ಬಳ್ಳಾರಿ ಜೈಲಿನಲ್ಲಿ ದರ್ಶನ್ 
ರಾಜ್ಯ

Actor Darshan ಗೆ ಮತ್ತೊಂದು ಸಂಕಷ್ಟ: ಹಣದ ವ್ಯವಹಾರ ಕುರಿತು ಐಟಿ ಅಧಿಕಾರಿಗಳಿಂದಲೂ ತನಿಖೆ!

ರೇಣುಕಾಸ್ವಾಮಿ ಕೊಲೆ ಕೇಸ್​ನಲ್ಲಿ ಹಣದ ವಹಿವಾಟು ಕೂಡ ನಡೆದಿದ್ದು, ಇದೇ ಕಾರಣಕ್ಕೆ ಈ ಪ್ರಕರಣದ ವಿಚಾರಣೆಯನ್ನು ಐಟಿ ಅಧಿಕಾರಿಗಳು ಕೈಗೆತ್ತಿಕೊಂಡಿದ್ದಾರೆ.

ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲುಪಾಲಾಗಿರುವ ನಟ ದರ್ಶನ್ (Actor Darshan)ಗೆ ಮತ್ತೊಂದು ಸಂಕಷ್ಟ ಎದುರಾಗಿದ್ದು, ಕೊಲೆ ಪ್ರಕರಣದಲ್ಲಿನ ಹಣದ ವ್ಯವಹಾರ ಕುರಿತು ಐಟಿ ಅಧಿಕಾರಿಗಳಿಂದಲೂ ತನಿಖೆ ಆರಂಭವಾಗಲಿದೆ ಎಂದು ಹೇಳಲಾಗಿದೆ.

ರೇಣುಕಾಸ್ವಾಮಿ ಕೊಲೆ ಕೇಸ್​ನಲ್ಲಿ ಹಣದ ವಹಿವಾಟು ಕೂಡ ನಡೆದಿದ್ದು, ಇದೇ ಕಾರಣಕ್ಕೆ ಈ ಪ್ರಕರಣದ ವಿಚಾರಣೆಯನ್ನು ಐಟಿ ಅಧಿಕಾರಿಗಳು ಕೈಗೆತ್ತಿಕೊಂಡಿದ್ದಾರೆ. ಈ ಕೇಸ್​ನಲ್ಲಿ ದರ್ಶನ್ ಅವರ ವಿಚಾರಣೆ ನಡೆಯಲಿದ್ದು, ಇದರಿಂದ ನಟ ದರ್ಶನ್ ಗೆ ಸಂಕಷ್ಟ ಹೆಚ್ಚುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.

ಮೂಲಗಳ ಪ್ರಕಾರ ದರ್ಶನ್ ಇರುವ ಬಳ್ಳಾರಿ ಜೈಲಿಗೆ ಐಟಿ ಅಧಿಕಾರಿಗಳು ಬರಲಿದ್ದು, ಕೋರ್ಟ್ ಆದೇಶ ಹಿನ್ನೆಲೆಯಲ್ಲಿ ಐಟಿ ಅಧಿಕಾರಿಗಳು ದರ್ಶನ್​ ರ ವಿಚಾರಣೆ ಮಾಡಲಿದ್ದಾರೆ. ಐಟಿ ಅಧಿಕಾರಿಗಳಿಗೆ ಸಹಕಾರ ನೀಡುವಂತೆ ನ್ಯಾಯಾಲಯದಿಂದ ಬಳ್ಳಾರಿ ಕೇಂದ್ರ ಕಾರಾಗೃಹಕ್ಕೆ ಇ-ಮೇಲ್ ಕೂಡ ರವಾನೆಯಾಗಿದೆ ಎನ್ನಲಾಗಿದೆ.

ಸಂಚು ತಂದ ಆಪತ್ತು

ಇನ್ನು ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಆರೋಪವನ್ನು ಮತ್ತಿಬ್ಬರ ಮೇಲೆ ಹೊರಿಸಲು ಪ್ಲ್ಯಾನ್ ಮಾಡಿದ್ದರು. ಇದಕ್ಕಾಗಿ ಲಕ್ಷಾಂತರ ಹಣ ಖರ್ಚು ಮಾಡಿದ್ದರು. ಅಷ್ಟು ದೊಡ್ಡ ಮೊತ್ತದ ಕ್ಯಾಶ್ ಎಲ್ಲಿಂದ ಬಂತು? ಹೇಗೆಲ್ಲ ಹಣ ವರ್ಗಾವಣೆ ಮಾಡಲಾಗಿದೆ ಎಂಬ ಬಗ್ಗೆ ಐಟಿ ಅಧಿಕಾರಿಗಳು ತನಿಖೆ ನಡೆಸಲಿದ್ದಾರೆ. ಸದ್ಯ ಐಟಿ ಅಧಿಕಾರಿಗಳು ಬರುವುದನ್ನು ಜೈಲಾಧಿಕಾರಿಗಳು ಖಚಿತಪಡಿಸಿದ್ದಾರೆ.

ಜಾಮೀನಿಗೆ ಅರ್ಜಿ ಸಲ್ಲಿಸಿರುವ ದರ್ಶನ್

ಇನ್ನು ನಟ ದರ್ಶನ್ ಈಗಾಗಲೇ ಜಾಮೀನಿಗಾಗಿ ಅರ್ಜಿ ಸಲ್ಲಿಕೆ ಮಾಡಿದ್ದು, ಇದರ ವಿಚಾರಣೆ ಸೆಪ್ಟೆಂಬರ್ 27ರಂದು ಕೋರ್ಟ್​ನಲ್ಲಿ ನಡೆಯಲಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಕಾಗ್ನಿಜಂಟ್, ಇನ್ಫೋಸಿಸ್, ಟಿಸಿಎಸ್, ವಿಪ್ರೋ ಎಚ್‌ಸಿಎಲ್ ಗೆ ಅಮೆರಿಕ ಶಾಕ್: ಗ್ರೀನ್ ಕಾರ್ಡ್ ಕಾರ್ಯಕ್ರಮದಿಂದ ಅಮಾನತು!

ರಿಯಾದ್ ವಿಮಾನ ನಿಲ್ದಾಣದ ಮೇಲೆ ದಾಳಿ: ರಿಯಾದ್ ಗೆ ತೆರಳಬೇಕಿದ್ದ ಭಾರತೀಯ ವಿಮಾನಗಳು ರದ್ದು

ರಾಜ್‌ಘಟ್‌ನಲ್ಲಿ 'ಇಂಡಿಯಾ' ನಾಯಕರಿಂದ ಧರಣಿ; ಜ್ಞಾನೇಶ್ ಕುಮಾರ್ ರಾಜೀನಾಮೆ ನೀಡುವವರೆಗೂ 'ವೋಟ್ ಚೋರಿ' ಹೋರಾಟ ಮುಂದುವರಿಸಲು ಪ್ರತಿಜ್ಞೆ!

ಅಂಬಾನಿ ಭಾರತದ ನಿಜವಾದ ಬಾಸ್?: ಭಾರತದಲ್ಲಿ ಸ್ಟಾರ್ ಲಿಂಕ್ ಸೇವೆ ಆರಂಭ ವಿಳಂಬಕ್ಕೆ ಎಲಾನ್ ಮಸ್ಕ್ ಹತಾಶೆ!

SIR ಕಾನೂನುಬದ್ಧ: ಪ್ರತಿಪಕ್ಷಗಳ ಪ್ರತಿಭಟನೆ ನಡುವೆ CEC ಜ್ಞಾನೇಶ್ ಬೆಂಬಲಕ್ಕೆ ನಿಂತ 42 ನಿವೃತ್ತ ನ್ಯಾಯಾಧೀಶರು!