ರಾಜ್ಯ

ಹಾಸನ: ಹೃದಯಾಘಾತದಿಂದ 11 ವರ್ಷದ ಬಾಲಕ ಸಾವು!

ಇದ್ದಕ್ಕಿದ್ದಂತೆ ಎದೆನೋವು ಕಾಣಿಸಿಕೊಂಡಿದೆ. ಟಿವಿ ನೋಡುತ್ತಲೇ ಕುಸಿದು ಬಿದ್ದ ಮಗನನ್ನು ಮಾತನಾಡಿಸಲು ಮನೆಯವರು ಪ್ರಯತ್ನಿಸಿದ್ದು, ಏನು ಮಾತನಾಡದೆ ಇರೋದನ್ನು ಗಮನಿಸಿ ಪೋಷಕರು ಕೂಡಲೇ ಆಸ್ಪತ್ರೆಗೆ ದಾಖಲಿಸುವ ಕೆಲಸ ಮಾಡಿದ್ದಾರೆ.

ಹಾಸನ : 11 ವರ್ಷದ ಬಾಲಕ ಹೃದಯಘಾತದಿಂದ ಮೃತಪಟ್ಟ ಘಟನೆ ಹಾಸನ ಜಿಲ್ಲೆಯ ಆಲೂರು ತಾಲ್ಲೂಕಿನ ಚನ್ನಾಪುರ ಗ್ರಾಮದಲ್ಲಿ ನಡೆದಿದೆ. ಮೃತಪಟ್ಟ ಬಾಲಕನನ್ನು ಸಚಿನ್ ಎಂದು ಗುರುತಿಸಲಾಗಿದೆ.

ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಎಂಟನೇ ತರಗತಿ ಓದುತ್ತಿದ್ದ ಸಚಿನ್, ಮನೆಯಲ್ಲಿ ಟಿವಿ ನೋಡುತ್ತಿದ್ದ ವೇಳೆ ಹೃದಯಾಘಾತವಾಗಿದೆ. ಇದ್ದಲ್ಲಿಯೇ ಸಚಿನ್ ಕೊನೆಯುಸಿರೆಳೆದಿದ್ದಾರೆ. ನಿನ್ನೆ ಘಟನೆ ನಡೆದಿದೆ. ಇದ್ದಕ್ಕಿದ್ದಂತೆ ಎದೆನೋವು ಕಾಣಿಸಿಕೊಂಡಿದೆ. ಟಿವಿ ನೋಡುತ್ತಲೇ ಕುಸಿದು ಬಿದ್ದ ಮಗನನ್ನು ಮಾತನಾಡಿಸಲು ಮನೆಯವರು ಪ್ರಯತ್ನಿಸಿದ್ದು, ಏನು ಮಾತನಾಡದೆ ಇರೋದನ್ನು ಗಮನಿಸಿ ಪೋಷಕರು ಕೂಡಲೇ ಆಸ್ಪತ್ರೆಗೆ ದಾಖಲಿಸುವ ಕೆಲಸ ಮಾಡಿದ್ದಾರೆ. ಆದರೆ ಆಲೂಕು ಸರ್ಕಾರಿ ಆಸ್ಪತ್ರೆಗೆ ಕರೆತರುವ ಮುನ್ನವೇ ಬಾಲಕ ಸಾವನ್ನಪ್ಪಿದ್ದ ಎಂದು ವೈದ್ಯರು ಪೋಷಕರು ತಿಳಿಸಿದ್ದಾರೆ.

ಚಿಕ್ಕವಯಸ್ಸಿನಲ್ಲೇ ಬಾಲಕ ಹೃದಯಾಘಾತಕ್ಕೆ ಬಲಿಯಾಗಿರುವುದು, ಸಾರ್ವಜನಿಕ ವಲಯದಲ್ಲಿ ಆತಂಕ ಮನೆ ಮಾಡುವಂತೆ ಮಾಡಿದೆ. ಮಗನನ್ನು ಕಳೆದುಕೊಂಡ ಪೋಷಕರ ಆಕ್ರಂದನ ಮುಗಿಲುಮುಟ್ಟಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಭಯೋತ್ಪಾದನೆಯನ್ನು ಯಾವುದೂ ಸಮರ್ಥಿಸಲು ಸಾಧ್ಯವಿಲ್ಲ, ಭಾರತ ಇಸ್ರೇಲ್ ಜೊತೆ ದೃಢವಾಗಿ ನಿಲ್ಲುತ್ತದೆ': ನೆಸ್ಸೆಟ್‌ನಲ್ಲಿ ಪ್ರಧಾನಿ ಮೋದಿ ಭಾಷಣ

'ನ್ಯಾಯಾಂಗದಲ್ಲಿ ಭ್ರಷ್ಟಾಚಾರ' ಪಾಠ: ಸುಪ್ರೀಂ ಚಾಟಿ ನಂತರ ವೆಬ್‌ಸೈಟ್‌ನಿಂದ ಪಠ್ಯಪುಸ್ತಕ ತೆಗೆದ NCERT

T20 World Cup 2026: ಶ್ರೀಲಂಕಾ ವಿರುದ್ಧ ನ್ಯೂಜಿಲ್ಯಾಂಡ್​ಗೆ 61 ರನ್ ಗಳ ಭರ್ಜರಿ ಗೆಲುವು

India to Israel: ಪ್ರಧಾನಿ ಮೋದಿ ಪಯಣಿಸಿದ್ದ Air India ವಿಮಾನ ವಿಶ್ವದಲ್ಲೇ ಅತಿ ಹೆಚ್ಚು ಟ್ರ್ಯಾಕ್: Flightradar24

Ranji Trophy final: ಕರ್ನಾಟಕ ವಿರುದ್ಧ ಜಮ್ಮು ಮತ್ತು ಕಾಶ್ಮೀರ ಬೃಹತ್ ಮೊತ್ತ; 527/6

SCROLL FOR NEXT