ಘಟನಾ ಸ್ಥಳದಲ್ಲಿ ಪೊಲೀಸರು 
ರಾಜ್ಯ

ಬೆಂಗಳೂರು: ಪಣತ್ತೂರು ಕೆರೆಯಲ್ಲಿ ಮುಳುಗಿ ನೇಪಾಳದ ಯುವಕ ಸಾವು

ಸುದ್ದಿ ತಿಳಿದು ಸ್ಥಳಕ್ಕೆ ಧಾವಿಸಿದ ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ಸಿಬ್ಬಂದಿ ರಾತ್ರಿ 9 ಗಂಟೆ ಸುಮಾರಿಗೆ ಮೃತದೇಹವನ್ನು ಕೆರೆಯಿಂದ ಹೊರತೆಗೆದರು. ಮೃತನನ್ನು ಪಣತ್ತೂರಿನ ನಿವಾಸಿ ಅನಿಲ್ ಎಂದು ಗುರುತಿಸಲಾಗಿದೆ.

ಬೆಂಗಳೂರು: ಪಣತ್ತೂರು ಕೆರೆಯಲ್ಲಿ ಈಜಾಡುತ್ತಿದ್ದ 22 ವರ್ಷದ ಯುವಕ ಮಧ್ಯದಲ್ಲಿ ಸುಸ್ತಾಗಿದ್ದು ದಡ ಸೇರಲು ಸಾಧ್ಯವಾಗದೆ ಸಾವನ್ನಪ್ಪಿರುವ ಘಟನೆ ಭಾನುವಾರ ಸಂಜೆ ನಡೆದಿದೆ.

ಸುದ್ದಿ ತಿಳಿದು ಸ್ಥಳಕ್ಕೆ ಧಾವಿಸಿದ ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ಸಿಬ್ಬಂದಿ ರಾತ್ರಿ 9 ಗಂಟೆ ಸುಮಾರಿಗೆ ಮೃತದೇಹವನ್ನು ಕೆರೆಯಿಂದ ಹೊರತೆಗೆದರು. ಮೃತನನ್ನು ಪಣತ್ತೂರಿನ ನಿವಾಸಿ ಅನಿಲ್ ಎಂದು ಗುರುತಿಸಲಾಗಿದೆ.

ಮೂಲತ: ನೇಪಾಳದವನಾಗಿದ್ದ ಈತ ಪೇಯಿಂಗ್ ಗೆಸ್ಟ್ ವಸತಿ ಗೃಹವೊಂದಲ್ಲಿ ಹೌಸ್ ಕೀಪಿಂಗ್ ಕೆಲಸ ಮಾಡುತ್ತಿದ್ದ ಎನ್ನಲಾಗಿದೆ.

ಮೂವರು ಗೆಳೆಯರಾದ ಅನಿಲ್, ದಿನೇಶ್ ಶರ್ಮಾ (26) ಮತ್ತು ಉಪೇಂದ್ರ ಶರ್ಮಾ (24) ಪಣತ್ತೂರು ಕೆರೆಗೆ ಹೋಗಿದ್ದರು. ಅನಿಲ್ ಮತ್ತು ದಿನೇಶ್ ಈಜಲು ಕೆರೆಗೆ ಇಳಿದಿದ್ದು, ಉಪೇಂದ್ರ ಡದದಲ್ಲಿ ಕುಳಿತು ಮೊಬೈಲ್ ನಿಂದ ವಿಡಿಯೋ ರೆಕಾರ್ಡ್ ಮಾಡುತ್ತಿದ್ದರು. ಕೆರೆಯ ಮಧ್ಯಭಾಗಕ್ಕೆ ತಲುಪಿದ ದಿನೇಶ್ ಮತ್ತೆ ದಡಕ್ಕೆ ಬಂದರೆ, ಅನಿಲ್ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ. ಬಳಿಕ ದಿನೇಶ್ ಮತ್ತು ಉಪೇಂದ್ರ ಪೊಲೀಸ್ ಮತ್ತು ಅಗ್ನಿಶಾಮಕ ಮತ್ತು ತುರ್ತು ಸೇವೆಗಳಿಗೆ ಸುದ್ದಿ ಮುಟ್ಟಿಸಿದ್ದಾರೆ

ಸರ್ಜಾಪುರ ರಸ್ತೆಯ ಅಗ್ನಿಶಾಮಕ ದಳ ಕೆರೆ ಬಳಿ ಧಾವಿಸಿ ನಾಲ್ಕು ಗಂಟೆಗಳ ಕಾರ್ಯಾಚರಣೆಯ ನಂತರ ಮೃತದೇಹವನ್ನು ಹೊರತೆಗೆದರು. ಶವವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿತ್ತು. ಯುವಕರು ಮದ್ಯದ ಅಮಲಿನಲ್ಲಿದ್ದಿರಬಹುದು ಎಂದು ಪೊಲೀಸರು ಶಂಕಿಸಿದ್ದು, ಮರಣೋತ್ತರ ಪರೀಕ್ಷೆಯಿಂದ ಅನಿಲ್‌ ಸಾವಿಗೆ ನಿಖರ ಕಾರಣ ತಿಳಿಯಲಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಈ ಸಂಬಂಧ ಅನಿಲ್ ಪೋಷಕರು ನೀಡಿದ ದೂರಿನ ಮೇರೆಗೆ ಮಾರತ್ತಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಎಲ್ಲವನ್ನೂ ತಡೆಯಲು ಸಾಧ್ಯವಿಲ್ಲ': CJP ದೆಹಲಿ ಪ್ರತಿಭಟನೆಗೆ ನಿರ್ಬಂಧ ಕುರಿತು ಕೇಂದ್ರಕ್ಕೆ ಸುಪ್ರೀಂ ಕೋರ್ಟ್ ಚಾಟಿ

ಮತಗಳ್ಳತನವೇ ಆಗಿದ್ದರೆ ಕೇರಳ Congress CM, ತಮಿಳುನಾಡು CM ಕೂಡ ಮತಗಳ್ಳರೇ: ಚೇತನ್ ಅಹಿಂಸಾ

ಅ.10ರಂದು CJP ಪ್ರತಿಭಟನೆ ಹಿನ್ನೆಲೆ ದೆಹಲಿಗೆ ತೆರಳುವ ಹಲವು ರೈಲುಗಳು ರದ್ದು, ಪ್ರಯಾಣಿಕರಿಗೆ ಸಂಕಷ್ಟ!

ರಾಜಸ್ಥಾನದ ವಿಚಿತ್ರ ಪ್ರಕರಣ: ಮಕ್ಕಳ ಆರೈಕೆ, ಮನೆ ಸ್ವಚ್ಛತೆಗೆ ಕೈದಿಗಳ ಬಳಕೆ; ಕೊನೆಗೆ ಅದೇ ಜೈಲು ಸೇರಿದ ಅಜ್ಮೀರ್ ಮಹಿಳಾ ಜೈಲರ್‌!

'ಮಕ್ಕಳನ್ನು ಪ್ರತಿಭಟನೆಗಳಿಂದ ದೂರವಿಡಿ': ದೆಹಲಿ ಪ್ರತಿಭಟನೆಗೆ ಸಿದ್ಧತೆ, ಮಸೀದಿ ಮೈಕ್‌ನಲ್ಲಿ ಪೊಲೀಸರ ಮನವಿ! Video