ದಿನೇಶ್ ಗುಂಡೂರಾವ್ ಮತ್ತು ಪತ್ನಿ ತಬಸ್ಸುಮ್ 
ರಾಜ್ಯ

ವಾಣಿಜ್ಯ ಕಟ್ಟಡ ನಕ್ಷೆ ಮಂಜೂರಾತಿಗೆ ಭಾರಿ ಶುಲ್ಕ? BBMP ವಿರುದ್ಧ ಹೈಕೋರ್ಟ್‌ ಮೊರೆ ಹೋದ ದಿನೇಶ್ ಗುಂಡೂರಾವ್ ದಂಪತಿ!

ಆರ್.ಟಿ. ನಗರದ ಮಠದಹಳ್ಳಿಯಲ್ಲಿ ನಮ್ಮ ಒಡೆತನದಲ್ಲಿ 608.21 ಚದರ ಅಡಿ ಆಸ್ತಿ ಇದೆ. ಇದಕ್ಕೆ ಬಿಬಿಎಂಪಿ ಖಾತೆಯನ್ನೂ ನೀಡಿದೆ. ಈ ಆಸ್ತಿಗೆ ಚಾಲ್ತಿ ತೆರಿಗೆ ಕಟ್ಟಲಾಗಿದೆ. ಈ ಜಾಗದಲ್ಲಿ ವಾಣಿಜ್ಯ ಕಟ್ಟಡ ನಿರ್ಮಾಣಕ್ಕೆ ನಕ್ಷೆ ಮಂಜೂರಾತಿ ಕೋರಿ ಮನವಿ ಸಲ್ಲಿಸಿದ್ದೆವು.

ಬೆಂಗಳೂರು: ವಾಣಿಜ್ಯ ಸಂಕೀರ್ಣ ನಿರ್ಮಿಸಲು ವಿವಿಧ ಸೆಸ್ ವಿಧಿಸಿ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) 2022ರಲ್ಲಿ ನೀಡಿದ್ದ ಡಿಮ್ಯಾಂಡ್ ನೋಟಿಸ್ ಪ್ರಶ್ನಿಸಿ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಮತ್ತು ಅವರ ಪತ್ನಿ ತಬಸ್ಸುಮ್ ಕರ್ನಾಟಕ ಹೈಕೋರ್ಟ್ ಮೆಟ್ಟಿಲೇರಿದ್ದಾರೆ.

ಈ ಸಂಬಂಧ ಸಚಿವ ದಿನೇಶ್ ಗುಂಡೂರಾವ್ ಹಾಗೂ ಅವರ ಪತ್ನಿ ತಬಸ್ಸುಮ್ ದಿನೇಶ್‌ ರಾವ್ ಸಲ್ಲಿಸಿರುವ ರಿಟ್‌ ಅರ್ಜಿಯನ್ನು ನ್ಯಾಯಮೂರ್ತಿ ಅಶೋಕ್ ಎಸ್.ಕಿಣಗಿ ಅವರಿದ್ದ ಏಕಸದಸ್ಯ ನ್ಯಾಯಪೀಠ ವಿಚಾರಣೆ ನಡೆಸಿತು. ನಗರಾಭಿವೃದ್ಧಿ ಇಲಾಖೆ ಕಾರ್ಯದರ್ಶಿ, ಸಂಸದೀಯ ವ್ಯವಹಾರ ಹಾಗೂ ಶಾಸನ ರಚನಾ ಇಲಾಖೆ ಕಾರ್ಯದರ್ಶಿ, ಬಿಬಿಎಂಪಿ ಆಯುಕ್ತ, ಬಿಬಿಎಂಪಿ ಪೂರ್ವ ವಿಭಾಗದ ನಗರ ಯೋಜನಾ ಸಹಾಯಕ ನಿರ್ದೇಶಕರಿಗೆ ನೋಟಿಸ್ ಜಾರಿಗೊಳಿಸಲು ಆದೇಶಿಸಿದ ನ್ಯಾಯಪೀಠ, ಆಕ್ಷೇಪಣೆ ಸಲ್ಲಿಸುವಂತೆ ಸೂಚಿಸಿ ವಿಚಾರಣೆ ಮುಂದೂಡಿದೆ.

ಆರ್.ಟಿ. ನಗರದ ಮಠದಹಳ್ಳಿಯಲ್ಲಿ ನಮ್ಮ ಒಡೆತನದಲ್ಲಿ 608.21 ಚದರ ಅಡಿ ಆಸ್ತಿ ಇದೆ. ಇದಕ್ಕೆ ಬಿಬಿಎಂಪಿ ಖಾತೆಯನ್ನೂ ನೀಡಿದೆ. ಈ ಆಸ್ತಿಗೆ ಚಾಲ್ತಿ ತೆರಿಗೆ ಕಟ್ಟಲಾಗಿದೆ. ಈ ಜಾಗದಲ್ಲಿ ವಾಣಿಜ್ಯ ಕಟ್ಟಡ ನಿರ್ಮಾಣಕ್ಕೆ ನಕ್ಷೆ ಮಂಜೂರಾತಿ ಕೋರಿ ಮನವಿ ಸಲ್ಲಿಸಿದ್ದೆವು. ಆದರೆ, ನಕ್ಷೆ ಮಂಜೂರಾತಿ ನೀಡಲು ನೆಲ ಬಾಡಿಗೆ ಶುಲ್ಕ, ಅದರ ಮೇಲೆ ಶೇ 18ರಷ್ಟು ಜಿಎಸ್‌ಟಿ, ಭದ್ರತಾ ಠೇವಣಿ, ಕಟ್ಟಡ ಹಾಗೂ ನಿವೇಶನ ಅಭಿವೃದ್ಧಿ ಶುಲ್ಕ, ಕೆರೆ ಜೀರ್ಣೋದ್ಧಾರ ಶುಲ್ಕ, ವರ್ತುಲ ರಸ್ತೆ ಶುಲ್ಕ, ಕೊಳೆಗೇರಿ ಅಭಿವೃದ್ಧಿ ಸೆಸ್ ಸೇರಿದಂತೆ ವಿವಿಧ ಬಗೆಯ 41.55 ಲಕ್ಷ ಮೊತ್ತದ ಶುಲ್ಕ, ತೆರಿಗೆ, ಸೆಸ್‌ಗಳು ಹಾಗೂ 3.46 ಲಕ್ಷ ಕಾರ್ಮಿಕರ ಸೆಸ್ ಪಾವತಿಸುವಂತೆ ಬಿಬಿಎಂಪಿ 2024ರ ಆಗಸ್ಟ್ 29ರಂದು ಡಿಮ್ಯಾಂಡ್ ನೋಟಿಸ್ ಜಾರಿಗೊಳಿಸಿದೆ. ಇದು ಕಾನೂನು ಬಾಹಿರ’ ಎಂದು ಅರ್ಜಿದಾರರು ದೂರಿದ್ದಾರೆ.

ಕರ್ನಾಟಕ ಪೌರ ನಿಗಮಗಳು ಹಾಗೂ ಇತರೆ ಕೆಲವು ಕಾನೂನುಗಳ (ತಿದ್ದುಪಡಿ) ಕಾಯ್ದೆ-2021 ಅನ್ನು ಅಸಾಂವಿಧಾನಿಕ ಎಂದು ಘೋಷಿಸಬೇಕು. ಕರ್ನಾಟಕ ಪಟ್ಟಣ ಹಾಗೂ ನಗರ ಯೋಜನಾ ಕಾಯ್ದೆ–2004ರ ಕಲಂ 18-ಎ ರದ್ದುಪಡಿಸಬೇಕು. ಬಿಬಿಎಂಪಿ ಜಾರಿಗೊಳಿಸಿರುವ ಡಿಮ್ಯಾಂಡ್ ನೋಟಿಸ್ ರದ್ದುಪಡಿಸಬೇಕು. ನಮ್ಮ ಒಡೆತನದ ಆಸ್ತಿಯಲ್ಲಿ ವಾಣಿಜ್ಯ ಕಟ್ಟಡ ನಿರ್ಮಿಸಲು ಯಾವುದೇ ಷರತ್ತು ಹಾಗೂ ತೆರಿಗೆ, ಶುಲ್ಕಗಳನ್ನು ವಿಧಿಸದೆ ನಕ್ಷೆ ಮಂಜೂರು ಮಾಡಲು ಬಿಬಿಎಂಪಿಗೆ ನಿರ್ದೇಶಿಸಬೇಕು’ ಎಂದು ಅರ್ಜಿದಾರರು ಮನವಿ ಮಾಡಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಪಾಕಿಸ್ತಾನ-ಅಫ್ಘಾನಿಸ್ತಾನ ಯುದ್ಧ: 58 ಪಾಕ್ ಸೈನಿಕರು ಹತ, ತಾಲಿಬಾನ್ ಸರ್ಕಾರದ 'ದೊಡ್ಡ' ಹೇಳಿಕೆ

ಯುದ್ಧ ತೀವ್ರ: ಪಾಕಿಸ್ತಾನದ ಏರ್ ಸ್ಟ್ರೈಕ್ ಗೆ ಅಫ್ಘಾನಿಸ್ತಾನದಿಂದ ಕ್ಷಿಪಣಿ ದಾಳಿ ಉತ್ತರ

'ಬ್ಲೂ ಸ್ಟಾರ್ ಆಪರೇಷನ್' ಕಾರ್ಯಾಚರಣೆ ತಪ್ಪಿಗೆ ಇಂದಿರಾ ಗಾಂಧಿ ಪ್ರಾಣ ತೆತ್ತರು: ಪಿ ಚಿದಂಬರಂ

ದೇಶದ ಮುಸ್ಲಿಂರನ್ನು ಗುರಿಯಾಗಿಸಿಕೊಳ್ಳುವ ಬಿಜೆಪಿ ಅಫ್ಘಾನಿಸ್ತಾನದ ಜೊತೆ ಸಂಬಂಧ ಬೆಳೆಸುವುದು 'ಬೂಟಾಟಿಕೆ': ಮೆಹಬೂಬಾ ಮುಫ್ತಿ

20 ವರ್ಷ ಸಾಕಿ ಬೆಳೆಸಿದ 'ಅಶ್ವತ್ಥ'ಕ್ಕೆ ಕಿಡಿಗೇಡಿಗಳ ಕೊಡಲಿ ಪೆಟ್ಟು, ಬಿಕ್ಕಿ ಬಿಕ್ಕಿ ಅತ್ತ 'ವೃಕ್ಷಮಾತೆ', ಇಬ್ಬರ ಬಂಧನ, video viral

SCROLL FOR NEXT