ದಾವಣಗೆರೆ ವೆಂಕಾ ಭೋವಿ ಕಾಲೋನಿಯಲ್ಲಿ ಪ್ರತಿಷ್ಠಾಪಿಸಲಾಗಿದ್ದ ಗಣೇಶ ಮೂರ್ತಿಯ ನಿಮಜ್ಜನ ಮೆರವಣಿಗೆ ಮೇಲೆ ಗುರುವಾರ ಕಲ್ಲು ತೂರಾಟ ನಡೆದಿದ್ದು, ಉದ್ವಿಗ್ನ ಸ್ಥಿತಿ ನಿರ್ಮಾಣವಾಗಿದೆ. 
ರಾಜ್ಯ

ದಾವಣಗೆರೆ: ಗಣೇಶ ವಿಸರ್ಜನೆ ವೇಳೆ ಕಲ್ಲು ತೂರಾಟ; ಪರಿಸ್ಥಿತಿ ಉದ್ವಿಗ್ನ, ಪೊಲೀಸ್ ಸಿಬ್ಬಂದಿಗೂ ಗಾಯ

ಘಟನೆಯಲ್ಲಿ ಪೊಲೀಸ್ ಇನ್ಸ್ ಪೆಕ್ಟರ್ ಮತ್ತು ಸಬ್ ಇನ್ಸ್ ಪೆಕ್ಟರ್ ಸೇರಿದಂತೆ ನಾಲ್ವರು ಪೊಲೀಸ್ ಸಿಬ್ಬಂದಿಗೆ ಗಾಯಗಳಾಗಿದ್ದು, ಹಲವಾರು ಮನೆಗಳು ಮತ್ತು ವಾಹನಗಳ ಕಿಟಕಿ ಗಾಜುಗಳು ಹಾನಿಗೊಳಗಾಗಿವೆ.

ದಾವಣಗೆರೆ: ದಾವಣಗೆರೆ ವೆಂಕಾ ಭೋವಿ ಕಾಲೋನಿಯಲ್ಲಿ ಗಣೇಶ ವಿಸರ್ಜನೆ ವೇಳೆ ಕಲ್ಲುತೂರಾಟ ನಡೆದಿದ್ದು, ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದೆ.

ಘಟನೆಯಲ್ಲಿ ಪೊಲೀಸ್ ಇನ್ಸ್ ಪೆಕ್ಟರ್ ಮತ್ತು ಸಬ್ ಇನ್ಸ್ ಪೆಕ್ಟರ್ ಸೇರಿದಂತೆ ನಾಲ್ವರು ಪೊಲೀಸ್ ಸಿಬ್ಬಂದಿಗೆ ಗಾಯಗಳಾಗಿದ್ದು, ಹಲವಾರು ಮನೆಗಳು ಮತ್ತು ವಾಹನಗಳ ಕಿಟಕಿ ಗಾಜುಗಳು ಹಾನಿಗೊಳಗಾಗಿವೆ.

ಇತ್ತೀಚೆಗೆ ಮಂಡ್ಯ ಜಿಲ್ಲೆಯ ನಾಗಮಂಗಲದಲ್ಲಿ ನಡೆದ ಪ್ರತಿಭಟನೆ ವೇಳೆ ಸತೀಶ್ ಪೂಜಾರಿ ನೀಡಿದ ಪ್ರಚೋದನಕಾರಿ ಹೇಳಿಕೆಯಿಂದ ಈ ಅಶಾಂತಿ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ಹೇಳಲಾಗುತ್ತಿದೆ.

ಗಣೇಶ ಮೂರ್ತಿ ಮೆರವಣಿಗೆ ವೇಲೆ ಅನ್ಯ ಧರ್ಮದ ಯುವಕನೊಬ್ಬ ಬಹಿರಂಗವಾಗಿ ಸವಾಲು ಹಾಕಿದ್ದು, ಆಕ್ಷೇಪಾರ್ಹ ಭಾಷೆ ಬಳಸಿ, ಬೆದರಿಕೆ ಹಾಕಿದ್ದಾನೆ.

ಈ ವಿಚಾರವನ್ನು ಗಂಭೀರವಾಗಿ ಪರಿಗಣಿಸಿದ ಹಿಂದೂ ಸಂಘಟನೆಗಳು ಜಗಳೂರು ರಸ್ತೆಯ ವೆಂಕಟೇಶ್ವರ ವೃತ್ತದಲ್ಲಿ ಜಮಾಯಿಸಿದ್ದಾರೆ.ಡಿಜೆ ಸೆಟ್‌ನೊಂದಿಗೆ ಅರಳಿಮರದ ವೃತ್ತದ ಬಳಿಕ ಮೆರವಣಿಗೆ ಆಗಮಿಸುತ್ತಿದ್ದಂತೆ ಘರ್ಷಣೆ ಶುರುವಾಗಿದೆ. ಕೆಲವರು ಕಲ್ಲು ತೂರಾಟ ನಡೆಸಿದ್ದು, ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದೆ.

ಮತ್ತಷ್ಟು ಹಿಂಸಾಚಾರದ ಸಾಧ್ಯತೆಯನ್ನು ಗಮಿಸಿದ ಪೊಲೀಸರು, ತಕ್ಷಣವೇ ಡಿಜೆ ನಿಲ್ಲಿಸಿ ಗಣೇಶ ಮೂರ್ತಿಯನ್ನು ಸುರಕ್ಷಿತವಾಗಿ ನಿಮಜ್ಜನಕ್ಕೆ ಅನುಕೂಲ ಮಾಡಿಕೊಟ್ಟರು. ಆದಾಗ್ಯೂ, ಘರ್ಷಣೆ ಏರ್ಪಟ್ಟು ಹಲವಾರು ಮನೆಗಳು ಮತ್ತು ವಾಹನಗಳಿಗೆ ಹಾನಿಯಾಗಿದೆ.

ಪೊಲೀಸ್ ವರಿಷ್ಠಾಧಿಕಾರಿ (ಎಸ್‌ಪಿ) ಉಮಾ ಪ್ರಶಾಂತ್ ಅವರು ಮಾತನಾಡಿ, ಯುವಕನೊಬ್ಬ ಪ್ರಚೋದನಕಾರಿ ಹೇಳಿಕೆ ನೀಡಿದ ಹಿನ್ನೆಲೆಯಲ್ಲಿ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದ್ದು, ಕಲ್ಲು ತೂರಾಟ ನಡೆದಿದೆ. ಗಣೇಶ ಮೂರ್ತಿಯನ್ನು ಸುರಕ್ಷಿತವಾಗಿ ನಿಮಜ್ಜನ ಮಾಡಲಾಗಿದೆ. ಸ್ಥಳದಲ್ಲಿ ಪೊಲೀಸ್ ಗಸ್ತು ಹೆಚ್ಚಿಸಲಾಗಿದ್ದು, ನಿಷೇಧಾಜ್ಞೆಗೆ ಜಿಲ್ಲಾಧಿಕಾರಿಗಳು ಮನವಿ ಮಾಡಿದ್ದಾರೆ. ಇದೀಗ ಪರಿಸ್ಥಿತಿ ನಿಯಂತ್ರಣದಲ್ಲಿದೆ. ತಪ್ಪಿತಸ್ಥರ ವಿರುದ್ಧ ಪ್ರಕರಣ ದಾಖಲಿಸಲಾಗುವುದು ಎಂದು ಹೇಳಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ-ಭಗವಂತನ ಸಂಬಂಧ ಇದೆ; RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿ.ಕೆ ಶಿವಕುಮಾರ್; Video

Tariff ಬೆನ್ನಲ್ಲೇ ಅಮೆರಿಕ ಅಧ್ಯಕ್ಷರಿಗೆ ಯುದ್ಧೋನ್ಮಾದ: "ಯುದ್ಧ ಇಲಾಖೆ" ಬಗ್ಗೆ ಟ್ರಂಪ್ ಒಲವು!

ಭಾರತದ ಮೇಲೆ ಶೇ. 50 ರಷ್ಟು ಸುಂಕ ನಾಳೆ ಜಾರಿ, ಅಮೆರಿಕ ಕರಡು ಸೂಚನೆ; ಔಷಧ, ಎಲೆಕ್ಟ್ರಾನಿಕ್ಸ್‌ ವಸ್ತುಗಳಿಗೆ ವಿನಾಯಿತಿ

ಸ್ಟಾಲಿನ್ ಶ್ಲಾಘಿಸಿದ ಭಗವಂತ್ ಮಾನ್, ಪಂಜಾಬ್ ನಲ್ಲೂ ಉಪಾಹಾರ ಯೋಜನೆ ಜಾರಿ ಬಗ್ಗೆ ಚಿಂತನೆ

Ragigudda Metro ನಿಲ್ದಾಣದಲ್ಲಿ ತಪ್ಪಿದ ದುರಂತ, ಆಯತಪ್ಪಿ ಹಳಿ ಮೇಲೆ ಬಿದ್ದ ಸಿಬ್ಬಂದಿ!... ಮುಂದೇನಾಯ್ತು? Video

SCROLL FOR NEXT