ಸಂಗ್ರಹ ಚಿತ್ರ 
ರಾಜ್ಯ

ತಿರುಪತಿ ಲಡ್ಡು ವಿವಾದ ಬೆನ್ನಲ್ಲೇ ಎಚ್ಚೆತ್ತ ಸರ್ಕಾರ: ರಾಜ್ಯದ ಎಲ್ಲಾ ಬ್ರ್ಯಾಂಡ್ ತುಪ್ಪದ ಗುಣಮಟ್ಟ ಪರೀಕ್ಷೆಗೆ ಆದೇಶ!

ಆರಂಭಿಕ ಪರೀಕ್ಷೆಗಳನ್ನು ನಡೆಸಲಾಗುವುದು. ಸುರಕ್ಷತಾ ಮಾನದಂಡಗಳ ಉಲ್ಲಂಘನೆ ಕಂಡುಬಂದಲ್ಲಿ, ತಯಾರಕರಿಂದ ಹೆಚ್ಚುವರಿ ಮಾದರಿಗಳನ್ನು ಪಡೆಯಲಾಗುವುದು.

ಬೆಂಗಳೂರು: ತಿರುಪತಿ ಲಡ್ಡು ತಯಾರಿಕೆಯಲ್ಲಿ ಪ್ರಾಣಿಜನ್ಯ ಕೊಬ್ಬು ಬಳಕೆ ವರದಿಯಾದ ಬೆನ್ನಲ್ಲೇ ಎಚ್ಚೆತ್ತುಕೊಂಡಿರುವ ರಾಜ್ಯ ಸರ್ಕಾರ ರಾಜ್ಯದಲ್ಲಿ ಕೆಎಂಎಫ್‌ ನಂದಿನಿ ತುಪ್ಪವನ್ನು ಹೊರತುಪಡಿಸಿ ಉಳಿದ ಎಲ್ಲಾ ಬ್ರ್ಯಾಂಡ್ ಗಳ ತುಪ್ಪ ಪರಿಶೀಲನೆಗೆ ಆದೇಶ ನೀಡಿದೆ.

ರಾಜ್ಯದಲ್ಲಿ ಕೆಎಂಎಫ್‌ ನಂದಿನಿ ತುಪ್ಪ ಹೊರತುಪಡಿಸಿ ಉಳಿದ ಬ್ರ್ಯಾಂಡ್‌ಗಳ ತುಪ್ಪ ಪರಿಶೀಲನೆ ನಡೆಸುವಂತೆ ಆಹಾರ ಸುರಕ್ಷತಾ ಇಲಾಖೆ ಅಧಿಕಾರಿಗಳಿಗೆ ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್‌ ಅವರು ಸೂಚನೆ ನೀಡಿದ್ದಾರೆ.

ರಾಜ್ಯದಲ್ಲಿ ಮಾರಾಟ ಆಗುತ್ತಿರುವ ನಂದಿನಿ ತುಪ್ಪವನ್ನು ಹೊರತುಪಡಿಸಿ ಉಳಿದ ಎಲ್ಲಾ ತುಪ್ಪಗಳ ಮಾದರಿ ಸಂಗ್ರಹಿಸಿ, ಪರಿಶೀಲಿಸಿ ಗುಣಮಟ್ಟ ಕಾಪಾಡಲು ಸೂಚಿಸಲಾಗಿದೆ. ದೇವಸ್ಥಾನಗಳಲ್ಲಿ ಕೊಡುವ ಪ್ರಸಾದಗಳ ಮಾದರಿ ಪರೀಕ್ಷಿಸುವ ಬದಲು, ಬಳಸುವ ತುಪ್ಪದ ಪರಿಶೀಲನೆ ಕೈಗೊಳ್ಳುವಂತೆ ಇಲಾಖೆಗೆ ಸೂಚನೆ ನೀಡಲಾಗಿದೆ ಎಂದು ಹೇಳಿದರು.

ತಮಿಳುನಾಡು ಸೇರಿದಂತೆ ವಿವಿಧ ರಾಜ್ಯಗಳಿಂದ ಕರ್ನಾಟಕಕ್ಕೆ ತುಪ್ಪ ಪೂರೈಕೆ ಆಗುತ್ತಿದೆ. ಈ ಎಲ್ಲ ತುಪ್ಪಗಳ ಮಾದರಿ ಸಂಗ್ರಹಿಸಿ ಪರಿಶೀಲಿಸಲು ಸೂಚಿಸಲಾಗಿದೆ. ತಿರುಪತಿ ಲಡ್ಡು ವಿಚಾರದಲ್ಲಿ ಜನರಲ್ಲಿ ಬಹಳ ಗೊಂದಲ ಆರಂಭವಾಗಿರುವುದು ಆಘಾತಕಾರಿ. ಹೀಗಾಗಿ, ರಾಜ್ಯದಲ್ಲಿ ಮುನ್ನೆಚ್ಚರಿಕೆ ವಹಿಸಲಾಗುತ್ತಿದೆ ಎಂದು ತಿಳಿಸಿದರು.

ಆರಂಭಿಕ ಪರೀಕ್ಷೆಗಳನ್ನು ನಡೆಸಲಾಗುವುದು. ಸುರಕ್ಷತಾ ಮಾನದಂಡಗಳ ಉಲ್ಲಂಘನೆ ಕಂಡುಬಂದಲ್ಲಿ, ತಯಾರಕರಿಂದ ಹೆಚ್ಚುವರಿ ಮಾದರಿಗಳನ್ನು ಪಡೆಯಲಾಗುವುದು. ಪರೀಕ್ಷಾ ಫಲಿತಾಂಶಗಳ ಆಧಾರದ ಮೇಲೆ ಕಾನೂನು ಕ್ರಮ ಕೈಗೊಳ್ಳಲಾಗುವುದು. ತಪ್ಪಿತಸ್ಥರ ವಿರುದ್ಧ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಕಾಯಿದೆ, 2006 ರ ಅಡಿಯಲ್ಲಿ ಕ್ರಮ ಕೈಗೊಳ್ಳಲಾಗುವುದು. ತುಪ್ಪ ಉತ್ಪಾದನೆಯ ಮೇಲೆ ನಿಷೇಧವನ್ನೂ ಹೇರಲಾಗುವುದು ಎಂದು ಹೇಳಿದರು.

ಆಹಾರ ಸುರಕ್ಷತೆಯನ್ನು ಹೆಚ್ಚಿಸುವ ನಿಟ್ಟಿನಲ್ಲಿ ಇತ್ತೀಚೆಗಷ್ಟೇ ರಾಜ್ಯ ಸರ್ಕಾರ ಪ್ರಸಾದ ತಯಾರಿಸಲು ಎಲ್ಲಾ ಸರ್ಕಾರಿ ದೇವಸ್ಥಾನಗಳಲ್ಲಿ ನಂದಿನಿ ತುಪ್ಪವನ್ನು ಮಾತ್ರ ಬಳಸಬೇಕೆಂದು ಆದೇಶಿಸಿತ್ತು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಅಯೋಧ್ಯೆ ರಾಮ ಮಂದಿರ ನಿರ್ಮಾಣ ಪೂರ್ಣ: ರಾಮ-ಸೀತೆ ವಿವಾಹ ಪರ್ವದಂದೇ ದೇಗುಲದ ಶಿಖರದ ಮೇಲೆ ಧ್ವಜಾರೋಹಣ ನೆರವೇರಿಸಿದ ಪ್ರಧಾನಿ ಮೋದಿ

"Misfit For Army": ಗುರುದ್ವಾರ ಪ್ರವೇಶಿಸಲು ನಿರಾಕರಣೆ, ಕ್ರಿಶ್ಚಿಯನ್ ಸೇನಾ ಅಧಿಕಾರಿಗೆ 'ಸುಪ್ರೀಂ' ತರಾಟೆ!

ಭ್ರಷ್ಟರಿಗೆ ಬೆಳ್ಳಂಬೆಳಗ್ಗೆ ಲೋಕಾಯುಕ್ತ ಶಾಕ್: ಏಕ ಕಾಲದಲ್ಲಿ ರಾಜ್ಯದ 10 ಕಡೆ ದಾಳಿ- ಪರಿಶೀಲನೆ

ರಾಜ್ಯ ಕಾಂಗ್ರೆಸ್ ನಲ್ಲಿ ಸಿಎಂ ಗದ್ದುಗೆ ಗುದ್ದಾಟ: 'ಹೈಕಮಾಂಡ್' ನತ್ತ ಎಲ್ಲರ ಚಿತ್ತ, ಮುಂದೇನು?

ಕೇರಳ: ರೂ. 50 ಲಕ್ಷ ಮೌಲ್ಯದ 'ಐಷಾರಾಮಿ ಬೈಕ್' ಬೇಕೆಂದು ಗಲಾಟೆ, ತಂದೆಯಿಂದ ಹಲ್ಲೆಗೊಳಗಾದ ಯುವಕ ಸಾವು!

SCROLL FOR NEXT