ಸುಪ್ರೀಂ ಕೋರ್ಟ್ 
ರಾಜ್ಯ

ಗೋರಿಪಾಳ್ಯ ಹೇಳಿಕೆ: 'ಭಾರತದ ಯಾವುದೇ ಭಾಗವನ್ನೂ ಪಾಕಿಸ್ತಾನ ಎಂದು ಕರೆಯುವಂತಿಲ್ಲ'; ಹೈಕೋರ್ಟ್ ಜಡ್ಜ್ ಪ್ರಕರಣ ಇತ್ಯರ್ಥ ಮಾಡಿದ Supreme Court!

ಒಬ್ಬರು ಪಿತೃಪ್ರಭುತ್ವ ಅಥವಾ ಸ್ತ್ರೀ ದ್ವೇಷದ ಹೇಳಿಕೆಗಳನ್ನು ನೀಡುವ ಮುನ್ನ ಜಾಗರೂಕರಾಗಿರಬೇಕು. ನಿರ್ದಿಷ್ಟ ಲಿಂಗ ಅಥವಾ ಸಮುದಾಯದ ಮೇಲಿನ ಅವಲೋಕನಗಳ ಬಗ್ಗೆ ನಾವು ನಮ್ಮ ಗಂಭೀರ ಅಭಿಪ್ರಾಯವನ್ನು ವ್ಯಕ್ತಪಡಿಸುತ್ತೇವೆ.

ನವದೆಹಲಿ: ಗೋರಿಪಾಳ್ಯ ಪಾಕಿಸ್ತಾನದಲ್ಲಿದೆಯೇ ಎಂಬ ಕರ್ನಾಟಕ ಹೈಕೋರ್ಟ್ ನ ನ್ಯಾಯಮೂರ್ತಿ ವೇದವ್ಯಾಸಾಚಾರ್‌ ಶ್ರೀಶಾನಂದ ಅವರ ಹೇಳಿಕೆ ವಿಚಾರವಾಗಿ ದಾಖಲಾಗಿದ್ದ ಪ್ರಕರಣವನ್ನು ಸುಪ್ರೀಂ ಕೋರ್ಟ್ ಇತ್ಯರ್ಥಗೊಳಿಸಿದ್ದು, ಭಾರತದ ಯಾವುದೇ ಭಾಗವನ್ನೂ ಪಾಕಿಸ್ತಾನ ಎಂದು ಕರೆಯುವಂತಿಲ್ಲ ಎಂದು ಹೇಳಿದೆ.

ನ್ಯಾಯಮೂರ್ತಿ ವೇದವ್ಯಾಸಾಚಾರ್‌ ಶ್ರೀಶಾನಂದ ಅವರ ಹೇಳಿಕೆ ವಿರುದ್ಧ ಸುಪ್ರೀಂ ಕೋರ್ಟ್‌ 'ಸು ಮೋಟೊ' (ಸ್ವಯಂ ಪ್ರೇರಿತ) ಪ್ರಕರಣ ದಾಖಲಿಸಿತ್ತು. ನ್ಯಾಯಮೂರ್ತಿ ಶ್ರೀಶಾನಂದ ವಿರುದ್ಧದ 'ಸು ಮೋಟೊ' ಪ್ರಕರಣದ ವಿಚಾರಣೆಯಲ್ಲಿ ಚಂದ್ರಚೂಡ್‌ ನೇತೃತ್ವದ ಐವರು ನ್ಯಾಯಮೂರ್ತಿಗಳ ಪೀಠ ವಿಚಾರಣೆ ನಡೆಸಿತ್ತು.

ಇದೀಗ ನ್ಯಾಯಮೂರ್ತಿ ಶ್ರೀಶಾನ೦ದ ಅವರು ತಮ್ಮ ಹೇಳಿಕೆಗೆ ಕ್ಷಮೆಯಾಚಿಸಿದ್ವು ಸುಪ್ರೀಂ ಕೋರ್ಟ್‌ ಈ ಪ್ರಕರಣದ ವಿಚಾರಣೆಯನ್ನು ಮುಕ್ತಾಯಗೊಳಿಸಿದೆ.

ಅಂತೆಯೇ ಈ ವೇಳೆ “ಭಾರತದ ಯಾವುದೇ ಭಾಗವನ್ನು ಪಾಕಿಸ್ತಾನ ಎನ್ನಲು ಸಾಧ್ಯವಿಲ್ಲ. ಭಾರತದ ಯಾವುದೇ ಭಾಗವನ್ನು ಯಾರೂ ಪಾಕಿಸ್ತಾನ ಎಂದು ಕರೆಯಲು ಸಾಧ್ಯವಿಲ್ಲ. ಆ ರೀತಿ ಕರೆಯುವುದು ಮೂಲಭೂತವಾಗಿ ರಾಷ್ಟ್ರದ ಪ್ರಾದೇಶಿಕ ಸಮಗ್ರತೆಗೆ ವಿರುದ್ಧವಾಗಿದೆ” ಎಂದು ಮುಖ್ಯ ನ್ಯಾಯಮೂರ್ತಿ ಡಿ.ವೈ ಚಂದ್ರಚೂಡ್‌ ಹೇಳಿದ್ದಾರೆ.

ಅಲ್ಲದೆ “ನ್ಯಾಯ ಮತ್ತು ನ್ಯಾಯಾಂಗದ ಘನತೆಯ ಹಿತಾಸಕ್ತಿಯಿಂದಾಗಿ 'ಸು ಮೋಟೊ' ಪ್ರಕರಣವನ್ನು ಮುಕ್ತಾಯಗೊಳಿಸುವ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ. ಒಬ್ಬರು ಪಿತೃಪ್ರಭುತ್ವ ಅಥವಾ ಸ್ತ್ರೀ ದ್ವೇಷದ ಹೇಳಿಕೆಗಳನ್ನು ನೀಡುವ ಮುನ್ನ ಜಾಗರೂಕರಾಗಿರಬೇಕು. ನಿರ್ದಿಷ್ಟ ಲಿಂಗ ಅಥವಾ ಸಮುದಾಯದ ಮೇಲಿನ ಅವಲೋಕನಗಳ ಬಗ್ಗೆ ನಾವು ನಮ್ಮ ಗಂಭೀರ ಅಭಿಪ್ರಾಯವನ್ನು ವ್ಯಕ್ತಪಡಿಸುತ್ತೇವೆ. ಅಂತಹ ಅವಲೋಕನಗಳು ಪಕ್ಷಪಾತದಿಂದ ಕೂಡಿರಬಾರದು. ಎಲ್ಲರನ್ನು ಒಳಗೊಳ್ಳುವಂತಿರಬೇಕು” ಎಂದು ಸಿಜೆಐ ಹೇಳಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT