ಮಾಜಿ ಸಂಸದ ಪ್ರತಾಪ್ ಸಿಂಹ 
ರಾಜ್ಯ

'ನ್ಯೂಕ್ಲಿಯರ್ ಬಾಂಬ್ ಮಾಡಿದವರಿಗೆ ಪೆಟ್ರೋಲ್ ಬಾಂಬ್ ಮಾಡೋಕೆ ಬರಲ್ವ': ಬಿಜೆಪಿ ಮಾಜಿ ಸಂಸದ ಪ್ರತಾಪ್ ಸಿಂಹ ವಿರುದ್ಧ FIR

ಸೆಪ್ಟೆಂಬರ್ 21 ರಂದು ಹಿಂದೂ ಮಹಾಗಣಪತಿ ವಿಸರ್ಜನೆ ಶೋಭಾಯಾತ್ರೆಯಲ್ಲಿ ಪ್ರತಾಪ್ ಸಿಂಹ ಭಾಗವಹಿಸಿದ್ದರು.

ಮೈಸೂರು: ಯಾದಗಿರಿಯಲ್ಲಿ ನಡೆದ ಗಣೇಶ ವಿಸರ್ಜನೆ ಶೋಭಾಯಾತ್ರೆ ಮೆರವಣಿಗೆ ವೇಳೆ ಪ್ರಚೋದನಕಾರಿ ಹೇಳಿಕೆ ನೀಡಿದ ಆರೋಪದಡಿ ಬಿಜೆಪಿ ಮಾಜಿ ಸಂಸದ ಪ್ರತಾಪ್ ಸಿಂಹ (Pratap Simha) ವಿರುದ್ಧ ಪ್ರಕರಣ ದಾಖಲಾಗಿದೆ.

ಸೆಪ್ಟೆಂಬರ್ 21 ರಂದು ಹಿಂದೂ ಮಹಾಗಣಪತಿ ವಿಸರ್ಜನೆ ಶೋಭಾಯಾತ್ರೆಯಲ್ಲಿ ಪ್ರತಾಪ್ ಸಿಂಹ ಭಾಗವಹಿಸಿದ್ದರು. ಈ ವೇಳೆ ನಾಗಮಂಗಲ ಕಲ್ಲು ತೂರಾಟ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾತನಾಡಿದ್ದ ಪ್ರತಾಪ್ ಸಿಂಹ, ಪ್ರಚೋದನಕಾರಿ ಹೇಳಿಕೆ ನೀಡಿದ್ದರು ಎಂಬ ಆರೋಪದಡಿಯಲ್ಲಿ ಅವರ ವಿರುದ್ಧ ಪ್ರಕರಣ ದಾಖಲಾಗಿದೆ.

'ಗಣೇಶ ವಿಸರ್ಜನೆ ವೇಳೆ ಎಲ್ಲಾ ಕಡೆ ಕಲ್ಲು ತೂರುವ ಪ್ರವೃತ್ತಿ ಕಾಣಸ್ತಾ ಇದೆ. ಕಲ್ಲು ಹೊಡೆಯುವ ಪ್ರವೃತ್ತಿ ಮುಸ್ಲಿಮರಿಗೆ ಯಾಕೆ ಬರುತ್ತೆ? ಹಿಂದೂಗಳು ಕೈಯಲ್ಲಿ ಕಲ್ಲು ಹೀಡಿದುಕೊಂಡರೆ ನಿಮ್ಮ ಕಥೆ ಏನು ಆಗುತ್ತೆ? ನ್ಯೂಕ್ಲಿಯರ್ ಬಾಂಬ್ ಮಾಡಿದ ಹಿಂದೂಗಳಿಗೆ ಪೆಟ್ರೋಲ್ ಬಾಂಬ್ ಮಾಡೋಕೆ ಬರಲ್ವಾ..ಟಾಂಗಾಗಳು, ಗುಜರಿಗಳು ಮಾಡುವ ಕೆಲಸವನ್ನು ಕ್ಷಣ ಮಾತ್ರದಲ್ಲಿ ಹಿಂದೂಗಳಿಗೆ ಮಾಡಲು ಬರುತ್ತದೆ ಎಂದು ಪ್ರತಾಪ್ ಸಿಂಹ ಮಾತನಾಡಿದ್ದರು ಎನ್ನಲಾಗಿದೆ.

ಈ ಹೇಳಿಕೆ ವಿಚಾರವಾಗಿ ಧಾರ್ಮಿಕ ನಂಬಿಕೆಗಳಿಗೆ ಅವಮಾನಗೊಳಿಸಿ ದ್ವೇಷ ಭಾವನೆಯಿಂದ ಮಾತನಾಡಿದ್ದಾರೆ ಎಂದು ಆರೋಪಿಸಿ ಶಹಾಪುರ ಠಾಣೆಯಲ್ಲಿ ಕೇಸ್ ದಾಖಲು ಮಾಡಲಾಗಿದೆ. ಶಹಾಪುರ ಪಿಎಸ್‌ಐ ಡಿ.ವಿ.ನಾಯಕ ಅವರಿಂದ ಸ್ವಕೃತ ದೂರು ದಾಖಲಾಗಿದ್ದು, ಬಿಎನ್‌ಎಸ್ ಕಾಯ್ದೆಯಡಿ 299, 192 ಕಾಯ್ದೆಯಡಿ ಮಾಜಿ ಸಂಸದ ಪ್ರತಾಪ್ ಸಿಂಹ ಸೇರಿ 5 ಜನರ ವಿರುದ್ಧ ಕೇಸ್ ದಾಖಲಿಸಲಾಗಿದೆ ಎಂದು ತಿಳಿದುಬಂದಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಹೈಕಮಾಂಡ್ ಅದೇಶ ಪಾಲನೆ: ಗುರುವಾರ ಬೆಳಗ್ಗೆ 10.30ಕ್ಕೆ ರಾಜ್ಯಪಾಲರ ಭೇಟಿಗೆ ಸಮಯ ಕೇಳಿದ ಸಿಎಂ ಸಿದ್ದರಾಮಯ್ಯ; Video

SIR ಪ್ರಕ್ರಿಯೆಗೆ ಸುಪ್ರೀಂ ಕೋರ್ಟ್ ಗ್ರೀನ್ ಸಿಗ್ನಲ್; ಮುಕ್ತ ಹಾಗೂ ನ್ಯಾಯಸಮ್ಮತ ಚುನಾವಣೆಗೆ ಅಗತ್ಯ ಎಂದ ನ್ಯಾಯಪೀಠ..!

Mysuru Rain: ಸಿಡಿಲು ಬಡಿದು ಬೆಂಗಳೂರಿನ ಟೆಕ್ಕಿ ಸಾವು

ರಾಜ್ಯದ ಮುಂದಿನ ಮುಖ್ಯಮಂತ್ರಿಯಾಗಿ ಡಿ.ಕೆ ಶಿವಕುಮಾರ್ ಹೆಸರು ಬಹುತೇಕ ಫೈನಲ್? ಕಾಂಗ್ರೆಸ್‌ನಲ್ಲಿ ಗರಿಗೆದರಿದ ರಾಜಕೀಯ ಚಟುವಟಿಕೆ..!

ದೆಹಲಿ ಸಭೆ ಬಳಿಕ ಬೆಂಗಳೂರಿನಲ್ಲಿ ಶಕ್ತಿ ಪ್ರದರ್ಶನಕ್ಕೆ ಸಿದ್ದರಾಮಯ್ಯ ಸಜ್ಜು: ಬೆಂಬಲಿಗರ ಜೊತೆ ಮಹತ್ವದ ಸಭೆ, ಹೆಚ್ಚಿದ ಕುತೂಹಲ

SCROLL FOR NEXT