ಆರ್​ಆರ್ ನಗರ (ಸಾಂದರ್ಭಿಕ ಚಿತ್ರ) 
ರಾಜ್ಯ

ಬಿಜೆಪಿ ಶಾಸಕ ಮುನಿರತ್ನಗೆ ಮತ್ತೊಂದು ಸಂಕಷ್ಟ; RR Nagar ಕಾಮಗಾರಿ ಸಂಬಂಧ ತನಿಖೆಗೆ BBMP ಆದೇಶ

ಆರ್​ಆರ್ ನಗರ ಕ್ಷೇತ್ರದಲ್ಲಿ 2020 ಸೆಪ್ಟೆಂಬರ್​​ನಿಂದ 2022 ರ ಜುಲೈ 19ರ ಅವಧಿಯಲ್ಲಿ ನಡೆದ ಕಾಮಗಾರಿಗಳಲ್ಲಿ 500 ಕೋಟಿ ರೂಪಾಯಿಗೂ ಅಧಿಕ ಅವ್ಯವಹಾರ ಶಂಕೆ ವ್ಯಕ್ತವಾಗಿದೆ.

ಬೆಂಗಳೂರು: ಗುತ್ತಿಗೆದಾರನಿಗೆ ಬೆದರಿಕೆ ಹಾಕಿದ, ಜಾತಿ ನಿಂದನೆ ಆರೋಪ ಮತ್ತು ಅತ್ಯಾಚಾರ ಪ್ರಕರಣದಲ್ಲಿ ಬಂಧನಕ್ಕೀಡಾಗಿರುವ ಬಿಜೆಪಿ ಶಾಸಕ ಮುನಿರತ್ನಗೆ ಮತ್ತೊಂದು ಸಂಕಷ್ಟ ಎದುರಾಗಿದ್ದು, ಅವರು ಪ್ರತಿನಿಧಿಸುತ್ತಿರುವ ಆರ್​ಆರ್ ನಗರದ ಕಾಮಗಾರಿ ಸಂಬಂಧ ಬಿಬಿಎಂಪಿ ತನಿಖೆಗೆ ಆದೇಶಿಸಿದೆ.

ಆರ್​ಆರ್ ನಗರ ಕ್ಷೇತ್ರದಲ್ಲಿ 2020 ರಿಂದ 2022ರ ವರೆಗೆ ನಡೆದ ಕಾಮಗಾರಿಗಳ ತನಿಖೆಗೆ ಪಾಲಿಕೆ ಆದೇಶ ಹೊರಡಿಸಿದ್ದು, 2020 ಸೆಪ್ಟೆಂಬರ್​​ನಿಂದ 2022 ರ ಜುಲೈ 19ರ ಅವಧಿಯಲ್ಲಿ ನಡೆದ ಕಾಮಗಾರಿಗಳಲ್ಲಿ 500 ಕೋಟಿ ರೂಪಾಯಿಗೂ ಅಧಿಕ ಅವ್ಯವಹಾರ ಶಂಕೆ ವ್ಯಕ್ತವಾಗಿದ್ದು, ಈ ಹಿನ್ನೆಲೆಯಲ್ಲಿ ಪಾಲಿಕೆ ಕಂದಾಯ ವಿಭಾಗದ ವಿಶೇಷ ಆಯುಕ್ತ ನೇತೃತ್ವದಲ್ಲಿ ತನಿಖೆಗೆ ಆದೇಶ ನೀಡಲಾಗಿದೆ ಎಂದು ತಿಳಿದುಬಂದಿದೆ.

ಈ ಬಗ್ಗೆ ಖಾಸಗಿ ವಾಹಿನ ವರದಿ ಮಾಡಿದ್ದು, 'ಕಾಮಗಾರಿ ನಡೆಸದೇ ಈ ಅವಧಿಯಲ್ಲಿ ಬಿಲ್ ಮಾಡಿಸಿಕೊಂಡಿರುವ ಆರೋಪ ಕೇಳಿಬಂದಿದೆ. ಇದೀಗ ಬಿಬಿಎಂಪಿ ಕಂದಾಯ ವಿಶೇಷ ಮುನೀಶ್ ಮೌದ್ಗಿಲ್ ನೇತೃತ್ವದಲ್ಲಿ ತನಿಖೆಗೆ ಸಮಿತಿ ರಚಿಸಿದೆ.

ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಸೆಪ್ಟೆಂಬರ್ 23 ರಂದೇ ತನಿಖೆಗೆ ಆದೇಶ ಹೊರಡಿಸಿದ್ದರು. ಅದರ ಆಧಾರದಲ್ಲಿ ಸಮಿತಿ ರಚನೆ ಮಾಡಲಾಗಿದೆ. ತನಿಖಾ ಸಮಿತಿಯಲ್ಲಿ ಯೋಜನೆ ವಿಶೇಷ, ಹಣಕಾಸು ವಿಶೇಷ ಆಯುಕ್ತರು, ಕ್ವಾಲಿಟಿ ಚೆಕ್ ಚೀಫ್ ಇಂಜಿನಿಯರ್ ಹಾಗೂ ಟಿವಿಸಿಸಿ ಚೀಫ್ ಇಂಜಿನಿಯರ್ ಒಳಗೊಂಡಿದ್ದಾರೆ ಎನ್ನಲಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಹಾರ್ಮುಜ್ ತೆರೆಯಲು ಇರಾನ್ ಪರದಾಟ: ಜಲಸಂಧಿ ನಿರ್ಬಂಧಿಸಲು ತಾನೇ ನೆಟ್ಟ ಮೈನ್ಸ್ ಹುಡುಕಲು ವಿಫಲ; ಹಾಗಾದ್ರೆ ಮುಂದೇನು?

ಮಾತುಕತೆಗೆ ವ್ಯಾನ್ಸ್ ನೇತೃತ್ವದ ಅಮೆರಿಕಾ ತಂಡ ಇಸ್ಲಾಮಾಬಾದ್ ಗೆ ಆಗಮನ; ಲೆಬನಾನ್ ಕದನ ವಿರಾಮ, ಸ್ವತ್ತುಗಳ ಬಿಡುಗಡೆ ಪ್ರಮುಖ ಅಜೆಂಡಾ; Video

ಇರಾನ್‌ ಸರ್ವೋಚ್ಚ ನಾಯಕ ಮೊಜ್ತಾಬಾ ಖಮೇನಿ ಮುಖ ವಿರೂಪಗೊಂಡಿದೆ, ಕಾಲುಗಳಿಗೆ ತೀವ್ರ ಗಾಯವಾಗಿದೆ: ವರದಿ

IPL 2026: RCB ಸೋಲಿಸಿದ RRಗೆ ಬಿಗ್ ಶಾಕ್, ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದ ಸಿಬ್ಬಂದಿ, BCCI ಶಿಕ್ಷೆ..! Video

ಕುತೂಹಲ ಘಟ್ಟಕ್ಕೆ ತಲುಪಿದ ಪಶ್ಚಿಮ ಏಷ್ಯಾ ಸಂಘರ್ಷ: ಪಾಕಿಸ್ತಾನ ಮಧ್ಯಸ್ಥಿಕೆಯಲ್ಲಿ ಇರಾನ್-ಅಮೆರಿಕ ನಡುವೆ ಇಂದು ಸಂಧಾನ ಮಾತುಕತೆ; Video

SCROLL FOR NEXT