ಬಿಜೆಪಿ  online desk
ರಾಜ್ಯ

ವೈದ್ಯಕೀಯ ಉಪಕರಣಗಳ ಖರೀದಿಯಲ್ಲಿ ಹಗರಣ: ಸಚಿವ ಶರಣಪ್ರಕಾಶ್ ಪಾಟೀಲ್ ರಾಜೀನಾಮೆಗೆ BJP ಆಗ್ರಹ

ಟೆಂಡರ್‌ನಲ್ಲಿ ಕೇರಳ ಮೂಲದ ಏಜೆನ್ಸಿ ಆಪರೇಷನ್ ಥಿಯೇಟರ್‌ಗೆ 49.70 ಲಕ್ಷ ರೂ.ಗೆ ಪ್ರಸ್ತಾವನೆ ಸಲ್ಲಿಸಿದ್ದರೂ, 1.1 ಕೋಟಿ ರೂ. ನಮೂದಿಸಿದ ಏಜೆನ್ಸಿಗೆ ಸರ್ಕಾರ ವರ್ಕ್ ಆರ್ಡರ್ ನೀಡಿದೆ.

ಬೆಂಗಳೂರು: ವೈದ್ಯಕೀಯ ಉಪಕರಣ ಖರೀದಿ ಹಗರಣದಲ್ಲಿ ಭಾಗಿಯಾಗಿ ರಾಜ್ಯ ಸರ್ಕಾರಕ್ಕೆ ನಷ್ಟ ಉಂಟು ಮಾಡಿರುವ ವೈದ್ಯಕೀಯ ಶಿಕ್ಷಣ ಸಚಿವ ಶರಣಪ್ರಕಾಶ್ ಪಾಟೀಲ್ ರಾಜೀನಾಮೆ ನೀಡಬೇಕು ಎಂದು ಬಿಜೆಪಿ ಆಗ್ರಹಿಸಿದೆ.

ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಇಂದು ಮಾಧ್ಯಮದವರೊಂದಿಗೆ ಮಾತನಾಡಿದ ವಿಧಾನ ಪರಿಷತ್ ಸದಸ್ಯ ಎನ್. ರವಿಕುಮಾರ್ ಅವರು, ಟೆಂಡರ್‌ನಲ್ಲಿ ಕೇರಳ ಮೂಲದ ಏಜೆನ್ಸಿ ಆಪರೇಷನ್ ಥಿಯೇಟರ್‌ಗೆ 49.70 ಲಕ್ಷ ರೂ.ಗೆ ಪ್ರಸ್ತಾವನೆ ಸಲ್ಲಿಸಿದ್ದರೂ, 1.1 ಕೋಟಿ ರೂ. ನಮೂದಿಸಿದ ಏಜೆನ್ಸಿಗೆ ಸರ್ಕಾರ ವರ್ಕ್ ಆರ್ಡರ್ ನೀಡಿದೆ ಎಂದು ಆರೋಪಿಸಿದರು.

ಸಚಿವ ಪಾಟೀಲ್ ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಬೇಕು. ಸರ್ಕಾರ ಈ ಅವ್ಯವಹಾರದ ತನಿಖೆಯನ್ನು ನಿವೃತ್ತ ನ್ಯಾಯಾಧೀಶರಿಂದ ಅಥವಾ ಸ್ವತಂತ್ರ ತನಿಖಾ ಸಂಸ್ಥೆಯಿಂದ ನಡೆಸಬೇಕೆಂದು. ಮುಖ್ಯಮಂತ್ರಿಗಳು ಕೂಡಲೇ ಸಚಿವ ಡಾ.ಶರಣಪ್ರಕಾಶ್ ಪಾಟೀಲ್ ಅವರ ರಾಜೀನಾಮೆ ಪಡೆಯಬೇಕು ಎಂದು ಆಗ್ರಹಿಸಿದರು.

ಇದೇ 24ರಂದು ಇದರ ಕುರಿತು ನಾವು ಲೋಕಾಯುಕ್ತರಿಗೆ ದೂರು ಕೊಡಲಿದ್ದೇವೆ. ರಾಜ್ಯಾಧ್ಯಕ್ಷರ ಜೊತೆ ಚರ್ಚಿಸಿ ರಾಜ್ಯಪಾಲರಿಗೂ ಮನವಿ ಸಲ್ಲಿಸಲಾಗುವುದು. ವೈದ್ಯಕೀಯ ಶಿಕ್ಷಣ ಇಲಾಖೆಯಲ್ಲಿ ದೊಡ್ಡ ಹಗರಣ ನಡೆದಿದೆ ಎಂದು ತಿಳಿಸಿದರು.

ರೋಗಿಗಳಿಗೆ ಆರೋಗ್ಯ ಸೇವೆಗೆ ರಾಜ್ಯದ ಹಾವೇರಿ, ಕಲಬುರಗಿ, ಕೊಪ್ಪಳ, ಯಾದಗಿರಿ, ಬೆಂಗಳೂರು, ಮೈಸೂರು ಮೊದಲಾದ 18 ವೈದ್ಯಕೀಯ ಕಾಲೇಜುಗಳಿಗೆ 114 ಮಾಡ್ಯುಲರ್ ಆಪರೇಷನ್ ಥಿಯೇಟರ್ ಉಪಕರಣಗಳನ್ನು ಖರೀದಿಸಿದ್ದು, 176.70 ಕೋಟಿ ರೂ. ಖರ್ಚು ಮಾಡಿದ್ದಾರೆ. ಟೆಂಡರ್ ಕರೆಯಲು ಕಂಪನಿ ಹೆಸರನ್ನು ಬದಲಿಸಿದ್ದು, ಕೋಟ್ಯಾಂತರ ರೂ. ಭ್ರಷ್ಟಾಚಾರ ನಡೆದಿದೆ. ವೈದ್ಯಕೀಯ ಶಿಕ್ಷಣ ಸಚಿವ, ವೈದ್ಯಕೀಯ ಶಿಕ್ಷಣ ಇಲಾಖೆ ಉನ್ನತಾಧಿಕಾರಿಗಳು ಈ ಹಗರಣದಲ್ಲಿ ಭಾಗಿಯಾಗಿರುವ ಸುದ್ದಿ ಇದೆ. ಸರ್ಕಾರವು ಶೇ. 60 ಮತ್ತು ಸಂಬಂಧಿತ ಸಂಸ್ಥೆಯು ಆಂತರಿಕ ಸಂಪನ್ಮೂಲದಿಂದ ಶೇ. 40 ಹಣ ಭರಿಸುತ್ತಿವೆ ಎಂದು ವಿವರಿಸಿದರು.

ಸರ್ಕಾರಕ್ಕೆ 117 ಕೋಟಿ ರೂ. ನಷ್ಟವಾಗಿದೆ. ಡಾ.ಶರಣಪ್ರಕಾಶ್ ಪಾಟೀಲ್, ಅಧಿಕಾರಿಗಳು, ಸಚಿವ ದಿನೇಶ್ ಗುಂಡೂರಾವ್, ಉಪಕರಣ ಸರಬರಾಜು ಮಾಡಿದ ಸಂಸ್ಥೆಗೆ ಇದರ ಲಾಭ ಆಗಿರುವ ಸಾಧ್ಯತೆ ಇದೆ. ಹಿಂದೆ 50 ಉಪಕರಣ ಪೂರೈಕೆ ಮಾಡಿದ ಕೇರಳ ವೈದ್ಯಕೀಯ ಸೇವಾ ನಿಗಮದ ಎಂ.ಎಸ್. ಕ್ರಿಯೇಟಿವ್ ಹೆಲ್ತ್ ಟೆಕ್ ಪ್ರೈವೇಟ್ ಲಿಮಿಡೆಟ್ ಸಂಸ್ಥೆ ಇದೇ ಮಾಡ್ಯುಲರ್ ಥಿಯೇಟರ್ ಉಪಕರಣಕ್ಕೆ ಪ್ರತಿಯೊಂದಕ್ಕೆ 49.70 ಲಕ್ಷದ (ಸುಮಾರು 50 ಲಕ್ಷ) ಟೆಂಡರ್​ಗೆ ಹಾಕಿದ್ದರು. 3 ವರ್ಷ ವಾರಂಟಿ ಎಂದು ತಿಳಿಸಿದೆ. ಬೆಳಗಾವಿ ಸ್ಮಾರ್ಟ್ ಸಿಟಿ ಲಿಮಿಟೆಡ್ ಕಿಮ್ಸ್ ಆಸ್ಪತ್ರೆಯ ಟ್ರಾಮಾ ಸೆಂಟರ್​ಗೆ ಮಾಡ್ಯುಲರ್ ಥಿಯೇಟರ್​ಗೆ 1.10 ಕೋಟಿಯಂತೆ ಶಿವೋನ್ ಇಂಡಿಯ ಕಂಪನಿಗೆ (50 ಲಕ್ಷದ ಎಂ.ಎಸ್.ಕ್ರಿಯೇಟಿವ್ ಬಿಟ್ಟು) ಕಾರ್ಯಾದೇಶ ಮಾಡಿದೆ.

ವೈದ್ಯಕೀಯ ಶಿಕ್ಷಣ ಇಲಾಖೆಯು ಒಂದು ವರ್ಷ ವಾರಂಟಿ ಕೊಡುವ ಎಂ.ಎಸ್.ಲಕ್ಷ್ಮಣ್ಯ ವೆಂಚರ್ಸ್ ಪ್ರೈವೇಟ್ ಲಿಮಿಟೆಡ್‍ಗೆ ಪ್ರತಿ ಮಾಡ್ಯುಲರ್ ಆಪರೇಷನ್ ಥಿಯೇಟರ್​ಗೆ 1 ಕೋಟಿ 29 ಲಕ್ಷದ 69 ಸಾವಿರ ಹಾಗೂ ಜಿಎಸ್‍ಟಿ 23,33,800 ಒಟ್ಟು ಸೇರಿ 1.52 ಕೋಟಿಗೆ ನೀಡಲಾಗಿದೆ. ಕೇರಳದ್ದಾದರೆ ಸುಮಾರು 50 ಲಕ್ಷದಲ್ಲಿ ಖರೀದಿ ಆಗುತ್ತಿತ್ತು. ಕೇರಳದ ಸಂಸ್ಥೆಗೆ ಹೋಲಿಸಿದರೆ ಸುಮಾರು 3 ಪಟ್ಟು ಹೆಚ್ಚು ದರಕ್ಕೆ ಕೊಟ್ಟಿದ್ದು, ಹಗರಣ ನಡೆಸಲಾಗಿದೆ. ಒಂದು ಉಪಕರಣಕ್ಕೆ 1 ಕೋಟಿ ಲಾಭ ಸಿಗುತ್ತಿತ್ತು. 114 ಉಪಕರಣಕ್ಕೆ 117 ಕೋಟಿ ಅವ್ಯವಹಾರ ಆಗಿದೆ ಎಂದು ದೂರಿದರು.

ಟೆಂಡರ್​ನಲ್ಲಿ ಹತ್ತಾರು ಕೋಟಿ ಕಿಕ್ ಬ್ಯಾಕ್ ಸಂದಾಯವಾಗಿದೆ. ಟೆಂಡರ್​ನಲ್ಲಿ 4 ಕಂಪನಿಗಳು ಬಿಡ್ ಸಲ್ಲಿಸಿದ್ದು 3 ಕಂಪನಿಗಳನ್ನು ತಿರಸ್ಕರಿಸಿದ್ದಾರೆ. ಯಾವ್ಯಾವ ಕಂಪನಿ ಎಷ್ಟು ದರದ ಬಿಡ್ ಸಲ್ಲಿಸಿದ್ದವು ಎಂದು ಕೇಳಿದ್ದು ಮಾಹಿತಿ ಕೊಟ್ಟಿಲ್ಲ ಎಂದು ಹೇಳಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜನಪ್ರಿಯ ಪ್ಯಾಲೆಸ್ತೀನ್ ನಾಯಕ ಮರ್ವಾನ್ ಬರ್ಘೌಟಿ ಬಿಡುಗಡೆಗೆ ಇಸ್ರೇಲ್ ನಕಾರ: 250 ಕೈದಿಗಳ ಪಟ್ಟಿ ಸಿದ್ಧ

'ನಮ್ಮ ಪಾತ್ರವಿಲ್ಲ': ಆಫ್ಘನ್ ಸಚಿವರ ಸುದ್ದಿಗೋಷ್ಠಿ ವೇಳೆ ಮಹಿಳಾ ಪತ್ರಕರ್ತೆಯರಿಗೆ ನಿರ್ಬಂಧ ಕುರಿತು 'ಕೇಂದ್ರ' ಸ್ಪಷ್ಟನೆ

ಬೆಂಗಳೂರು: ರಾತ್ರಿಯಿಡೀ ಸುರಿದ ಮಳೆಯಿಂದ ಹಲವೆಡೆ ಜಲಾವೃತ, ಸಂಚಾರ ದಟ್ಟಣೆ, ಇಂದಿನ IMD ವರದಿ!

'ನಂಗೇ ಕೊಡಿ ಎಂದು ನಾನೇನು ಕೇಳಿಲ್ಲ..': ನೊಬೆಲ್ ಶಾಂತಿ ಪ್ರಶಸ್ತಿ ಕುರಿತು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮಾತು!

ಬೆಳಗಾವಿ: ಬೀದಿ ನಾಯಿಗಳ ಅಟ್ಟಹಾಸ, 2 ವರ್ಷದ ಬಾಲಕಿ ಮೇಲೆ ಭೀಕರ ದಾಳಿ

SCROLL FOR NEXT