ಸಂಗ್ರಹ ಚಿತ್ರ 
ರಾಜ್ಯ

ಮೈಸೂರು: ದಸರಾ ಆನೆಗಳ ಮುಂದೆ ಸೆಲ್ಫೀ, ರೀಲ್ಸ್'ಗೆ ನಿಷೇಧ..!

ಕೆಲವರು ಅನೆಯ ದಂತ ಹಿಡಿದು, ಮತ್ತೆ ಕೆಲವರು ಸೊಂಡಿಲು ತಬ್ಬಿಕೊಂಡು ಫೋಟೋ ತೆಗೆಸಿಕೊಂಡಿರುವ ಚಿತ್ರಗಳು ಮಾಧ್ಯಮಗಳಲ್ಲಿ ಪ್ರಸಾರವಾಗುತ್ತಿದ್ದು, ಇದನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿದೆ.

ಬೆಂಗಳೂರು: ಮೈಸೂರು ದಸರಾ ಉತ್ಸವದ ಜಂಬೂಸವಾರಿ ಮೆರವಣಿಗೆಯಲ್ಲಿ ಭಾಗವಹಿಸಲು ಬಂದಿರುವ ಸಾಕು ಆನೆಗಳ ಬಳಿ ಫೋಟೋ ಶೂಟ್, ಸೆಲ್ಫೀ, ರೀಲ್ಸ್‌ಗಳಿಗೆ ಅವಕಾಶ ನೀಡಬಾರದು ಎಂದು ಅರಣ್ಯ ಸಚಿವ ಈಶ್ವ್ ಖಂಡ್ರೆ ಅವರು ಖಡಕ್ ಸೂಚನೆ ನೀಡಿದ್ದಾರೆ.

ಮೈಸೂರಿನಲ್ಲಿ ದಸರಾ ಆನೆಗಳ ನಡುವಿನ ಕದಾಟದ ನಂತರ ಸಚಿವ ಈಶ್ವರ್ ಖಂಡ್ರೆ ಅವರು, ಯಾವುದೇ ಕಾರಣಕ್ಕೂ ಸಾರ್ವಜನಿಕರು ಆನೆಗಳ ಬಳಿ ದಂತ ಹಿಡಿದುಕೊಂಡು ಫೋಟೋ ಶೂಟ್ ಮಾಡಿಸುವುದು, ವಿಡಿಯೋ ಮಾಡುವುದು, ಸೆಲ್ಫೀ ಕ್ಲಿಕ್ಕಿಸುವುದು ಹಾಗೂ ರೀಲ್ಸ್‌ಗೆ ಮುಂದಾಗುವಂತಹ ಚಟುವಟಿಕೆಗಳಿಗೆ ಅವಕಾಶ ಮಾಡಿಕೊಡಬಾರದು ಎಂದು ಅರಣ್ಯ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ಮೈಸೂರು ದಸರಾ ಮಹೋತ್ಸವದ ಪ್ರಧಾನ ಆಕರ್ಷಣೆಯಾದ ಜಂಬೂಸವಾರಿಯಲ್ಲಿ ಪಾಲ್ಗೊಳ್ಳಲು ಕಾಡಿನಿಂದ ನಾಡಿಗೆ ಬಂದು ಪ್ರಸ್ತುತ ಅರಮನೆಯ ಆವರಣದಲ್ಲಿ ಬೀಡು ಬಿಟ್ಟಿರುವ ಸಾಕಾನೆಗಳ ಬಳಿ ಫೋಟೋಶೂಟ್ ಮತ್ತು ರೀಲ್ಸ್ ಮಾಡಲು ಅಧಿಕಾರಿಗಳೇ ಅವಕಾಶ ನೀಡಿದ್ದು, ಇದರಿಂದ ಆನೆಗಳು ವಿಚಲಿತವಾಗಿ ಅನುಚಿತವಾಗಿ ವರ್ತಿಸುತ್ತಿವೆ. ಕಳೆದ ಕೆಲವು ದಿನಗಳ ಹಿಂದೆ ಕಾಂಜನ್ ಮತ್ತು ಧನಂಜಯ ಆನೆಗಳ ನಡುವೆ ಕಾದಾಟ ಆಗಲು ಇದೂ ಒಂದು ಕಾರಣವಾಗಿದೆ ಎಂದು ಮಾಧ್ಯಮಗಳು ವರದಿ ಮಾಡಿವೆ.

ಕೆಲವರು ಅನೆಯ ದಂತ ಹಿಡಿದು, ಮತ್ತೆ ಕೆಲವರು ಸೊಂಡಿಲು ತಬ್ಬಿಕೊಂಡು ಫೋಟೋ ತೆಗೆಸಿಕೊಂಡಿರುವ ಚಿತ್ರಗಳು ಮಾಧ್ಯಮಗಳಲ್ಲಿ ಪ್ರಸಾರವಾಗುತ್ತಿದ್ದು, ಇದನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿದೆ. ಶಿಬಿರದಿಂದ ತಂದ ಅನೆಗಳನ್ನು ಸುರಕ್ಷಿತವಾಗಿ ಶಿಬಿರಕ್ಕೆ ಬಿಡುವವರೆಗೆ ಯಾವುದೇ ಅನಾಹುತ ಆಗದಂತೆ ಇಲಾಖೆ ಎಚ್ಚರ ವಹಿಸಬೇಕಾಗುತ್ತದೆ. ಈ ಹಿನ್ನೆಲೆಯಲ್ಲಿ ರೀಲ್ಸ್ ಮಾಡಲು ಅವಕಾಶ ನೀಡಿ ನಿರ್ಲಕ್ಷ್ಯ ತೋರಿರುವ ಅಧಿಕಾರಿ / ಸಿಬ್ಬಂದಿಗೆ ಸ್ಪಷ್ಟ ಸೂಚನೆ ನೀಡಿ, ಇನ್ನು ಮುಂದೆ ಈ ರೀತಿ ಆಗದಂತೆ ಎಚ್ಚರ ವಹಿಸುವಂತೆ ಸೂಚಿಸಿದ್ದಾರೆ.

ಅರಣ್ಯ ಇಲಾಖೆಯ ಹಿರಿಯ ಅಧಿಕಾರಿಯೊಬ್ಬರು ಮಾತನಾಡಿ, ಆನೆಗಳೊಂದಿಗೆ ಜನರು ಫೋಟೋ ತೆಗೆದುಕೊಳ್ಳುತ್ತಾರೆ. ಇದಕ್ಕೆ ನಿಷೇಧ ಹೇರಿರುವುದು ಉತ್ತಮವೇ. ಆದರೆ, ದಸರಾ ವೇಳೆ ಜನರನ್ನು ನಿಯಂತ್ರಿಸುವುದು ಕಷ್ಟಕರವಾಗಿರುತ್ತದೆ. ಜನರು ಹಣದಿಂದ ಮಾವತರನ್ನು ಆಮಿಷ ತೋರುತ್ತಾರೆ. ಕಾದಾಟದಲ್ಲಿ ಆನೆಗಳು ಗೇಟ್ ನಿಂದ ಹೊರಗೆ ಬಂದಿರುವುದು ಇದೇ ಮೊದಲು. ಸುಮಾರು 5 ವರ್ಷಗಳ ಹಿಂದೆ ಅರ್ಜುನ ಆನೆ ಕೋಪಗೊಂಡ ಘಟನೆ ನಡೆದಿತ್ತು. ಆನೆ ಅರ್ಜುನ ಜನರು ತನ್ನ ಮುಂದೆ ನಿಲ್ಲುವುದು ಹಾಗೂ ತನ್ನ ಮುಂದೆ ಜನಸಂದಣಿ ಇರುವುದನ್ನು ಇಷ್ಟಪಡುವುದಿಲ್ಲ. ಈ ಹಿಂದೆ ಮಾವುತ ಇಲ್ಲದಿದ್ದಾಗ ವ್ಯಕ್ತಿಯೊಬ್ಬ ಫೋಟೋ ಕ್ಲಿಕ್ಕಿಸಿಕೊಳ್ಳಲು ಅರ್ಜುನನ ಬಳಿ ಬಂದಿದ್ದು, ಇದು ಅರ್ಜುನನ್ನು ಕೆರಳಿಸಿತ್ತು. ಆನೆಗಳಿಗೆ ಕಿವಿ ಮುಟ್ಟುವುದು, ಕಿವಿಯ ಹತ್ತಿರ ಬರುವುದು ಇಷ್ಟವಾಗುವುದಿಲ್ಲ. ಆದರೆ, ಜನರಿಗೆ ಇದು ಅರ್ಥವಾಗುವುದಿಲ್ಲ ಎಂದು ಹೇಳಿದ್ದಾರೆ.

ಪ್ರಸ್ತುತ ಅರಮನೆಯಲ್ಲಿ 16 ಆನೆಗಳಿದ್ದು, 14 ಆನೆಗಳು ಅರಣ್ಯ ಇಲಾಖೆಗೆ ಸೇರಿದ್ದಾಗಿವೆ. ಅವುಗಳಲ್ಲಿ ನಾಲ್ಕು ಹೆಣ್ಣಾನೆಗಳಿವೆ. ಅರಣ್ಯ ಇಲಾಖೆ ಶಿಬಿರದ 14 ಆನೆಗಳೊಂದಿಗೆ ಅರಮನೆಯ ಎರಡು ಹೆಣ್ಣಾನೆಗಳಿವೆ. ಈ ನಡುವೆ ಆನೆಗಳ ಕಾದಾಟ ಘಟನೆ ಬಳಿಕ ಅರಣ್ಯ ಇಲಾಖೆಯು 10 ಸಿಸಿಟಿವಿ ಕ್ಯಾಮೆರಾಗಳ ಜೊತೆಗೆ ಭದ್ರತಾ ಸಿಬ್ಬಂದಿಯನ್ನು ಹೆಚ್ಚಿಸಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಕಲಬುರಗಿ: ಕಾರು ಅಪಘಾತದಲ್ಲಿ ಐಎಎಸ್ ಅಧಿಕಾರಿ ಮಹಾಂತೇಶ್ ಬೀಳಗಿ ಸೇರಿ ಮೂವರು ಸಾವು

CM ಬದಲಾವಣೆ ನಾಲ್ಕರಿಂದ ಐದು ಜನರ ನಡುವೆ ನಡೆದ "ರಹಸ್ಯ ಒಪ್ಪಂದ": ಡಿಕೆಶಿ​ ಸ್ಫೋಟಕ ಹೇಳಿಕೆ

ಶಾಂತಿ ಮಾತುಕತೆ ನಡೆಯುತ್ತಿರುವಾಗಲೇ ಉಕ್ರೇನ್‌ ಮೇಲೆ ರಷ್ಯಾ ದಾಳಿ; ಕನಿಷ್ಠ ಏಳು ಜನ ಸಾವು

Punishment: 5 ವರ್ಷದ ಬಾಲಕನನ್ನು ಮರಕ್ಕೆ ನೇತು ಹಾಕಿದ ಶಿಕ್ಷಕಿ!

ವಿಶ್ವಕಪ್ ವಿಜೇತ ಕರ್ನಾಟಕದ ಅಂಧ ಕ್ರಿಕೆಟ್ ಆಟಗಾರ್ತಿಯರಿಗೆ ತಲಾ 10 ಲಕ್ಷ ರೂ ನಗದು, ಸರ್ಕಾರಿ ಉದ್ಯೋಗ: ಸಿಎಂ ಸಿದ್ದರಾಮಯ್ಯ ಘೋಷಣೆ

SCROLL FOR NEXT