ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ರಾಜ್ಯ

ಮಂಡ್ಯ: ಕಾರು - ಗೂಡ್ಸ್ ಟೆಂಪೋ ನಡುವೆ ಮುಖಾಮುಖಿ ಡಿಕ್ಕಿ, 22 ಮಂದಿಗೆ ಗಾಯ

ಕೆ.ಎಂ.ದೊಡ್ಡಿ ಮತ್ತು ಮದ್ದೂರು ನಡುವೆ ಈ ಅಪಘಾತ ಸಂಭವಿಸಿದೆ. ಜನರನ್ನು ತುಂಬಿಕೊಂಡು ಹೋಗುತ್ತಿದ್ದ ಟೆಂಪೋ ನಾಲ್ವರು ಪ್ರಯಾಣಿಸುತ್ತಿದ್ದ ಕಾರಿಗೆ ಡಿಕ್ಕಿ ಹೊಡೆದಿದೆ ಎಂದು ಪೊಲೀಸರು ಹೇಳಿದ್ದಾರೆ.

ಸಾಂದರ್ಭಿಕ ಚಿತ್ರ
Lingaraj Badiger
Updated On : 19 Sept 2024, 4:36 pm

ಮಂಡ್ಯ: ಮಂಡ್ಯ ಜಿಲ್ಲೆಯ ಕೆ.ಎಂ.ದೊಡ್ಡಿ ಬಳಿ ಗುರುವಾರ ಕಾರು ಮತ್ತು ಗೂಡ್ಸ್ ಟೆಂಪೋ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ್ದು, ಅಪಘಾತದಲ್ಲಿ ಇಬ್ಬರು 22 ಮಂದಿ ಗಾಯಗೊಂಡಿದ್ದಾರೆ. ಆ ಪೈಕಿ ಇಬ್ಬರ ಸ್ಥಿತಿ ಗಂಭೀರವಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಕೆ.ಎಂ.ದೊಡ್ಡಿ ಮತ್ತು ಮದ್ದೂರು ನಡುವೆ ಈ ಅಪಘಾತ ಸಂಭವಿಸಿದೆ. ಜನರನ್ನು ತುಂಬಿಕೊಂಡು ಹೋಗುತ್ತಿದ್ದ ಟೆಂಪೋ ನಾಲ್ವರು ಪ್ರಯಾಣಿಸುತ್ತಿದ್ದ ಕಾರಿಗೆ ಡಿಕ್ಕಿ ಹೊಡೆದಿದೆ ಎಂದು ಪೊಲೀಸರು ಹೇಳಿದ್ದಾರೆ.

“ಕಾರು ಮತ್ತು ಟೆಂಪೋನಲ್ಲಿದ್ದ ಎಲ್ಲರಿಗೂ ಗಾಯಗಳಾಗಿದ್ದು, ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. 22 ಮಂದಿಯಲ್ಲಿ ಇಬ್ಬರಿಗೆ ಮಾತ್ರ ಗಂಭೀರ ಗಾಯಗಳಾಗಿದ್ದು, ಉಳಿದವರಿಗೆ ಸಣ್ಣಪುಟ್ಟ ಗಾಯಗಳಾಗಿವೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

Advertisement

Advertisement

Also Read

ಕನ್ನಡತಿ ಸೀರಿಯಲ್ ನಟ ಕಿರಣ್ ರಾಜ್ ಕಾರು ಅಪಘಾತ: ಆಸ್ಪತ್ರೆಗೆ ದಾಖಲು

ಅಪಘಾತಕ್ಕೆ ಸಂಬಂಧಿಸಿದಂತೆ ಪ್ರಕರಣ ದಾಖಲಾಗಿದ್ದು, ಮುಂದಿನ ತನಿಖೆ ನಡೆಸಲಾಗುತ್ತಿದೆ ಎಂದು ಅವರು ಹೇಳಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement