ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ರಾಜ್ಯ

ಯಾವುದೇ ಖಾಸಗಿ ವೇದಿಕೆಗಳು ನ್ಯಾಯಾಲಯದ ಲೈವ್‌ಸ್ಟ್ರೀಮ್‌ ವಿಡಿಯೋಗಳನ್ನು ಬಳಸಕೂಡದು: ಹೈಕೋರ್ಟ್‌ ಆದೇಶ

ಹಣ ಮಾಡುವ ಉದ್ದೇಶದಿಂದ ಹೈಕೋರ್ಟ್'ನ ಲೈವ್ ಸ್ಟ್ರೀಮ್ ವಿಡಿಯೋಗಳನ್ನು ಮನಸೋ ಇಚ್ಛೆ ಎಡಿಟ್ ಮಾಡಿ ಪ್ರಸಾರ ಮಾಡುತ್ತಿರುವುದಕ್ಕೆ ಆಕ್ಷೇಪಿಸಿ ಬೆಂಗಳೂರು ವಕೀಲರ ಸಂಘ ಸಲ್ಲಿಸಿದ್ದರು.

ಸಂಗ್ರಹ ಚಿತ್ರ
Manjula VN
Updated On : 25 Sept 2024, 10:20 am

ಬೆಂಗಳೂರು: ನ್ಯಾಯಾಲಯ ಕಲಾಪದ ಲೈವ್‌ಸ್ಟ್ರೀಮ್‌ ವಿಡಿಯೋಗಳನ್ನು ಯಾವುದೇ ಖಾಸಗಿ ವೇದಿಕೆಗಳು ಬಳಸಕೂಡದು. ಈಗಾಗಲೇ ಬಳಸಿರುವ ವಿಡಿಯೋಗಳನ್ನು ಕೂಡಲೇ ತೆಗೆದು ಹಾಕುವಂತೆ ಹೈಕೋರ್ಟ್ ಕಟ್ಟುನಿಟ್ಟಿನ ಆದೇಶ ಹೊರಡಿಸಿದೆ.

ಹಣ ಮಾಡುವ ಉದ್ದೇಶದಿಂದ ಹೈಕೋರ್ಟ್'ನ ಲೈವ್ ಸ್ಟ್ರೀಮ್ ವಿಡಿಯೋಗಳನ್ನು ಮನಸೋ ಇಚ್ಛೆ ಎಡಿಟ್ ಮಾಡಿ ಪ್ರಸಾರ ಮಾಡುತ್ತಿರುವುದಕ್ಕೆ ಆಕ್ಷೇಪಿಸಿ ಬೆಂಗಳೂರು ವಕೀಲರ ಸಂಘ ಸಲ್ಲಿಸಿದ್ದರು.

ಈ ಅರ್ಜಿಯ ವಿಚಾರಣೆಯನ್ನು ನ್ಯಾಯಮೂರ್ತಿ ಹೇಮಂತ್ ಚಂದನ್ ಗೌಡರ್ ಅವರಿದ್ದ ಏಕಸದಸ್ಯ ಪೀಠ ವಿಚಾರಣೆ ನಡೆಸಿತು.

Advertisement

Advertisement

ಈ ವೇಳೆ ಯಾವುದೇ ಖಾಸಗಿ ವೇದಿಕೆಗಳು ಹೈಕೋರ್ಟ್‌ನ ಲೈವ್‌ಸ್ಟ್ರೀಮ್‌ ವಿಡಿಯೋಗಳನ್ನೂ ಬಳಸಕೂಡದು. 2022ರ ಜ.1ರಂದು ರಾಜ್ಯ ಹೈಕೋರ್ಟ್‌ ಜಾರಿಗೊಳಿಸಿರುವ ಕರ್ನಾಟಕ ನ್ಯಾಯಾಲಯ ಕಲಾಪಗಳ ನೇರಪ್ರಸಾರ ಮತ್ತು ರೆಕಾರ್ಡಿಂಗ್‌ ನಿಯಮಗಳು 2021ರ ನಿಯಮಗಳನ್ನು ಎಲ್ಲರೂ ಕಡ್ಡಾಯವಾಗಿ ಪಾಲನೆ ಮಾಡಬೇಕು ಎಂದು ಆದೇಶಿಸಿತು.

Also Read

ನ್ಯಾಯಾಧೀಶರ ವಿವಾದಾತ್ಮಕ ಹೇಳಿಕೆ ನಂತರ ಹೈಕೋರ್ಟ್ ಕಲಾಪ ನೇರ ಪ್ರಸಾರಕ್ಕೆ ಕಟ್ಟುನಿಟ್ಟಿನ ಮಾರ್ಗಸೂಚಿ ಬಿಡುಗಡೆ

ಅಲ್ಲದೆ, ಅರ್ಜಿಯಲ್ಲಿ ಪ್ರತಿವಾದಿಗಳಾಗಿರುವವರು ತಮ್ಮ ಡಿಜಿಟಲ್‌ ವೇದಿಕೆಗಳಲ್ಲಿ ಬಳಸಿರುವ ಹೈಕೋರ್ಟ್‌ ಲೈವ್‌ಸ್ಟ್ರೀಮ್‌ ವಿಡಿಯೋಗಳನ್ನು ತಕ್ಷಣ ತೆಗೆದು ಹಾಕಬೇಕೆಂಮದು ಸೂಚಿಸಿತು.

ಈ ವೇದಿಕೆಗಳಲ್ಲಿನ ಕೋರ್ಟ್‌ ಕಲಾಪದ ವಿಡಿಯೋಗಳನ್ನು ಯೂಟ್ಯೂಬ್‌, ಫೇಸ್‌ಬುಕ್‌, ಎಕ್ಸ್‌ ಕಾರ್ಪ್‌ಗಳು ತಕ್ಷಣ ಅಳಿಸಿ ಹಾಕಬೇಕು ಎಂದು ನಿರ್ದೇಶಿಸಿತು.

ಅರ್ಜಿಯಲ್ಲಿ ಪ್ರತಿವಾದಿಗಳಾದ ಮಾಹಿತಿ ಮತ್ತು ಪ್ರಸಾರ ಸಚಿವಾಲಯ, ವಿದ್ಯುನ್ಮಾನ ಮತ್ತು ಮಾಹಿತಿ ತಂತ್ರಜ್ಞಾನ ಸಚಿವಾಲಯ, ಕರ್ನಾಟಕ ಹೈಕೋರ್ಟ್‌ ರಿಜಿಸ್ಟ್ರಾರ್‌ ಜನರಲ್‌, ರಾಜ್ಯ ಸರಕಾರ, ರಾಜ್ಯ ಪೊಲೀಸ್‌ ಮಹಾನಿರ್ದೇಶಕರು, ಯೂಟ್ಯೂಬ್‌, ಫೇಸ್‌ಬುಕ್‌, ಎಕ್ಸ್‌ ಕಾರ್ಪ್‌, ಕಹಳೆ ನ್ಯೂಸ್‌, ಫ್ಯಾನ್ಸ್‌ ಟ್ರೋಲ್‌, ಪ್ರತಿಧ್ವನಿ, ಅವನಿಯಾನ ಮತ್ತು ರವೀಂದ್ರ ಜೋಶಿ ಕ್ರಿಯೇಷನ್ಸ್‌ಗಳಿಗೆ ನೋಟಿಸ್‌ ಜಾರಿಗೊಳಿಸಿದ ನ್ಯಾಯಾಲಯ, ಅರ್ಜಿಗೆ ಆಕ್ಷೇಪಣೆ ಸಲ್ಲಿಸುವಂತೆ ಸೂಚಿಸಿ ವಿಚಾರಣೆ ಮುಂದೂಡಿತು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement