕಾಗಿ ಸಚಿವರನ್ನೊಳಗೊಂಡ ಕಾರ್ಯಪಡೆ ರಚನೆಯನ್ನು ಘೋಷಿಸಿದ ಮುಖ್ಯಮಂತ್ರಿ, ಇದು ಸಾಮಾಜಿಕ ಪಿಡುಗನ್ನು ತೊಡೆದುಹಾಕಲು ಎಲ್ಲಾ ರೀತಿಯ ಪ್ರಾಮಾಣಿಕ ಪ್ರಯತ್ನ ಮಾಡಲಿದೆ ಎಂದರು.

ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ಇಂದು ನಡೆದ ಮಾದಕ ವಸ್ತುಗಳ ಹಾವಳಿ ಮತ್ತು ನಿಯಂತ್ರಣ ಕುರಿತ ಸಭೆಯಲ್ಲಿ ಸಚಿವರಾದ ಡಾ. ಜಿ. ಪರಮೇಶ್ವರ್, ದಿನೇಶ್ ಗುಂಡೂರಾವ್, ಶರಣ ಪ್ರಕಾಶ್ ಪಾಟೀಲ್, ಪ್ರಿಯಾಂಕ್ ಖರ್ಗೆ, ಬೈರತಿ ಸುರೇಶ್ , ಮುಖ್ಯಮಂತ್ರಿಯವರ ರಾಜಕೀಯ ಕಾರ್ಯದರ್ಶಿ ನಜೀರ್ ಅಹ್ಮದ್, ಸರ್ಕಾರದ ಮುಖ್ಯ ಕಾರ್ಯದರ್ಶಿ ಡಾ. ಶಾಲಿನಿ ರಜನೀಶ್, ಮುಖ್ಯಮಂತ್ರಿಯವರ ಅಪರ ಮುಖ್ಯ ಕಾರ್ಯದರ್ಶಿ ಎಲ್.ಕೆ. ಅತೀಕ್, ಗೃಹ ಡಿಜಿಪಿ ಅಲೋಕ್ ಮೋಹನ್, ಬೆಂಗಳೂರು ನಗರ ಪೊಲೀಸ್ ಆಯುಕ್ತ ಬಿ. ದಯಾನಂದ ಮತ್ತು ಇತರ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

ಮಾದಕ ವಸ್ತು ಜಾಲದ ವಿರುದ್ಧ ದಾಖಲಾದ ಪ್ರಕರಣಗಳಲ್ಲಿ ಶೇ. 50 ರಷ್ಟು ಬೆಂಗಳೂರು ಹಾಗೂ ಶೇ. 22ರಷ್ಟು ಮಂಗಳೂರಿನಲ್ಲಿ ವರದಿಯಾಗಿದೆ. ಉಳಿದ ಶೇ. 28 ರಷ್ಟು ಪ್ರಕರಣಗಳು ರಾಜ್ಯದ ಇತರೆ ಜಿಲ್ಲೆಗಳಲ್ಲಿ ದಾಖಲಾಗಿವೆ. ಬೆಂಗಳೂರು ಪೂರ್ವ ವಲಯ ದಂಧೆಯ ತಾಣವಾಗಿದೆ ಎಂದು ಮಾಹಿತಿ ನೀಡಿದರು.

ಮಾದಕ ವಸ್ತು ನಿಯಂತ್ರಣಕ್ಕಾಗಿ ಈಗಾಗಲೇ ಮುಖ್ಯ ಕಾರ್ಯದರ್ಶಿ ಅಧ್ಯಕ್ಷತೆಯಲ್ಲಿ ರಾಜ್ಯಮಟ್ಟದಲ್ಲಿ, ಜಿಲ್ಲಾಧಿಕಾರಿಗಳ ನೇತೃತ್ವದಲ್ಲಿ ಜಿಲ್ಲಾ ಮಟ್ಟದ ಸಮಿತಿಯಿದೆ. ಮಾದಕ ವಸ್ತು ನಿಯಂತ್ರಣ ಕುರಿತು ಹೆಚ್ಚಿನ ಅರಿವು ಮತ್ತು ನಿಗಾ ವಹಿಸಲು ತಜ್ಞರು ಒತ್ತಾಯಿಸುತ್ತಿದ್ದು, ಇಂದು ಪರಮೇಶ್ವರ್ ನೇತೃತ್ವದಲ್ಲಿ ಕಾರ್ಯಪಡೆಯೊಂದನ್ನು ರಚಿಸಲು ನಿರ್ಧರಿಸಲಾಗಿದೆ. ಇದರಲ್ಲಿ ಗೃಹ, ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ, ಸಮಾಜ ಕಲ್ಯಾಣ, ವೈದ್ಯ ಶಿಕ್ಷಣ ಸಚಿವರು ಸದಸ್ಯರಾಗಿ ಇರಲಿದ್ದು, ಆಗಾಗ್ಗೆ ಸಭೆ ಸೇರಿ ಮಾದಕ ವಸ್ತು ಪೂರೈಕೆ, ಮಾರಾಟ, ಸೇವನೆ ಪ್ರಕರಣಗಳ ಕುರಿತು ಅವಲೋಕನ ನಡೆಸಲಿದೆ. ಅಧಿಕಾರಿಗಳಿಗೆ ಸೂಕ್ತ ಮಾರ್ಗದರ್ಶನ ಮಾಡಲಿದೆ ಎಂದರು.

ಮಾತ್ರೆಗಳ ರೂಪದಲ್ಲಿ ಸಿಂಥೆಟಿಕ್ ಔಷಧಿಗಳ ಲಭ್ಯತೆಯ ಬಗ್ಗೆ ಕಳವಳ ವ್ಯಕ್ತಪಡಿಸಿದ ಮುಖ್ಯಮಂತ್ರಿ, ಠಾಣಾಧಿಕಾರಿಗಳ (ಎಸ್‌ಎಚ್‌ಒ) ಗಮನಕ್ಕೆ ಬಾರದೆ ಮಾದಕ ದ್ರವ್ಯ ದಂಧೆ ನಡೆಯುವುದಿಲ್ಲ, ಅಂತಹ ಪ್ರಕರಣ ಕಂಡುಬಂದಲ್ಲಿ ಎಸ್‌ಎಚ್‌ಒಗಳು, ಡಿವೈಎಸ್ ಪಿ, ಎಸಿಪಿ, ಡಿಸಿಪಿ ಮತ್ತು ಎಸ್ ಪಿ ಅವರನ್ನು ಹೊಣೆಗಾರರನ್ನಾಗಿ ಮಾಡಲಾಗುವುದು. ಮಾದಕ ವಸ್ತು ಅಪರಾಧಗಳು ಜಾಮೀನು ರಹಿತವಾಗಿರಬೇಕು, ಮಾದಕವಸ್ತು ಕಳ್ಳಸಾಗಣೆಯಲ್ಲಿ ತೊಡಗಿರುವವರಿಗೆ ಕನಿಷ್ಠ ಹತ್ತು ವರ್ಷಗಳಿಂದ ಗರಿಷ್ಠ ಜೀವಾವಧಿ ಶಿಕ್ಷೆ ವಿಧಿಸಬೇಕು. ಈ ನಿಟ್ಟಿನಲ್ಲಿ ಅಗತ್ಯ ಬಿದ್ದರೆ ಕಾನೂನು ತಿದ್ದುಪಡಿ ಮಾಡಲಾಗುವುದು ಎಂದು ಮುಖ್ಯಮಂತ್ರಿ ತಿಳಿಸಿದರು.

ಮಾದಕ ವ್ಯಸನ ಪ್ರಕರಣಗಳ ವಿಚಾರಣೆಗಾಗಿ ವಿಶೇಷ ನ್ಯಾಯಾಲಯಗಳನ್ನು ಸ್ಥಾಪಿಸಲಾಗುವುದು, ಪುನರ್ವಸತಿ ಕೇಂದ್ರಗಳನ್ನು ಸಹ ಬಲಪಡಿಸಲಾಗುವುದು, ಮಾದಕ ವಸ್ತು ಸೇವನೆಯಿಂದ ಅಪರಾಧ ಚಟುವಟಿಕೆಗಳು ಹೆಚ್ಚಾಗುತ್ತಿವೆ ಎಂದು ಮುಖ್ಯಮಂತ್ರಿ ಕಳವಳ ವ್ಯಕ್ತಪಡಿಸಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ವೆನೆಜುವೆಲಾ ಪರಿಸ್ಥಿತಿ ನಿಮಗೂ ಬರಬಹುದು.. ತಡ ಮಾಡದೇ ನಮ್ ಜೊತೆ ಒಪ್ಪಂದ ಮಾಡ್ಕೊಳ್ಳಿ': ಕ್ಯೂಬಾಗೂ Donald Trump ಎಚ್ಚರಿಕೆ!

ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಮೊದಲ ಏಕದಿನ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

ತ್ರಿಪುರದಲ್ಲಿ ಎರಡು ಸಮುದಾಯಗಳ ನಡುವೆ ಘರ್ಷಣೆ: ಉನಕೋಟಿಯಲ್ಲಿ ಮಸೀದಿ-ಮುಸ್ಲಿಂ ಅಂಗಡಿಗಳಿಗೆ ಬೆಂಕಿ

ಒಂದು ವಾರದ ಚಿಕಿತ್ಸೆ ಬಳಿಕ ಆಸ್ಪತ್ರೆಯಿಂದ ಸೋನಿಯಾ ಗಾಂಧಿ ಡಿಸ್ಚಾರ್ಜ್!

Tubelight in his head: ಹಿಮಂತಾ ಬಿಸ್ವಾ ಶರ್ಮಾ ವಿರುದ್ಧ AIMIM ಮುಖ್ಯಸ್ಥ ಓವೈಸಿ ಕಿಡಿ! ಏನಿದು ವಿವಾದ?

SCROLL FOR NEXT