ಮೇಲ್ಛಾವಣಿ ಕಾಂಕ್ರೀಟ್ ಬಿದ್ದ ಅಂಗನವಾಡಿ ಕೇಂದ್ರ 
ರಾಜ್ಯ

ಗಂಗಾವತಿ: ಅಂಗನವಾಡಿ ಕೇಂದ್ರದ ಮೇಲ್ಛಾವಣಿ ಕಾಂಕ್ರೀಟ್ ಕಳಚಿ ಬಿದ್ದು ನಾಲ್ಕು ಮಕ್ಕಳಿಗೆ ಗಾಯ

ಇಂದು ಮುಂಜಾನೆ ಅಂಗನವಾಡಿಗೆ ಎಂದಿನಂತೆ 20ಕ್ಕೂ ಹೆಚ್ಚು ಮಕ್ಕಳು ಬಂದಿದ್ದರು. ಒಳಗೆ ಕುಳಿತು ಆಟ-ಪಾಠಗಳಲ್ಲಿ ತೊಡಗಿದ್ದರು.

ಕೊಪ್ಪಳ: ಅಂಗನವಾಡಿ ಕಟ್ಟಡದ ಮೇಲ್ಚಾವಣಿಯ ಕಾಂಕ್ರೀಟ್ ಉದುರಿ ಬಿದ್ದು ನಾಲ್ವರು ಮಕ್ಕಳು ಗಾಯಗೊಂಡ ಘಟನೆ ಇಂದು ಸೋಮವಾರ ಕೊಪ್ಪಳ ಜಿಲ್ಲೆಯ ಗಂಗಾವತಿ ಪಟ್ಟಣದ ಮೆಹಬೂಬ್ ನಗರದಲ್ಲಿ ನಡೆದಿದೆ. ಮಹಬೂಬ್ ನಗರದಲ್ಲಿರುವ 11 ನೇ ಅಂಗನವಾಡಿ ಕೇಂದ್ರದ ಮೇಲ್ಛಾವಣಿಯ ಕಾಂಕ್ರಿಟ್ ಉದುರಿ ಬಿದ್ದಿದೆ.

ಇಂದು ಮುಂಜಾನೆ ಅಂಗನವಾಡಿಗೆ ಎಂದಿನಂತೆ 20ಕ್ಕೂ ಹೆಚ್ಚು ಮಕ್ಕಳು ಬಂದಿದ್ದರು. ಒಳಗೆ ಕುಳಿತು ಆಟ-ಪಾಠಗಳಲ್ಲಿ ತೊಡಗಿದ್ದರು. ಆಗ ಇದ್ದಕ್ಕಿದ್ದಂತೆ ಕಾಂಕ್ರೀಟ್ ಉದುರಿ ಬಿದ್ದಿದೆ. ಇದರಿಂದ ನಾಲ್ಕು ಮಕ್ಕಳ ತಲೆ ಮತ್ತು ಕಾಲುಗಳಿಗೆ ಗಾಯವಾಗಿವೆ.

ಮೆಹಬೂಬ್ ನಗರದ ಅಮನ್, ಮನ್ವಿತ್,ಮದ೯ನ್,‌ ಸುರಕ್ಷಾ ಎಂಬ ಮಕ್ಕಳು ಗಾಯಗೊಂಡಿದ್ದು, ಅವರನ್ನು ಗಂಗಾವತಿ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ, ಮಕ್ಕಳು ಪ್ರಾಣಾಪಾಯದಿಂದ ಪಾರಾಗಿವೆ. ಇನ್ನು ಮಾಹಿತಿ ತಿಳಿಯುತ್ತಿದ್ದಂತೆ ಆಸ್ಪತ್ರೆಗೆ ನಗರಸಭೆ ಅಧ್ಯಕ್ಷ ಮತ್ತು ಸದಸ್ಯರು, ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಬೆಂಗಳೂರಲ್ಲಿ ಆಪರೇಷನ್‌ ಫುಟ್‌ಪಾತ್‌: ಇದುವರೆಗೆ 9,878 ಅತಿಕ್ರಮಣ ತೆರವು; CM ಡಿಕೆಶಿ ಸಿಟಿ ರೌಂಡ್ಸ್!

Kumbh Mela viral girl ಮೊನಾಲಿಸಾ 'ನಾಪತ್ತೆ'​: ಪೊಲೀಸ್ ರಕ್ಷಣೆ ಹಿಂಪಡೆದ ಕೇರಳ ಹೈಕೋರ್ಟ್

BJP ಆರೋಪಗಳ ಬೆನ್ನಲ್ಲೇ ಮಂಗಳೂರಿನಲ್ಲಿ 8 ಬಾಂಗ್ಲಾದೇಶಿ ಪ್ರಜೆಗಳ ಬಂಧನ; ಗಡಿಪಾರಿಗೆ ಸಿದ್ಧತೆ

ವಿಜಯಪುರದಲ್ಲಿ ಭೀಕರ ಅಪಘಾತ: ಡಿವೈಡರ್‌ಗೆ ಕಾರು ಡಿಕ್ಕಿ; ಇಬ್ಬರು ಪುತ್ರರ ಜೊತೆ ತಾಯಿ ಸ್ಥಳದಲ್ಲೇ ಸಾವು!

'ಮಮತಾರಂತೆ ನಾನು ದುರ್ಬಲ, ಹೇಡಿ CM ಅಲ್ಲ': ಶಾಸಕ ಹುಮಾಯೂನ್ ಕಬೀರ್​ ಬೆವರಿಳಿಸಿದ ಸುವೇಂದು ಅಧಿಕಾರಿ