ಬಂಧನಕ್ಕೊಳಗಾಗಿರುವ ಶಾಸಕ ಮುನಿರತ್ನ online desk
ರಾಜ್ಯ

ಬೆದರಿಕೆ, ಜಾತಿ ನಿಂದನೆ ಪ್ರಕರಣದಲ್ಲಿ ಮುನಿರತ್ನಗೆ ಜಾಮೀನು; ಅತ್ಯಾಚಾರ ಪ್ರಕರಣದಲ್ಲಿ ಮತ್ತೆ ಬಂಧನ ಸಾಧ್ಯತೆ

ಮುನಿರತ್ನ ಜೈಲಿನಿಂದ ಬಿಡುಗಡೆಯಾದರೂ ಸಹ ಅತ್ಯಾಚಾರ ಮತ್ತು ಹನಿಟ್ರ್ಯಾಪ್ ಪ್ರಕರಣದಲ್ಲಿ ಮತ್ತೆ ಬಂಧನವಾಗುವ ಸಾಧ್ಯತೆ ಇದೆ.

ಬೆಂಗಳೂರು: ಗುತ್ತಿಗೆದಾರರೊಬ್ಬರಿಗೆ ಜೀವ ಬೆದರಿಕೆ ಮತ್ತು ಜಾತಿ ನಿಂದನೆ ಮಾಡಿದ ಆರೋಪದ ಮೇಲೆ ಬಂಧಿತರಾಗಿರುವ ಬಿಜೆಪಿ ಶಾಸಕ ಎನ್ ಮುನಿರತ್ನ ಅವರಿಗೆ ಶಾಸಕರು/ಸಂಸದರ ವಿಶೇಷ ನ್ಯಾಯಾಲಯ ಗುರುವಾರ ಜಾಮೀನು ಮಂಜೂರು ಮಾಡಿದೆ.

ಜಾಮೀನು ಕೋರಿ ಮುನಿರತ್ನ ಅವರು ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಾಮೂರ್ತಿ ಸಂತೋಷ್ ಗಜಾನನ ಭಟ್ ಅವರು, ಆದೇಶವನ್ನು ಇಂದಿಗೆ ಕಾಯ್ದಿರಿಸಿದ್ದರು.

ಇಂದು ತೀರ್ಪು ಪ್ರಕಟಿಸಿದ ಸಂತೋಷ್ ಗಜಾನನ ಭಟ್ ಅವರು, ಎರಡು ಲಕ್ಷ ರೂ. ಬಾಂಡ್, ಇಬ್ಬರು ಶ್ಯೂರಿಟಿ, ಸಾಕ್ಷ್ಯಾಧಾರ ನಾಶಪಡಿಸಬಾರದು, ಸಾಕ್ಷಿಗಳಿಗೆ ಬೆದರಿಕೆ ಹಾಕದಂತೆ ಷರತ್ತು ವಿಧಿಸಿ ಜಮೀನು ನೀಡಿದ್ದಾರೆ.

ಪ್ರಸ್ತುತ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ಬಂಧಿಯಾಗಿರುವ ಮುನಿರತ್ನ ಪರ ವಕೀಲರು ಜಾಮೀನು ಷರತ್ತು ಪೂರೈಸುತ್ತಿದ್ದು, ಇಂದು ಸಂಜೆ ಜೈಲಿನಿಂದ ಬಿಡುಗಡೆಯಾಗುವ ಸಾಧ್ಯತೆ ಇದೆ. ಆದರೆ ಜೈಲಿನಿಂದ ಬಿಡುಗಡೆಯಾದರೂ ಸಹ ಅತ್ಯಾಚಾರ ಮತ್ತು ಹನಿಟ್ರ್ಯಾಪ್ ಪ್ರಕರಣದಲ್ಲಿ ಮತ್ತೆ ಬಂಧನವಾಗುವ ಸಾಧ್ಯತೆ ಇದೆ.

ಬಿಬಿಎಂಪಿ ಗುತ್ತಿಗೆದಾರ ಚಲುವರಾಜು ಅವರಿಗೆ ಕಿರುಕುಳ ನೀಡಿರುವುದು, ಜಾತಿ ನಿಂದನೆ ಮತ್ತು ಮಹಿಳೆಯ ಗೌರವಕ್ಕೆ ಧಕ್ಕೆ ತಂದ ಆರೋಪದ ಮೇಲೆ ಬೆಂಗಳೂರಿನಲ್ಲಿ ಎರಡು ಪ್ರಕರಣಗಳು ದಾಖಲಾದ ನಂತರ ಸೆಪ್ಟೆಂಬರ್ 14 ರಂದು ಕೋಲಾರದಲ್ಲಿ ಮುನಿರತ್ನ ಅವರನ್ನು ಬಂಧಿಸಲಾಗಿತ್ತು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಮತಗಳ್ಳತನ' ನಡೆದಿರುವುದನ್ನು ರಾಷ್ಟ್ರಪತಿ ದ್ರೌಪದಿ ಮುರ್ಮು ನಿರಾಕರಿಸಲಿಲ್ಲ, ನನಗೆ ಆಶ್ಚರ್ಯವಾಯಿತು: ರಾಹುಲ್ ಗಾಂಧಿ

ಬೆಂಗಳೂರು: ನಮ್ಮ ಮೆಟ್ರೋದಲ್ಲಿ Alt News ಸಹ ಸ್ಥಾಪಕ ಮೊಹಮ್ಮದ್ ಜುಬೈರ್ ಗೆ ಹಿಗ್ಗಾಮುಗ್ಗ ಥಳಿತ?, Video Viral

19ನೇ ಓವರ್‌ನಲ್ಲೇ 250 ರನ್ ಚೇಸ್: ಟಿ20 ಕ್ರಿಕೆಟ್‌ನಲ್ಲಿ ಭಾರತವನ್ನು ಸೋಲಿಸಿ ದಾಖಲೆ ಬರೆದ ವಿಂಡೀಸ್

CJP Protest: ಭಾರತದ ಯುವಕರು ದೆಹಲಿಗೆ ತಲುಪುವುದನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲ: ಚಿರಾಗ್ ಪಾಸ್ವಾನ್

24 ಗಂಟೆ ಇಂಟರ್ನೆಟ್ ಕಟ್, 57 ಮೆಟ್ರೋ ನಿಲ್ದಾಣ ಬಂದ್: ಸಿಜೆಪಿ ಪ್ರತಿಭಟನೆಗೂ ಮುನ್ನ ದೆಹಲಿ ಹೈ ಅಲರ್ಟ್