ಮೊಹ್ಮದ್ ಮಾಝಿನ್ 
ರಾಜ್ಯ

ಮಂಗಳೂರು: ಕಾಸ್ಮೆಟಿಕ್ ಸರ್ಜರಿ ವೇಳೆ ಎಡವಟ್ಟು, ಯುವಕ ಸಾವು

ಮೃತನನ್ನು ಉಳ್ಳಾಲದ ಅಕ್ಕರೆಕೆರೆ ನಿವಾಸಿ 32 ವರ್ಷದ ಮೊಹ್ಮದ್ ಮಾಝಿನ್ ಎಂದು ಗುರುತಿಸಲಾಗಿದೆ.

ಮಂಗಳೂರು: ಇಲ್ಲಿನ ಕಂಕನಾಡಿಯ ಬೆಂದೂರ್ ವೆಲ್​ನಲ್ಲಿ ಕಾಸ್ಮೆಟಿಕ್ ಸರ್ಜರಿ ವೇಳೆ ವೈದ್ಯರ ಎಡವಟ್ಟಿನಿಂದ ಯುವಕನೊಬ್ಬ ಸಾವನ್ನಪ್ಪಿದ್ದಾನೆ.

ಮೃತನನ್ನು ಉಳ್ಳಾಲದ ಅಕ್ಕರೆಕೆರೆ ನಿವಾಸಿ 32 ವರ್ಷದ ಮೊಹ್ಮದ್ ಮಾಝಿನ್ ಎಂದು ಗುರುತಿಸಲಾಗಿದೆ. ಮೊಹ್ಮದ್ ಮಾಝಿನ್ ತನ್ನ‌ ಎದೆಯ ಎಡಭಾಗದ ಸಣ್ಣ ಗುಳ್ಳೆಯನ್ನು ತೆಗೆಸಲು ಬೆಂದೂರ್ ವೆಲ್​ನಲ್ಲಿರುವ ಕಾಸ್ಮೆಟಿಕ್ ಸರ್ಜರಿ ಕ್ಲಿನಿಕ್​ಗೆ ಬಂದಿದ್ದನು.

ಸಣ್ಣ ಶಸ್ತ್ರಚಿಕಿತ್ಸೆ ಮಾಡಬೇಕಿತ್ತು. ಆದರೆ ಹೆಚ್ಚು ಸಮಯ ಕಳೆದರೂ ಶಸ್ತ್ರಚಿಕಿತ್ಸೆ ಮುಗಿಯದಿದ್ದರಿಂದ ಸಂಶಯಗೊಂಡ ಪೋಷಕರು ಈ ಬಗ್ಗೆ ವಿಚಾರಿಸಿದಾಗ ಆರೋಗ್ಯದಲ್ಲಿ ಏರುಪೇರು ಆಗಿರುವ ಮಾಹಿತಿ ಬೆಳಕಿಗೆ ಬಂದಿದೆ. ಕೂಡಲೇ ಮಾಝೀನ್ ನನ್ನು ಸ್ಥಳೀಯ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಯಿತು. ಆದರೆ ಆತ ಮೃತಪಟ್ಟಿರುವುದಾಗಿ ಘೋಷಿಸಿದರು.

ಸರ್ಜರಿಯ ವೇಳೆ ವೈದ್ಯರು ಎಡವಟ್ಟು ಮಾಡಿಕೊಂಡಿರುವುದಾಗಿ ಕುಟುಂಬಸ್ಥರು ಆರೋಪಿಸಿದ್ದು, ಈ ಕುರಿತು ಕದ್ರಿ‌ ಠಾಣೆ ಪೊಲೀಸರು UDR ಪ್ರಕರಣ ದಾಖಲಿಸಿಕೊಂಡಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

Theaterisation: 'ಥಿಯೇಟರ್ ಕಮಾಂಡ್‌' ರಚನೆ: ಪ್ರಯತ್ನದಲ್ಲಿ ಪ್ರಗತಿ ಸಾಧಿಸಲಾಗುತ್ತಿದೆಯೇ? ಆಡ್ಮಿರಲ್ ಡಿಕೆ ತ್ರಿಪಾಠಿ ಹೇಳಿದ್ದು ಹೀಗೆ...

'ಪಾಕಿಸ್ತಾನದೊಂದಿಗೆ ಯುದ್ಧ ನಿಲ್ಲಿಸಲು ಟ್ರಂಪ್ 24 ಗಂಟೆ ಕಾಲಾವಕಾಶ ನೀಡಿದ್ದರು, ಮೋದಿ ಕೇವಲ 5 ಗಂಟೆಗಳಲ್ಲಿ ಪಾಲಿಸಿದರು': ರಾಹುಲ್ ಗಾಂಧಿ

'ಧಮ್ ಇದ್ರೆ.. ಸನಾತನಧರ್ಮ, ಬಿಹಾರಿಗಳ ಕುರಿತ ಹೇಳಿಕೆ ಮತ್ತೆ ಹೇಳ್ತೀರಾ?': MK Stalin ಗೆ ಬಿಜೆಪಿ-ಜೆಡಿಯು ಸವಾಲು!

Video: 80 ಸಾವಿರ ಹಣವಿದ್ದ ಬ್ಯಾಗ್ ನಾಪತ್ತೆ, ಮೇಲಿಂದ ಕೋತಿಯಿಂದ ಹಣದ ಸುರಿಮಳೆ! ಸಿಕ್ಕಿದೆಷ್ಟು ಗೊತ್ತಾ?

Dharmasthala: Mahesh Shetty Thimarodi ಮನೆ ಮಹಜರು, ಪತ್ನಿ-ಮಕ್ಕಳ ಮೊಬೈಲ್ ವಶಕ್ಕೆ, 3 ತಲ್ವಾರ್ ಕೂಡ ಪತ್ತೆ!

SCROLL FOR NEXT