ರಾಜ್ಯ

'ಗೋರಿಪಾಳ್ಯ ಪಾಕಿಸ್ತಾನದಲ್ಲಿದೆಯಾ?': ನ್ಯಾಯಾಧೀಶರ ಪ್ರಶ್ನೆ

ಪ್ರಕರಣ ಒಂದರ ವಿಚಾರಣೆ ವೇಳೆ ಮಾತನಾಡಿದ ಕರ್ನಾಟಕ ಹೈಕೋರ್ಟ್​ ನ್ಯಾಯಮೂರ್ತಿಗಳಾದ ವೇದವ್ಯಾಸಾಚಾರ್ ಶ್ರೀಶಾನಂದ ಅವರು ಈ ಹೇಳಿಕೆ ನೀಡಿದ್ದು, ವಿರೋಧಗಳು ವ್ಯಕ್ತವಾಗುತ್ತಿವೆ.

ಬೆಂಗಳೂರು: ಮುಸ್ಲಿಂ ಧರ್ಮದ ಜನರು ಹೆಚ್ಚಾಗಿ ವಾಸಿಸುವ ಗೋರಿಪಾಳ್ಯವನ್ನು ಪಾಕಿಸ್ತಾನವೇ ಎಂದು ಪ್ರಶ್ನಿಸುವ ಮೂಲಕ ಹೈಕೋರ್ಟ್​ ನ್ಯಾಯಮೂರ್ತಿಯೊಬ್ಬರು ವಿವಾದವನ್ನು ಹುಟ್ಟುಹಾಕಿದ್ದು, ವ್ಯಾಪಕ ಆಕ್ರೋಶ ವ್ಯಕ್ತವಾಗುತ್ತಿದೆ.

ಪ್ರಕರಣ ಒಂದರ ವಿಚಾರಣೆ ವೇಳೆ ಮಾತನಾಡಿದ ಕರ್ನಾಟಕ ಹೈಕೋರ್ಟ್​ ನ್ಯಾಯಮೂರ್ತಿಗಳಾದ ವೇದವ್ಯಾಸಾಚಾರ್ ಶ್ರೀಶಾನಂದ ಅವರು ಈ ಹೇಳಿಕೆ ನೀಡಿದ್ದು, ವಿರೋಧಗಳು ವ್ಯಕ್ತವಾಗುತ್ತಿವೆ. ನ್ಯಾಯಾಧೀಶರು ಹೇಳಿಕೆ ನೀಡಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ​ ವೈರಲ್​ ಆಗುತ್ತಿದ್ದು, ಪರ-ವಿರೋಧದ ಮಾತುಗಳು ಕೇಳಿ ಬರುತ್ತಿವೆ.

ಪ್ರಕರಣವೊಂದರ ವಿಚಾರಣೆ ವೇಳೆ ನ್ಯಾಯಾಧೀಶರು, ಮೈಸೂರು ರಸ್ತೆಯ ಮೇಲ್ಸೇತುವೆಗೆ ಹೋಗಿ, ಪ್ರತಿ ಆಟೋ ರಿಕ್ಷಾದಲ್ಲಿ 10 ಜನರು ಇರುತ್ತಾರೆ. ಇದು ಅನ್ವಯಿಸುವುದಿಲ್ಲ. ಏಕೆಂದರೆ ಗೋರಿಪಾಳ್ಯದಿಂದ ಮಾರುಕಟ್ಟೆಯವರೆಗಿನ ಮೈಸೂರು ರಸ್ತೆಯ ಮೇಲ್ಸೇತುವೆ ಪಾಕಿಸ್ತಾನದಲ್ಲಿದೆ, ಭಾರತದಲ್ಲಿಲ್ಲ. ಇದು ವಾಸ್ತವ. ನೀವು ಎಷ್ಟೇ ಕಟ್ಟುನಿಟ್ಟಿನ ಪೊಲೀಸ್ ಅಧಿಕಾರಿಯನ್ನು ಇರಿಸಿದರೂ ಅಷ್ಟೇ...ಎಂದು ಹೇಳಿದ್ದಾರೆ.

ನ್ಯಾಯಾಧೀಶರ ಈ ಹೇಳಿಕೆಗೆ ವಿರೋಧಗಳು ವ್ಯಕ್ತವಾಗುತ್ತಿವೆ. ಸಾಂವಿಧಾನಿಕ ಹುದ್ದೆಯಲ್ಲಿರುವ, ಅದರಲ್ಲೂ ಜಾತ್ಯತೀತವಾಗಿ ವರ್ತಿಸಬೇಕಾದ ನ್ಯಾಯಾಧೀಶರು ಇಂತಹ ಹೇಳಿಕೆ ನೀಡುವುದು ಅವರ ಹುದ್ದೆ ಮೇಲಿನ ಭರವಸೆಯನ್ನು ಕಳಚುತ್ತದೆ ಎಂಬ ಟೀಕೆಗಳು ವ್ಯಕ್ತವಾಗುತ್ತಿವೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

TMCಗೆ ಸೆಡ್ಡು ಹೊಡೆದ ಬಂಡಾಯ ಸಂಸದರಿಗೆ ಶಾಕ್‌: 20 ಮಂದಿಗೆ ಲೋಕಸಭಾ ಸಚಿವಾಲಯ ನೋಟಿಸ್‌, 7 ದಿನಗಳೊಳಗೆ ಉತ್ತರಿಸುವಂತೆ ಸೂಚನೆ..!

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!

"ಮದುವೆ ಅಂದ್ರೆ ಗುಲಾಮಗಿರಿಯಲ್ಲ, ಮನೆಗೆಲಸ ಮಾಡು-ಅತ್ತೆ-ಮಾವನ ನೋಡ್ಕೋ ಅನ್ನೋಕೆ ಗಂಡನಿಗೆ ಹಕ್ಕಿಲ್ಲ": ಹೈಕೋರ್ಟ್ ಮಹತ್ವದ ತೀರ್ಪು..!

ಬಿಡದಿ ಟೌನ್‌ಶಿಪ್‌ ಯೋಜನೆ: ರೈತರ ಭೂಮಿ ಕಸಿಯಲ್ಲ, denotification ಮಾಡಲ್ಲ- ಸಿಎಂ ಡಿಕೆ. ಶಿವಕುಮಾರ್ ಸ್ಪಷ್ಟನೆ