ಆಧಾರ್ ಸಾಂದರ್ಭಿಕ ಚಿತ್ರ 
ರಾಜ್ಯ

ನಕಲಿ ಆಧಾರ್ ಕಾರ್ಡ್ ಬಳಕೆಗೆ ಕಡಿವಾಣ: ಸಬ್ ರಿಜಿಸ್ಟ್ರಾರ್ ಕಚೇರಿಗಳಲ್ಲಿ ಆಧಾರ್ ದೃಢೀಕರಣ ಕಡ್ಡಾಯ!

ಎಲ್ಲಾ 256 ಸಬ್-ರಿಜಿಸ್ಟ್ರಾರ್ ಕಚೇರಿಗಳಲ್ಲಿ ಇದನ್ನು ಅಳವಡಿಸಿದ್ದೇವೆ. ಈ ಹಿಂದೆ ನಕಲಿ ಆಧಾರ್ ಕಾರ್ಡ್‌ ತಯಾರಿಸಿ ತಮ್ಮ ಹೆಸರಿಗೆ ಆಸ್ತಿ ನೋಂದಾಯಿಸಲು ಜನರು ನಡೆಸಿದ ಪ್ರಯತ್ನಗಳ ಹಿನ್ನಲೆಯಲ್ಲಿ ಈ ತೀರ್ಮಾನ ಕೈಗೊಳ್ಳಲಾಗಿದೆ.

ಬೆಂಗಳೂರು: ನಕಲಿ ಆಧಾರ್ ಕಾರ್ಡ್‌ಗಳ ಬಳಕೆಗೆ ಕಡಿವಾಣ ಹಾಕಲು ರಾಜ್ಯದ ಎಲ್ಲಾ ಸಬ್ ರಿಜಿಸ್ಟ್ರಾರ್ ಕಚೇರಿಗಳಲ್ಲಿ ಯಾವುದೇ ಆಸ್ತಿ ನೋಂದಣಿಗೂ ಮುನ್ನಾ ಕಾರ್ಡ್ ದೃಢೀಕರಣ ಪರಿಶೀಲನೆಯನ್ನು ಮುದ್ರಾಂಕ ಮತ್ತು ನೋಂದಣಿ ಇಲಾಖೆ ಕಡ್ಡಾಯಗೊಳಿಸಿದೆ. ಇದಕ್ಕಾಗಿ ಈಗ ಪ್ರತಿ ಕಚೇರಿಯಲ್ಲಿಯೂ ಐರಿಸ್ ಸ್ಕ್ಯಾನ್ ಯಂತ್ರ ಮತ್ತು ಬಯೋಮೆಟ್ರಿಕ್ ವ್ಯವಸ್ಥೆ ಅಳವಡಿಸಲಾಗಿದೆ ಎಂದು ಇಲಾಖೆ ಮೂಲಗಳು ತಿಳಿಸಿವೆ.

ಎಲ್ಲಾ 256 ಸಬ್-ರಿಜಿಸ್ಟ್ರಾರ್ ಕಚೇರಿಗಳಲ್ಲಿ ಇದನ್ನು ಅಳವಡಿಸಿದ್ದೇವೆ. ಈ ಹಿಂದೆ ನಕಲಿ ಆಧಾರ್ ಕಾರ್ಡ್‌ ತಯಾರಿಸಿ ತಮ್ಮ ಹೆಸರಿಗೆ ಆಸ್ತಿ ನೋಂದಾಯಿಸಲು ಜನರು ನಡೆಸಿದ ಪ್ರಯತ್ನಗಳ ಹಿನ್ನಲೆಯಲ್ಲಿ ಈ ತೀರ್ಮಾನ ಕೈಗೊಳ್ಳಲಾಗಿದೆ.

ಇದನ್ನು ಸಂಪೂರ್ಣವಾಗಿ ಕೊನೆಗೊಳಿಸಲು ಬಯಸಿದ್ದೇವೆ. ನೋಂದಣಿಗೂ ಮುನ್ನಾ ಆಸ್ತಿ ನೋಂದಾಯಿಸಲು ಬಯಸುವ ವ್ಯಕ್ತಿಯ ಬೆರಳಚ್ಚು ಮತ್ತು ಕಾರ್ಡ್ ನಲ್ಲಿರುವ ಮೊಬೈಲ್ ಸಂಖ್ಯೆಯನ್ನು ಐರಿಸ್ ಸ್ಕ್ಯಾನ್ ಯಂತ್ರ ಪ್ರತಿದಿನ ಪರಿಶೀಲಿಸುತ್ತದೆ ಎಂದು ಹಿರಿಯ ಅಧಿಕಾರಿಯೊಬ್ಬರು TNIE ಗೆ ತಿಳಿಸಿದರು.

ನೋಂದಣಿ ಪ್ರಕ್ರಿಯೆ ಈಗ ಹೆಚ್ಚು ಸಮಯ ತೆಗೆದುಕೊಳ್ಳುತ್ತದೆ ಆದರೆ ನಿಜವಾದ ಆಸ್ತಿ ಮಾಲೀಕರನ್ನು ರಕ್ಷಿಸಲು ಇದನ್ನು ಮಾಡಲಾಗುತ್ತಿದೆ. ಈ ಯಂತ್ರಗಳ ದರ 1 ರಿಂದ 1.5 ಲಕ್ಷ ಆಗಲಿದ್ದು, ನಮ್ಮ ಎಲ್ಲಾ ಕಚೇರಿಗಳಿಗೆ ಹೊಸ ಉಪಕರಣಗಳನ್ನು ಖರೀದಿಸಿದ್ದೇವೆ. ಇದರಲ್ಲಿ UIDAI ಇಲಾಖೆಯ ಸಿಬ್ಬಂದಿ ಭಾಗಿಯಾಗಿಲ್ಲ. ನಮ್ಮ ಸಿಬ್ಬಂದಿಯೊಂದಿಗೆ ಮಾತ್ರ ಮಾಡುತ್ತಿದ್ದೇವೆ ಎಂದು ಅವರು ಹೇಳಿದರು.

ನೋಂದಣಿಯಾಗುತ್ತಿರುವ ಅನಧಿಕೃತ ಆಸ್ತಿಗಳಿಗೆ ಕಡಿವಾಣ ಹಾಕುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆಯಾಗಿ ಸೆ.30ರಿಂದ ಕಾವೇರಿ ಪೋರ್ಟಲ್‌ನಲ್ಲಿ ‘Other’ ವರ್ಗವನ್ನು ಇಲಾಖೆ ತೆಗೆಯಲಿದೆ. ಇದನ್ನು ನೋಂದಾಯಿಸುವ ವೇಳೆ ಕೆಲವು ಸಬ್-ರಿಜಿಸ್ಟ್ರಾರ್‌ಗಳಿಗೆ ಅಕ್ರಮ ಖರೀದಿ ಎಂದು ತಿಳಿದಿದ್ದರೂ, ಅವುಗಳನ್ನು ಇನ್ನೂ ‘Other’ ವರ್ಗದಲ್ಲಿ ಸೇರಿಸುತ್ತಾರೆ.

ಆಸ್ತಿಗಳನ್ನು ಸಾಮಾನ್ಯವಾಗಿ BDA, e-sothu, KHB ಅಥವಾ BBMP ವರ್ಗಗಳ ಅಡಿಯಲ್ಲಿ ಪಟ್ಟಿಮಾಡಲಾಗುತ್ತದೆ. ಈ ಸ್ಲಾಟ್‌ಗಳಲ್ಲಿ ಹೊಂದಿಕೆಯಾಗದವರನ್ನು ‘Other’ ವರ್ಗದಲ್ಲಿ ಪಟ್ಟಿ ಮಾಡುವ ಅಗತ್ಯವಿದೆ. ಕಾನೂನುಬದ್ಧವಾಗಿರುವ ಆಸ್ತಿಗಳಿಗೆ ಪೂರ್ಣ ಮೊತ್ತವನ್ನು ಪಾವತಿಸಲು ಸಾಧ್ಯವಾಗದ ಕಾರಣ ಏಜೆಂಟ್‌ಗಳು ಅವುಗಳನ್ನು ಮಧ್ಯಮ ವರ್ಗ ಅಥವಾ ಕೆಳ ಮಧ್ಯಮ ವರ್ಗಕ್ಕೆ ಮಾರಾಟ ಮಾಡುತ್ತಾರೆ. ಈ ವರ್ಗವನ್ನು ತೆಗೆದಾಗ ರಾಜ್ಯದಲ್ಲಿ ಯಾವುದೇ ಅಕ್ರಮ ಆಸ್ತಿ ನೋಂದಾಯಿಸಲು ಸಾಧ್ಯವಾಗುವುದಿಲ್ಲ. ವ್ಯವಸ್ಥೆಯನ್ನು ಸುವ್ಯವಸ್ಥಿತಗೊಳಿಸುವಲ್ಲಿ ಇದು ಮಹತ್ವದ ಹೆಜ್ಜೆಯಾಗಿದೆ ಎಂದು ಮತೋರ್ವ ಅಧಿಕಾರಿ ಹೇಳಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT