ಸಂಗ್ರಹ ಚಿತ್ರ 
ರಾಜ್ಯ

Video: ನಾನ್ಯಾರು ಗೊತ್ತಾ? ಡಿಸಿಪಿ ಮಗ, ಸಿಎಂ ಸಂಬಂಧಿ ಎಂದು ಸೆಕ್ಯೂರಿಟಿ ಗಾರ್ಡ್‌ ಮೇಲೆ ಹಲ್ಲೆ; ಯುವಕ ಬಂಧನ

ಕುಂಬಳಗೋಡು ಬಳಿಯ ದೊಡ್ಡಬೆಲೆಯಲ್ಲಿರುವ ಪ್ರಾವಿಡೆಂಟ್ ಸನ್‌ವರ್ತ್‌ ಅಪಾರ್ಟ್‌ಮೆಂಟ್‌ನಲ್ಲಿ ಘಟನೆ ನಡೆದಿದ್ದು, ಹಲ್ಲೆಗೊಳಗಾದ ಭದ್ರತಾ ಸಿಬ್ಬಂದಿಯನ್ನು ಪುನೀತ್ ಹಾಗೂ ಹಲ್ಲೆ ನಡೆಸಿದ ಯುವಕನನ್ನು ವರುಣ್ ಎನ್ನಲಾಗಿದೆ.

ರಾಮನಗರ: ನಾನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸಂಬಂಧಿ ಎಂದು ಹೇಳಿದ ಯುವಕನೋರ್ವ ಅಪಾರ್ಟ್​ಮೆಂಟ್​ ಸೆಕ್ಯೂರಿಟಿ ಸಿಬ್ಬಂದಿ ಮೇಲೆ ಹಲ್ಲೆ ನಡೆಸಿರುವ ಘಟನೆಯೊಂದು ಕುಂಬಳಗೋಡು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ಕುಂಬಳಗೋಡು ಬಳಿಯ ದೊಡ್ಡಬೆಲೆಯಲ್ಲಿರುವ ಪ್ರಾವಿಡೆಂಟ್ ಸನ್‌ವರ್ತ್‌ ಅಪಾರ್ಟ್‌ಮೆಂಟ್‌ನಲ್ಲಿ ಘಟನೆ ನಡೆದಿದ್ದು, ಹಲ್ಲೆಗೊಳಗಾದ ಭದ್ರತಾ ಸಿಬ್ಬಂದಿಯನ್ನು ಪುನೀತ್ ಹಾಗೂ ಹಲ್ಲೆ ನಡೆಸಿದ ಯುವಕನನ್ನು ವರುಣ್ ಎನ್ನಲಾಗಿದೆ.

ಘಟನೆ ಸಂಬಂಧ ಪುನೀತ್ ನೀಡಿದ ದೂರಿನ ಮೇರೆಗೆ ಕುಂಬಳಗೋಡು ಪೊಲೀಸ್ ಠಾಣೆಯಲ್ಲಿ ಎನ್‌.ಸಿ ಮಾಡಿಕೊಳ್ಳಲಾಗಿದೆ. ಅಲ್ಲದೆ, ಯುವಕನನ್ನು ಪೊಲೀಸರು ಬಂಧನಕ್ಕೊಳಪಡಿಸಿದ್ದಾರೆಂದು ತಿಳಿದುಬಂದಿದೆ.

ಯುವಕ ಸೆ.19ರಂದು ತನ್ನ ಸ್ನೇಹಿತನೊಂದಿಗೆ ಅಪಾರ್ಟ್‌ಮೆಂಟ್‌ನಲ್ಲಿರುವ ಫ್ಲಾಟ್‌ಗೆ ಇಬ್ಬರು ಯುವತಿಯರನ್ನು ರಾತ್ರಿ 12ರ ಸುಮಾರಿಗೆ ಕರೆ ತಂದಿದ್ದಾನೆ. ಈ ವೇಳೆ ಕರ್ತವ್ಯದಲ್ಲಿದ್ದ ಪುನೀತ್, 12ರ ನಂತರ ಅಪರಿಚಿತರಿಗೆ ಅಪಾರ್ಟ್‌ಮೆಂಟ್‌ಗೆ ಪ್ರವೇಶವಿಲ್ಲ ಎಂಬ ನಿಯಮವಿದೆ ಎಂದು ಹೇಳಿದ್ದಾರೆ. ಇದರಿಂದ ಕೆರಳಿದ ವರುಣ್‌, ಪುನೀತ್ ಅವರ ಕೆನ್ನೆ ಮತ್ತು ತಲೆಗೆ ಹೊಡೆದಿದ್ದಾನೆ.

ಅಲ್ಲದೆ, ನಾನ್ಯಾರು ಗೊತ್ತಾ? ಡಿಸಿಪಿ ಮಗ, ಸಿಎಂ‌ ಸಿದ್ದರಾಮಯ್ಯ ನನ್ನ ಸಂಬಂಧಿ ಎಂದು ಹೇಳಿ ದರ್ಪ ತೋರಿದ್ದಾನೆ. ಘಟನೆಯ ವಿಡಿಯೋವನ್ನು ಸ್ಥಳೀಯರು ರೆಕಾರ್ಡ್ ಮಾಡಿಕೊಂಡಿದ್ದು, ಈ ವಿಡಿಯೋಗಳು ವಾಟ್ಸ್ ಆ್ಯಪ್ ನಲ್ಲಿ ಹರಿದಾಡುತ್ತಿವೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಬೆಂಗಳೂರಲ್ಲಿ ಆಪರೇಷನ್‌ ಫುಟ್‌ಪಾತ್‌: ಇದುವರೆಗೆ 9,878 ಅತಿಕ್ರಮಣ ತೆರವು; CM ಡಿಕೆಶಿ ಸಿಟಿ ರೌಂಡ್ಸ್!

Kumbh Mela viral girl ಮೊನಾಲಿಸಾ 'ನಾಪತ್ತೆ'​: ಪೊಲೀಸ್ ರಕ್ಷಣೆ ಹಿಂಪಡೆದ ಕೇರಳ ಹೈಕೋರ್ಟ್

BJP ಆರೋಪಗಳ ಬೆನ್ನಲ್ಲೇ ಮಂಗಳೂರಿನಲ್ಲಿ 8 ಬಾಂಗ್ಲಾದೇಶಿ ಪ್ರಜೆಗಳ ಬಂಧನ; ಗಡಿಪಾರಿಗೆ ಸಿದ್ಧತೆ

ವಿಜಯಪುರದಲ್ಲಿ ಭೀಕರ ಅಪಘಾತ: ಡಿವೈಡರ್‌ಗೆ ಕಾರು ಡಿಕ್ಕಿ; ಇಬ್ಬರು ಪುತ್ರರ ಜೊತೆ ತಾಯಿ ಸ್ಥಳದಲ್ಲೇ ಸಾವು!

'ಮಮತಾರಂತೆ ನಾನು ದುರ್ಬಲ, ಹೇಡಿ CM ಅಲ್ಲ': ಶಾಸಕ ಹುಮಾಯೂನ್ ಕಬೀರ್​ ಬೆವರಿಳಿಸಿದ ಸುವೇಂದು ಅಧಿಕಾರಿ