ರಸ್ತೆ ಗುಂಡಿಗಳ ಪರಿಶೀಲಿಸುತ್ತಿರುವ ಡಿಕೆ.ಶಿವಕುಮಾರ್. 
ರಾಜ್ಯ

ರಸ್ತೆ ಗುಂಡಿ: ಗಡುವು ಮುಕ್ತಾಯ ಬೆನ್ನಲ್ಲೇ ನಗರದಲ್ಲಿ ಡಿ.ಕೆ ಶಿವಕುಮಾರ್ ನೈಟ್ ರೌಂಡ್ಸ್, ಸ್ಥಿತಿಗತಿ ಪರಿಶೀಲನೆ

ಡಿಕೆ.ಶಿವಕುಮಾರ್ ನಗರದ ಪ್ರಮುಖ ರಸ್ತೆಗಳಾಗ ಜೆಸಿ ರಸ್ತೆ, ಟ್ರಿನಿಟಿ ಜಂಕ್ಷನ್ ಹಾಗೂ ದೊಮ್ಮಲೂರು ಬ್ರಿಡ್ಜ್ ಬಳಿ ರಸ್ತೆ ಗುಂಡಿಗಳ ದುರಸ್ತಿ ಕಾಮಗಾರಿಯ ಸ್ಥಿತಿಗತಿಗಳನ್ನು ಪರಿಶೀಲಿಸಿದರು.

ಬೆಂಗಳೂರು: ಬೆಂಗಳೂರಲ್ಲಿ ರಸ್ತೆ ಗುಂಡಿ ಮುಚ್ಚಲು ನೀಡಿದ್ದ ಗಡುವು ಮುಕ್ತಾಯಗೊಂಡ ಬೆನ್ನಲ್ಲೇ ಉಪಮುಖ್ಯಮಂತ್ರಿ ಹಾಗೂ ಬೆಂಗಳೂರು ನಗರಾಭಿವೃದ್ಧಿ ಸಚಿವ ಡಿ.ಕೆ.ಶಿವಕುಮಾರ್‌ ಸೋಮವಾರ ತಡರಾತ್ರಿವರೆಗೂ ನಗರ ಪ್ರದಕ್ಷಿಣೆ ಮಾಡಿದರು.

ತಡರಾತ್ರಿ ನಗರದ ಹಲವು ರಸ್ತೆಗಳಿಗೆ ಖುದ್ದು ಭೇಟಿ ನೀಡಿದ ಡಿಸಿಎಂ, ಕಾಮಗಾರಿಗಳ ಸ್ಥಿತಿಗತಿಗಳನ್ನ ಪರಿಶೀಲನೆ ನಡೆಸಿದರು. ಈ ವೇಳೆ ಉಪ ಮುಖ್ಯಮಂತ್ರಿಗಳಿಗೆ ಬಿಬಿಎಂಪಿ ಅಧಿಕಾರಿಗಳು ಸಾಥ್ ನೀಡಿದ್ದರು.

ಡಿಕೆ.ಶಿವಕುಮಾರ್ ನಗರದ ಪ್ರಮುಖ ರಸ್ತೆಗಳಾಗ ಜೆಸಿ ರಸ್ತೆ, ಟ್ರಿನಿಟಿ ಜಂಕ್ಷನ್ ಹಾಗೂ ದೊಮ್ಮಲೂರು ಬ್ರಿಡ್ಜ್ ಬಳಿ ರಸ್ತೆ ಗುಂಡಿಗಳ ದುರಸ್ತಿ ಕಾಮಗಾರಿಯ ಸ್ಥಿತಿಗತಿಗಳನ್ನು ಪರಿಶೀಲಿಸಿದರು.

ಕೆಲವು ರಸ್ತೆಗಳಲ್ಲಿ ತಾವೇ ಗಡಾರಿ ಮೂಲಕ ಗುಂಡಿಗೆ ಮುಚ್ಚಿದ್ದ ಡಾಂಬರನ್ನು ಪರಿಶೀಲಿಸಿದರು. ಈ ಮೂಲಕ ಖುದ್ದು ರಸ್ತೆಯ ಗುಂಡಿ ಮುಚ್ಚಿರುವ ಗುಣಮಟ್ಟವನ್ನು ಪರಿಶೀಲಿಸಿ ಖಾತ್ರಿಪಡಿಸಿಕೊಂಡರು.

ಈ ಸಂದರ್ಭಧಲ್ಲಿ ಮಾತನಾಡಿದ ಡಿ.ಕೆ.ಶಿವಕುಮಾರ್‌ ಅವರು, ಅಧಿಕಾರಿಗಳು ನೀಡಿದ ಮಾಹಿತಿ ಕೇಳಿ ಕೂರುವವನು ನಾನಲ್ಲ. ಕಾಮಗಾರಿಯ ಗುಣಮಟ್ಟವನ್ನು ಕಣ್ಣಾರೆ ನೋಡಿ ಪರಿಶೀಲಿಸುವುದು ಈ ಭೇಟಿಯ ಉದ್ದೇಶ. ಜಾಗತಿಕ ನಗರವಾಗಿ ಗುರುತಿಸಿಕೊಂಡಿರುವ ಬೆಂಗಳೂರಿನ ಘನತೆಗೆ ಚ್ಯುತಿ ಬರದಂತೆ ಕಾಪಾಡುವುದೇ ನಮ್ಮ ಧ್ಯೇಯ ಎಂದು ಹೇಳಿದರು.

ಇತ್ತೀಚೆಗೆ ಬಿಬಿಎಂಪಿ ಅಧಿಕಾರಿಗಳೊಂದಿಗೆ ಸಭೆ ನಡೆಸಿದ್ದ ಡಿ.ಕೆ.ಶಿವಕುಮಾರ್‌ ಅವರು ಬೆಂಗಳೂರಿನ ರಸ್ತೆ ಗುಂಡಿಗಳಿಗೆ ಮುಕ್ತಿ ನೀಡಬೇಕು ಎಂದು ಅಧಿಕಾರಿಗಳಿಗೆ ಖಡಕ್‌ ಸೂಚನೆ ನೀಡಿದ್ದರು.

15 ದಿನಗಳಲ್ಲಿ ಬೆಂಗಳೂರಿನ ರಸ್ತೆಗಳಲ್ಲಿ ಯಾವುದೇ ಗುಂಡಿಗಳು ಕಣ್ಣಿಗೆ ಕಾಣಿಸಬಾರದು. ಎರಡು ವಾರಗಳ ನಂತರ ನಾನೇ ಖುದ್ದಾಗಿ ಇಡೀ ಬೆಂಗಳೂರು ನಗರವನ್ನು ಸುತ್ತಾಡಲಿ ಪ್ರತಿ ರಸ್ತೆಯನ್ನು ಪರಿಶೀಲಿಸುತ್ತೇನೆ ಎಂದಿದ್ದರು. ಬಳಿಕ ಡಿಕೆಶಿ ಅಮೇರಿಕಾಗೆ ಪ್ರವಾಸ ತೆರಳಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಸಿಇಸಿ ವಿರುದ್ಧದ ವಿಪಕ್ಷಗಳ ಪ್ರತಿಭಟನೆ: ವಶಕ್ಕೆ ಪಡೆದ ಬೆನ್ನಲ್ಲೇ ರಾಹುಲ್, ಪ್ರಿಯಾಂಕಾ ಗಾಂಧಿ ಬಿಡುಗಡೆ

ಅಧಿಕಾರಿಯಂತೆ ನಟಿಸಿ ಆಪ್ ನಾಯಕನಿಗೆ ಧೋಕಾ; ಮದುವೆಯಾಗಿ ಆಭರಣಗಳೊಂದಿಗೆ ಮಹಿಳೆ ಪರಾರಿ!

ಆಪರೇಷನ್ ಸಿಂಧೂರ್, ರಕ್ಷಕ್‌ನಲ್ಲಿ ಪ್ರಮುಖ ಪಾತ್ರವಹಿಸಿದ್ದ ಅಶುತೋಷ್ ದೀಕ್ಷಿತ್ ವಾಯುಪಡೆಯ ನೂತನ ಮುಖ್ಯಸ್ಥ!

ಮಚ್ಛಾರ್ ಆರೋಗ್ಯಯಲ್ಲಿ 'ಸ್ಥಿರ ಸುಧಾರಣೆ': ಭಾರತೀಯ ರಾಯಭಾರ ಕಚೇರಿ

KPSC ನೇಮಕಾತಿ ಹಗರಣ: EDಯಿಂದ ಮಾಜಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್‌, ಸದಸ್ಯೆ ಗೀತಾ ಬಂಧನ!