ರಾಜ್ಯ

ತುಂಗಭದ್ರಾ ಜಲಾಶಯಕ್ಕೆ ಸಿಎಂ ಸಿದ್ದರಾಮಯ್ಯ ಬಾಗಿನ ಅರ್ಪಣೆ: ಮುಖ್ಯಮಂತ್ರಿಯೊಬ್ಬರು ಬಾಗಿನ ಅರ್ಪಿಸಿದ್ದು ಇದೇ ಮೊದಲು!

ಕೊಚ್ಚಿ ಹೋಗಿದ್ದ ಕ್ರೆಸ್ಟ್ ಗೇಟನ್ನು ಪರಿಶೀಲಿಸಲು ಸಿದ್ದರಾಮಯ್ಯ ಆಗಸ್ಟ್ 13ಕ್ಕೆ ಇಲ್ಲಿಗೆ ಬಂದಿದ್ದರು. ಅದರ ಬಳಿಕ ಇಂದು ಬಂದು ಬಾಗಿನ ಅರ್ಪಿಸಿದ್ದಾರೆ.

ಕೊಪ್ಪಳ: ಉತ್ತಮ ಮಳೆ ಕಂಡು ಜಲಾಶಯ ತುಂಬಿ 19ನೇ ಕ್ರೆಸ್ಟ್ ಗೇಟ್ ಕೊಚ್ಚಿಹೋಗಿದ್ದ ತುಂಗಭದ್ರಾ ಜಲಾಶಯಕ್ಕೆ ಇಂದು ಭಾನುವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಬಾಗಿನ ಅರ್ಪಿಸಿದರು.

ಕೊಚ್ಚಿ ಹೋಗಿದ್ದ ಕ್ರೆಸ್ಟ್ ಗೇಟನ್ನು ಪರಿಶೀಲಿಸಲು ಸಿದ್ದರಾಮಯ್ಯ ಆಗಸ್ಟ್ 13ಕ್ಕೆ ಇಲ್ಲಿಗೆ ಬಂದಿದ್ದರು. ಅದರ ಬಳಿಕ ಇಂದು ಬಂದು ಬಾಗಿನ ಅರ್ಪಿಸಿದ್ದಾರೆ. ಈ ವೇಳೆ ಬಾಗಿನ ಅರ್ಪಿಸಿ ಮಾತನಾಡಿದ ಅವರು ತುಂಗಭದ್ರಾ ಅಣೆಕಟ್ಟು ಮತ್ತೆ ಮೈ ತುಂಬಿಕೊಳ್ಳುತ್ತಿದೆ. ನಾನೇ ಬಂದು ಬಾಗಿನ ಅರ್ಪಿಸುತ್ತೇನೆ ಎಂದು ಹೇಳಿದ್ದೆ. ಇಂದು ಈಡೇರಿದೆ ಎಂದರು.

ಇತಿಹಾಸದಲ್ಲಿ ಪ್ರಪ್ರಥಮ ಬಾರಿಗೆ ತುಂಗಭದ್ರಾ ಜಲಾಶಯಕ್ಕೆ ಮುಖ್ಯಮಂತ್ರಿಗಳು ಬಾಗಿನ ಅರ್ಪಿಸಿದ್ದು, ಆ ಕೀರ್ತಿ ಸಿದ್ದರಾಮಯ್ಯನವರ ಪಾಲಾಗಿದೆ.

ಬಾಗಿನ ಅರ್ಪಣೆ ಹಿನ್ನೆಲೆ ಮುನಿರಾಬಾದನಲ್ಲಿ ಹಬ್ಬದ ವಾತವಾರಣ ಕಂಡು ಬಂತು. ಗ್ರಾಮದ ಮುಖ್ಯ ಬೀದಿಗಳನ್ನು ತಳೀರು ತೋರಣಗಳಿಂದ ಸಿಂಗರಿಸಲಾಗಿದೆ. ಗ್ರಾಮದ ವೃತ್ತಗಳಲ್ಲಿ ಬ್ಯಾನರ್ ಮತ್ತು ಫ್ಲೆಕ್ಸ್‌ ಕಂಗೊಳಿಸಿದವು.

ಕೊಪ್ಪಳ ತಾಲೂಕಿನ ಮುನಿರಾಬಾದ್​ ಬಳಿ ತುಂಗಾಭದ್ರ ಜಲಾಶಕ್ಕೆ ಬಾಗಿನ ಅರ್ಪಣೆ ಮಾಡಿದರು. ಈ ವೇಳೆ ಡಿಸಿಎಂ ಡಿ ಕೆ ಶಿವಕುಮಾರ್, ಸಚಿವರಾದ ಶಿವರಾಜ ತಂಗಡಗಿ,ಜಮೀರ್ ಅಹ್ಮದ್ ಖಾನ್, ಶರಣಪ್ರಕಾಶ್ ಪಾಟೀಲ್ ಸೇರಿ ಅನೇಕ ಸಚಿವರು ಶಾಸಕರು ಭಾಗಿಯಾಗಿದ್ದರು.

ಗೇಟ್ ದುರಸ್ತಿಯ ಸೂತ್ರದಾರಿ ಡ್ಯಾಮ್​ ತಜ್ಞ ಕನ್ನಯ್ಯ ನಾಯ್ಡು ಸಹ ಈ ಬಾಗಿನ ಅರ್ಪಣೆ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್ ಅವರು ಕನ್ನಯ್ಯ ನಾಯ್ಡು ಅವರನ್ನ ಪಕ್ಕದಲ್ಲೆ ನಿಲ್ಲಿಸಿಕೊಂಡು ತುಂಗಾಭದ್ರೆಗೆ ಬಾಗಿನ ಅರ್ಪಿಸಿದರು.

ಈ ತುಂಗಾಭದ್ರ ಡ್ಯಾಂಗೆ ಮುಖ್ಯಮಂತ್ರಿಯೊಬ್ಬರು ಬಾಗಿನ ಅರ್ಪಿಸಿರುವುದು ಇದೇ ಮೊದಲು. ಭರ್ತಿಯಾಗಿದ್ದ ಜಲಾಶಯಕ್ಕೆ ಸಿದ್ದರಾಮಯ್ಯ ಈ ಹಿಂದೆಯೇ ಬಾಗಿನ ಅರ್ಪಿಸಬೇಕಿತ್ತು. ಆದರೆ, ಡ್ಯಾಂನ 19ನೇ ಕ್ರಸ್ಟ್‌ ಗೇಟ್ ಮುರಿದ ಹಿನ್ನೆಲೆಯಲ್ಲಿ ಆ ಕಾರ್ಯಕ್ರಮ ರದ್ದಾಗಿತ್ತು. ಇದೀಗ ಗೇಟ್ ರಿಪೇರಿಯಾಗಿ ಮತ್ತೆ ಜಲಾಶಯ ಭರ್ತಿಯಾಗಿದ್ದು, ಸಿಎಂ ಬಾಗಿನ ಅರ್ಪಿಸಿ ಇತಿಹಾಸ ಬರೆದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ರಾಹುಲ್-ಪ್ರಿಯಾಂಕಾ ವಶಕ್ಕೆ ಪಡೆದ ದೆಹಲಿ ಪೊಲೀಸರು: 9 ಗಂಟೆಗಳ ಇಂಡಿಯಾ ಕೂಟದ ಧರಣಿಗೆ ಬ್ರೇಕ್!

KPSC ನೇಮಕಾತಿ ಹಗರಣ: EDಯಿಂದ ಮಾಜಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್‌, ಸದಸ್ಯೆ ಗೀತಾ ಬಂಧನ!

ಚು.ಆಯೋಗದ ವಿರುದ್ಧ INDIA ಪ್ರತಿಭಟನೆ; 'ಕೈ' ನಾಯಕರು ಪೊಲೀಸ್ ವಶಕ್ಕೆ: ವ್ಯಾನ್ ನಿಂದ ಇಳಿದು ರಾಹುಲ್ ಜೊತೆ ಮರದ ಕೆಳಗೆ ಕುಳಿತ ಪ್ರಿಯಾಂಕ!

ಕಲಬುರಗಿಯಲ್ಲಿ ಶಾಕಿಂಗ್ ಘಟನೆ: ತೊಗರಿ ಹೊಲದಲ್ಲಿ ತರಬೇತಿ ವಿಮಾನ ತುರ್ತು ಭೂಸ್ಪರ್ಶ!

ಪ್ರಿಯಕರನೊಂದಿಗೆ ಸೇರಿ ಪತಿ ಹತ್ಯೆ: ಚಾಟ್​ನಿಂದ ಕೊಲೆ ರಹಸ್ಯ ಬಯಲು; ಹೃದಯಾಘಾತದ ಕಥೆ ಕಟ್ಟಿದ್ದ ಪತ್ನಿ ಬಂಧನ!