ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ರಾಜ್ಯ

ಕಾರವಾರ: ಬೆಳ್ಳಂಬೆಳಗ್ಗೆ ಹರಿದ ನೆತ್ತರು; ಮಚ್ಚಿನಿಂದ ಕೊಚ್ಚಿ ಉದ್ಯಮಿಯ ಬರ್ಬರ ಹತ್ಯೆ

ಬೆಳ್ಳಂಬೆಳಗ್ಗೆ ಅಪರಿಚಿತರು ಏಕಾಏಕಿ ಬಂದು ವಿನಾಯಕ ದಂಪತಿ ಮೇಳೆ ಮಚ್ಚಿನಿಂದ ಹಲ್ಲೆ ನಡೆಸಿದ್ದಾರೆ. ಮಚ್ಚಿನ ಏಟಿಗೆ ಪತಿ ಸ್ಥಳದಲ್ಲೇ ಸಾವನ್ನಪ್ಪಿದ್ದು, ಪತ್ನಿ ಗಂಭೀರವಾಗಿ ಗಾಯಗೊಂಡಿದ್ದಾರೆ.

ಸಾಂಕೇತಿಕ ಚಿತ್ರ
Shilpa D
Updated On : 22 Sept 2024, 9:27 am

ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಕಾರವಾರ ತಾಲೂಕಿನ ಹಣಕೊಣ ಗ್ರಾಮದ ಮನೆಯಲ್ಲಿ ನಸುಕಿನ ಜಾವ ಬರ್ಬರ ಕೊಲೆಯಾಗಿದೆ. ಬೆಳ್ಳಂಬೆಳಗ್ಗೆ ಮಹಾರಾಷ್ಟ್ರದ ಪುಣೆಯ ಉದ್ಯಮಿ ವಿನಾಯಕ ನಾಯ್ಕ(52) ಎಂಬುವವರನ್ನು ಭೀಕರವಾಗಿ ಹತ್ಯೆ ಮಾಡಲಾಗಿದೆ.

ಬೆಳ್ಳಂಬೆಳಗ್ಗೆ ಅಪರಿಚಿತರು ಏಕಾಏಕಿ ಬಂದು ವಿನಾಯಕ ದಂಪತಿ ಮೇಳೆ ಮಚ್ಚಿನಿಂದ ಹಲ್ಲೆ ನಡೆಸಿದ್ದಾರೆ. ಮಚ್ಚಿನ ಏಟಿಗೆ ಪತಿ ಸ್ಥಳದಲ್ಲೇ ಸಾವನ್ನಪ್ಪಿದ್ದು, ಪತ್ನಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಗೊಂಡ ಮಹಿಳೆಯನ್ನು ಕಾರವಾರ ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ.ಕೊಲೆಗೆ ಕಾರಣ ತಿಳಿದು ಬಂದಿಲ್ಲ.

ಚಿತಾಕುಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಪತ್ನಿ ಸಮೇತ ಪುಣೆಯಲ್ಲಿ ವಾಸವಾಗಿದ್ದ ವಿನಾಯಕ್ ಅವರು ಕಳೆದ ವಾರ ಗ್ರಾಮ ದೇವರ ಜಾತ್ರೆಗೆಂದು ಕಾರವಾರಕ್ಕೆ ಬಂದಿದ್ದರು. ಇಂದು ಬೆಳಗ್ಗೆ ಪುಣೆಗೆ ಹೋಗುವುದಾಗಿ ಸ್ನೇಹಿತರಿಗೆ ತಿಳಿಸಿದ್ದರು. ಬೆಳಗಿನ ಜಾವ ಮಚ್ಚಿನಿಂದ ದಾಳಿ ನಡೆಸಿ ಕೊಲೆ ಮಾಡಿರುವುದು ಭಾರಿ ಅನುಮಾನಕ್ಕೆ ಕಾರಣವಾಗಿದೆ.

Advertisement

Advertisement

Also Read

ಬೆಂಗಳೂರಿನಲ್ಲಿ ಮಹಿಳೆಯ ಭೀಕರ ಹತ್ಯೆ: ಮೃತದೇಹವನ್ನು 28 ತುಂಡುಗಳಾಗಿ ಕತ್ತರಿಸಿ ಫ್ರಿಡ್ಜ್ ನಲ್ಲಿಟ್ಟ ಪಾಪಿ!

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

Show comments