ನಂದಿನಿ ತುಪ್ಪ ಮತ್ತು ಟಿಟಿಡಿ 
ರಾಜ್ಯ

ತಿರುಪತಿ ಲಡ್ಡು ವಿವಾದ: ಟಿಟಿಡಿಗೆ ನಂದಿನಿ ತುಪ್ಪ ಸಾಗಿಸುವ ಟ್ಯಾಂಕರ್‌ಗಳಿಗೆ ಜಿಪಿಎಸ್ ಅಳವಡಿಕೆ

ಒಂದು ತಿಂಗಳ ಹಿಂದೆ ಟಿಟಿಡಿ ಕೆಎಂಎಫ್‌ಗೆ ಟೆಂಡರ್ ನೀಡಿದ ನಂತರ ನಂದಿನಿ ತುಪ್ಪ ಪೂರೈಕೆಯನ್ನು ಪುನಃ ಆರಂಭಿಸಲಾಗಿದೆ ಎಂದು ಕೆಎಂಎಫ್ ವ್ಯವಸ್ಥಾಪಕ ನಿರ್ದೇಶಕ ಎಂ ಕೆ ಜಗದೀಶ್ ಹೇಳಿದ್ದಾರೆ.

ಬೆಂಗಳೂರು: ತಿರುಪತಿ ಲಡ್ಡು ತಯಾರಿಕೆಯಲ್ಲಿ ಗುಣಮಟ್ಟವಿಲ್ಲದ ತುಪ್ಪ ಬಳಸಲಾಗುತ್ತಿದೆ ಎಂಬ ಆರೋಪಗಳ ಹಿನ್ನೆಲೆಯಲ್ಲಿ ತಿರುಮಲ ತಿರುಪತಿ ದೇವಸ್ಥಾನ(ಟಿಟಿಡಿ)ಕ್ಕೆ ನಂದಿನಿ ತುಪ್ಪ ಪೂರೈಸುವ ವಾಹನಗಳಿಗೆ ಕರ್ನಾಟಕ ಹಾಲು ಮಹಾಮಂಡಳ(ಕೆಎಂಎಫ್) ಜಿಪಿಎಸ್ ಅಳವಡಿಸಿದೆ ಎಂದು ಉನ್ನತ ಅಧಿಕಾರಿಯೊಬ್ಬರು ಶನಿವಾರ ತಿಳಿಸಿದ್ದಾರೆ.

ಒಂದು ತಿಂಗಳ ಹಿಂದೆ ಟಿಟಿಡಿ ಕೆಎಂಎಫ್‌ಗೆ ಟೆಂಡರ್ ನೀಡಿದ ನಂತರ ನಂದಿನಿ ತುಪ್ಪ ಪೂರೈಕೆಯನ್ನು ಪುನಃ ಆರಂಭಿಸಲಾಗಿದೆ ಎಂದು ಕೆಎಂಎಫ್ ವ್ಯವಸ್ಥಾಪಕ ನಿರ್ದೇಶಕ ಎಂ ಕೆ ಜಗದೀಶ್ ಹೇಳಿದ್ದಾರೆ.

"ನಾವು ಒಂದು ತಿಂಗಳ ಹಿಂದೆ ತುಪ್ಪವನ್ನು(ಟಿಟಿಡಿಗೆ) ಸರಬರಾಜು ಮಾಡುತ್ತಿದ್ದೇವೆ. ನಾವು ವಾಹನಗಳಿಗೆ ಜಿಪಿಎಸ್ ಸಿಸ್ಟಮ್ ಮತ್ತು ಜಿಯೋ ಲೊಕೇಶನ್ ಸಾಧನಗಳನ್ನು ಅಳವಡಿಸಿದ್ದೇವೆ. ಇದರಿಂದ ವಾಹನ ಎಲ್ಲಿ ನಿಲ್ಲುತ್ತವೆ ಎಂಬುದನ್ನು ನಾವು ಕಂಡುಹಿಡಿಯಬಹುದು. ಇದು ಎಲ್ಲಿಯೂ ಕಲಬೆರಕೆ ಮಾಡದಂತೆ ನೋಡಿಕೊಳ್ಳಲು ಸಹಾಯಕವಾಗುತ್ತದೆ" ಎಂದು ಜಗದೀಶ್ ತಿಳಿಸಿದ್ದಾರೆ.

ಕೆಎಂಎಫ್, ಟಿಟಿಡಿಗೆ 350 ಟನ್ ತುಪ್ಪ ಪೂರೈಸುವ ಗುತ್ತಿಗೆ ಪಡೆದುಕೊಂಡಿದೆ. ಅಗತ್ಯ ಬಿದ್ದಾಗ ತುಪ್ಪ ಪೂರೈಕೆ ಮಾಡುತ್ತೇವೆ ಎಂದು ಅವರು ಹೇಳಿದ್ದಾರೆ.

ವಿಶ್ವವಿಖ್ಯಾತ ತಿರುಪತಿ ಲಡ್ಡು ತಯಾರಿಕೆಯಲ್ಲಿ ಗುಣಮಟ್ಟವಿಲ್ಲದ ಪದಾರ್ಥಗಳು ಮತ್ತು ಪ್ರಾಣಿಗಳ ಕೊಬ್ಬನ್ನು ಬಳಸಲಾಗುತ್ತಿದೆ ಎಂದು ಸ್ವತಃ ಆಂಧ್ರ ಪ್ರದೇಶ ಮುಖ್ಯಮಂತ್ರಿ ಆರೋಪ ಮಾಡಿದ್ದರು. ಅಲ್ಲದೆ ತಿರುಪತಿ ಲಡ್ಡುವಿನಲ್ಲಿ ದನದ ಕೊಬ್ಬು, ಮೀನಿನ ಎಣ್ಣೆ ಬಳಸಿರುವುದು ಲ್ಯಾಬ್ ವರದಿಯಲ್ಲಿ ದೃಢಪಟ್ಟಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಸಿಇಸಿ ವಿರುದ್ಧದ ವಿಪಕ್ಷಗಳ ಪ್ರತಿಭಟನೆ: ವಶಕ್ಕೆ ಪಡೆದ ಬೆನ್ನಲ್ಲೇ ರಾಹುಲ್, ಪ್ರಿಯಾಂಕಾ ಗಾಂಧಿ ಬಿಡುಗಡೆ

ಅಧಿಕಾರಿಯಂತೆ ನಟಿಸಿ ಆಪ್ ನಾಯಕನಿಗೆ ಧೋಕಾ; ಮದುವೆಯಾಗಿ ಆಭರಣಗಳೊಂದಿಗೆ ಮಹಿಳೆ ಪರಾರಿ!

ಆಪರೇಷನ್ ಸಿಂಧೂರ್, ರಕ್ಷಕ್‌ನಲ್ಲಿ ಪ್ರಮುಖ ಪಾತ್ರವಹಿಸಿದ್ದ ಅಶುತೋಷ್ ದೀಕ್ಷಿತ್ ವಾಯುಪಡೆಯ ನೂತನ ಮುಖ್ಯಸ್ಥ!

ಮಚ್ಛಾರ್ ಆರೋಗ್ಯಯಲ್ಲಿ 'ಸ್ಥಿರ ಸುಧಾರಣೆ': ಭಾರತೀಯ ರಾಯಭಾರ ಕಚೇರಿ

KPSC ನೇಮಕಾತಿ ಹಗರಣ: EDಯಿಂದ ಮಾಜಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್‌, ಸದಸ್ಯೆ ಗೀತಾ ಬಂಧನ!