ಮಾಜಿ ಸಿಎಂ ಯಡಿಯೂರಪ್ಪ  
ರಾಜ್ಯ

ಅಕ್ರಮ ಡಿನೋಟಿಫಿಕೇಷನ್ ಪ್ರಕರಣ: ಲೋಕಾಯುಕ್ತ ಎದುರು ವಿಚಾರಣೆಗೆ ಯಡಿಯೂರಪ್ಪ ಹಾಜರು

ವಿಚಾರಣೆಗೆ ಹಾಜರಾಗುವಂತೆ ಲೋಕಾಯುಕ್ತದ ಪೊಲೀಸ್ ವಿಭಾಗವು ಯಡಿಯೂರಪ್ಪ ಅವರಿಗೆ ನೋಟಿಸ್ ನೀಡಿತ್ತು. ಅದರಂತೆ ಮಾಜಿ ಸಿಎಂ ಇಂದು ತನಿಖಾಧಿಕಾರಿಯ ಮುಂದೆ ಹಾಜರಾಗಿದ್ದರು.

ಬೆಂಗಳೂರು: ಅಕ್ರಮ ಭೂ ಡಿನೋಟಿಫಿಕೇಷನ್ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಹಿರಿಯ ನಾಯಕ, ಮಾಜಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರು ಶನಿವಾರ ಲೋಕಾಯುಕ್ತರ ಮುಂದೆ ವಿಚಾರಣೆಗೆ ಹಾಜರಾಗಿದ್ದಾರೆ.

ವಿಚಾರಣೆಗೆ ಹಾಜರಾಗುವಂತೆ ಲೋಕಾಯುಕ್ತದ ಪೊಲೀಸ್ ವಿಭಾಗವು ಯಡಿಯೂರಪ್ಪ ಅವರಿಗೆ ನೋಟಿಸ್ ನೀಡಿತ್ತು. ಅದರಂತೆ ಮಾಜಿ ಸಿಎಂ ಇಂದು ತನಿಖಾಧಿಕಾರಿಯ ಮುಂದೆ ಹಾಜರಾಗಿದ್ದರು.

ಆಡಳಿತಾರೂಢ ಕಾಂಗ್ರೆಸ್ ಸರ್ಕಾರ ಅಕ್ರಮ ಡಿನೋಟಿಫಿಕೇಶನ್ ಆರೋಪಕ್ಕೆ ಸಂಬಂಧಿಸಿದಂತೆ ಯಡಿಯೂರಪ್ಪ ಮತ್ತು ಕೇಂದ್ರ ಸಚಿವ ಎಚ್ ಡಿ ಕುಮಾರಸ್ವಾಮಿ ವಿರುದ್ಧದ ತನಿಖೆಯನ್ನು ತ್ವರಿತಗೊಳಿಸುವಂತೆ ಲೋಕಾಯುಕ್ತರನ್ನು ಕೋರಿದ ಎರಡು ದಿನಗಳ ನಂತರ ಈ ಬೆಳವಣಿಗೆ ನಡೆದಿದೆ.

ಗುರುವಾರ ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದ್ದ ಸಚಿವರಾದ ಕೃಷ್ಣ ಬೈರೇಗೌಡ, ದಿನೇಶ್ ಗುಂಡೂರಾವ್ ಹಾಗೂ ಸಂತೋಷ್ ಲಾಡ್ ಅವರು ಬೆಂಗಳೂರು ಉತ್ತರ ಕಸಬಾ ಹೋಬಳಿಯ ಗಂಗೇನಹಳ್ಳಿಯಲ್ಲಿ 1.11 ಎಕರೆ ಜಮೀನು ಡಿನೋಟಿಫಿಕೇಷನ್ ಮಾಡಿರುವ ಬಗ್ಗೆ ದಾಖಲೆಗಳನ್ನು ಬಿಡುಗಡೆ ಮಾಡಿದ್ದರು.

ಈ ಭೂಮಿಯನ್ನು ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ(ಬಿಡಿಎ) 1976 ರಲ್ಲಿ ಲೇಔಟ್ ಮಾಡಲು ಸ್ವಾಧೀನಪಡಿಸಿಕೊಂಡಿತು ಮತ್ತು ಅದರ ಸ್ವಾಧೀನ ಪ್ರಕ್ರಿಯೆಯು 1977 ರಲ್ಲಿ ಪೂರ್ಣಗೊಂಡಿತು. 2007 ಮತ್ತು 2010ರ ನಡುವೆ ಮುಖ್ಯಮಂತ್ರಿಯಾಗಿದ್ದ ಎಚ್ ಡಿ ಕುಮಾರಸ್ವಾಮಿ ಹಾಗೂ ಯಡಿಯೂರಪ್ಪ ಅವರು ಅಕ್ರಮವಾಗಿ ಡಿನೋಟಿಫಿಕೇಷನ್ ಮಾಡಿದ್ದಾರೆ.

ಡಿನೋಟಿಫಿಕೇಷನ್ ಬಳಿಕ 2010ರ ಜುಲೈನಲ್ಲಿ ಕುಮಾರಸ್ವಾಮಿ ಅವರ ಸೋದರಮಾವ ಚನ್ನಪ್ಪ ಅವರ ಹೆಸರಿಗೆ ಜಮೀನು ನೋಂದಣಿಯಾಗಿದೆ ಎಂದು ಸಚಿವರು ಆರೋಪಿಸಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ನೇಪಾಳ ಭೀಕರ ಪ್ರವಾಹ: 95 ಮಂದಿ ಸಾವು; 105 ಭಾರತೀಯರು ಸೇರಿ 400 ಮಂದಿ ನಾಪತ್ತೆ: ಬಿಹಾರ, ಯುಪಿಯಲ್ಲಿ ಹೈ ಅಲರ್ಟ್! Video

ನಟ ದೇವರಾಜ್ 2ನೇ ಪುತ್ರ ನಟ ಪ್ರಣಮ್ ನಿಶ್ಚಿತಾರ್ಥ

Nepal Floods: ನೇಪಾಳದ ವಿನಾಶಕಾರಿ ಪ್ರವಾಹಕ್ಕೆ ಇದೇನಾ ಕಾರಣ? ಉಪಗ್ರಹ ಚಿತ್ರಗಳಲ್ಲಿ ಸ್ಫೋಟಕ ಸುಳಿವು!

'Chhatron Ki Goonj' ಕಾರ್ಯಕ್ರಮದ ವೇಳೆ Rahul Gandhi ಮಾಡಿದ 29 ತಪ್ಪುಗಳ ದಾಖಲೆ ನೀಡಿದ ಜೂಟ್ ಕಿ ಗೂಂಜ್ ವೆಬ್​ಸೈಟ್!

ಆರ್ ಎಸ್ ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಕಾರ್ಯಕ್ರಮಕ್ಕೆ ವಿರೋಧ: ಮೇಯರ್ ಮಮ್ದಾನಿ ವಿರುದ್ಧ ಅಮೆರಿಕದ ಖ್ಯಾತ ಗಾಯಕಿ ಕಿಡಿ!