ಸಾಂದರ್ಭಿಕ ಚಿತ್ರ 
ರಾಜ್ಯ

ದಾವಣಗೆರೆ: ಗಣೇಶ ಮೂರ್ತಿ ಮೆರವಣಿಗೆ ವೇಳೆ ಕಲ್ಲು ತೂರಾಟ; 30 ಮಂದಿ ಬಂಧನ

ಕೂಡಲೇ ಪರಿಸ್ಥಿತಿ ನಿಯಂತ್ರಿಸಿ ಗಣೇಶ ಮೂರ್ತಿಯನ್ನು ಶಾಂತಿಯುತವಾಗಿ ವಿಸರ್ಜನೆಗೊಳಿಸಲಾಯಿತು. ಸೂಕ್ತ ಭದ್ರತಾ ಪಡೆಗಳನ್ನು ನಿಯೋಜಿಸಿ ಪರಿಸ್ಥಿತಿಯನ್ನು ಸಂಪೂರ್ಣವಾಗಿ ಹತೋಟಿಗೆ ತರಲಾಯಿತು ಎಂದು ದಾವಣಗೆರೆ ಪೊಲೀಸ್ ವರಿಷ್ಠಾಧಿಕಾರಿ ಉಮಾ ಪ್ರಶಾಂತ್ ತಿಳಿಸಿದ್ದಾರೆ.

ದಾವಣಗೆರೆ: ಗಣೇಶ ಮೂರ್ತಿ ವಿಸರ್ಜನೆ ಮೆರವಣಿಗೆ ವೇಳೆ ನಡೆದ ಕಲ್ಲು ತೂರಾಟದಲ್ಲಿ ಇಬ್ಬರು ಕಾನ್‌ಸ್ಟೆಬಲ್‌ಗಳು ಗಾಯಗೊಂಡ ಘಟನೆಗೆ ಸಂಬಂಧಿಸಿದಂತೆ ಮೂವತ್ತು ಮಂದಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಪೊಲೀಸರ ಪ್ರಕಾರ, ಮೆರವಣಿಗೆ ಸುಗಮವಾಗಿ ಸಾಗುತ್ತಿದ್ದು, ನಿನ್ನೆ ಸಂಜೆ ಚಾಮರಾಜಪೇಟೆ ವೃತ್ತದ ಬಳಿ ಸಾಗುತ್ತಿದ್ದಾಗ ಕಲ್ಲು ತೂರಾಟ ಆರಂಭವಾಯಿತು. ಕೆಲವರು ಘೋಷಣೆಗಳನ್ನು ಕೂಗಿದ್ದರಿಂದ ಎರಡು ಗುಂಪುಗಳ ನಡುವೆ ಮಾತಿನ ಚಕಮಕಿ ನಡೆಯಿತು. ಆಗ ಕೆಲ ದುಷ್ಕರ್ಮಿಗಳು ಕಲ್ಲು ತೂರಾಟ ನಡೆಸಿದ್ದು, ಇಬ್ಬರು ಪೇದೆಗಳಿಗೆ ಗಾಯಗಳಾಗಿವೆ.

ಕೂಡಲೇ ಪರಿಸ್ಥಿತಿ ನಿಯಂತ್ರಿಸಿ ಗಣೇಶ ಮೂರ್ತಿಯನ್ನು ಶಾಂತಿಯುತವಾಗಿ ವಿಸರ್ಜನೆಗೊಳಿಸಲಾಯಿತು. ಸೂಕ್ತ ಭದ್ರತಾ ಪಡೆಗಳನ್ನು ನಿಯೋಜಿಸಿ ಪರಿಸ್ಥಿತಿಯನ್ನು ಸಂಪೂರ್ಣವಾಗಿ ಹತೋಟಿಗೆ ತರಲಾಯಿತು ಎಂದು ದಾವಣಗೆರೆ ಪೊಲೀಸ್ ವರಿಷ್ಠಾಧಿಕಾರಿ ಉಮಾ ಪ್ರಶಾಂತ್ ತಿಳಿಸಿದ್ದಾರೆ.

ಘಟನೆಗೆ ಸಂಬಂಧಿಸಿದಂತೆ ಐದು ಪ್ರಕರಣಗಳನ್ನು ದಾಖಲಿಸಲಾಗಿದ್ದು 30 ಜನರನ್ನು ಬಂಧಿಸಲಾಗಿದೆ ಎಂದು ಉಮಾ ಪ್ರಶಾಂತ್ ಹೇಳಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಬೆಂಗಳೂರಲ್ಲಿ ಆಪರೇಷನ್‌ ಫುಟ್‌ಪಾತ್‌: ಇದುವರೆಗೆ 9,878 ಅತಿಕ್ರಮಣ ತೆರವು; CM ಡಿಕೆಶಿ ಸಿಟಿ ರೌಂಡ್ಸ್!

Kumbh Mela viral girl ಮೊನಾಲಿಸಾ 'ನಾಪತ್ತೆ'​: ಪೊಲೀಸ್ ರಕ್ಷಣೆ ಹಿಂಪಡೆದ ಕೇರಳ ಹೈಕೋರ್ಟ್

BJP ಆರೋಪಗಳ ಬೆನ್ನಲ್ಲೇ ಮಂಗಳೂರಿನಲ್ಲಿ 8 ಬಾಂಗ್ಲಾದೇಶಿ ಪ್ರಜೆಗಳ ಬಂಧನ; ಗಡಿಪಾರಿಗೆ ಸಿದ್ಧತೆ

ವಿಜಯಪುರದಲ್ಲಿ ಭೀಕರ ಅಪಘಾತ: ಡಿವೈಡರ್‌ಗೆ ಕಾರು ಡಿಕ್ಕಿ; ಇಬ್ಬರು ಪುತ್ರರ ಜೊತೆ ತಾಯಿ ಸ್ಥಳದಲ್ಲೇ ಸಾವು!

'ಮಮತಾರಂತೆ ನಾನು ದುರ್ಬಲ, ಹೇಡಿ CM ಅಲ್ಲ': ಶಾಸಕ ಹುಮಾಯೂನ್ ಕಬೀರ್​ ಬೆವರಿಳಿಸಿದ ಸುವೇಂದು ಅಧಿಕಾರಿ