ವಿಧಾನಸೌಧದಲ್ಲಿ ಸರ್ಕಾರದ ವಿವಿಧ ನೇಮಕಾತಿಗಳ ಪ್ರಗತಿ ಪರಿಶೀಲನೆ ನಡೆಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ. 
ರಾಜ್ಯ

UPSC ಮಾದರಿಯಲ್ಲಿ KPSC ಪರೀಕ್ಷೆ ನಡೆಸಿ: ಅಧಿಕಾರಿಗಳಿಗೆ ಸಿಎಂ ಸಿದ್ದರಾಮಯ್ಯ ಸೂಚನೆ

ಸಚಿವ ಸಂಪುಟ ಉಪ ಸಮಿತಿಯ ಸೂಚನೆಗಳನ್ನು ಇಲಾಖಾ ಮುಖ್ಯಸ್ಥರು ಪಾಲಿಸಬೇಕು ಎಂದು ಮುಖ್ಯಮಂತ್ರಿಗಳು ಸೂಚಿಸಿದರು. ತಪ್ಪಿದಲ್ಲಿ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದರು.

ಬೆಂಗಳೂರು: ಯುಪಿಎಸ್‌ಸಿ ಮಾದರಿಯಲ್ಲೇ ಕೆಪಿಎಸ್‌ಸಿ ಪರೀಕ್ಷೆ ನಡೆಸಲು ಅಗತ್ಯ ಕ್ರಮಗಳ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬುಧವಾರ ಸೂಚನೆ ನೀಡಿದರು.

ಮುಖ್ಯಮಂತ್ರಿಗಳು ವಿಧಾನಸೌಧದಲ್ಲಿ ಸರ್ಕಾರದ ವತಿಯಿಂದ ವಿವಿಧ ನೇಮಕಾತಿ ಗಳ ಪ್ರಗತಿ ಪರಿಶೀಲನೆ ನಡೆಸಿದರು.

ಈ ವೇಳೆ ನೇಮಕಾತಿ ಪ್ರಕ್ರಿಯೆಗಳ ವಿಳಂಬ, ಕಾನೂನು ತೊಡಕುಗಳು ಹಾಗೂ 371 ಜೆ ಅಡಿ ಮೀಸಲಾತಿಗೆ ಸಂಬಂಧಿಸಿದ ಸವಾಲುಗಳ ಕುರಿತು ಚರ್ಚೆ ನಡೆಸಿದರು.

ಪ್ರತಿವರ್ಷ ಎಲ್ಲ ಇಲಾಖೆಗಳ ನೇಮಕಾತಿಗೆ ಏಕಕಾಲಕ್ಕೆ ಅಧಿಸೂಚನೆ ಹೊರಡಿಸಲು ಅನುವಾಗುವಂತೆ ಎಲ್ಲ ಇಲಾಖೆಗಳು ನಿಗದಿತ ಗಡುವಿನೊಳಗೆ ನೇಮಕಾತಿ ಕುರಿತು ಪ್ರಸ್ತಾವನೆಗಳನ್ನು ಸಲ್ಲಿಸಬೇಕು. ಪರೀಕ್ಷಾ ವೇಳಾಪಟ್ಟಿಯಲ್ಲಿ ಫಲಿತಾಂಶ ಪ್ರಕಟಣೆಯ ದಿನಾಂಕ ನಿಗದಿಪಡಿಸಲು ತಿಳಿಸಿದರು.

ಬಳಿಕ ಕಲ್ಯಾಣ ಕರ್ನಾಟಕ ಅಭ್ಯರ್ಥಿಗಳ ನೇಮಕಾತಿಗೆ ಸಂಬಂಧಿಸಿದಂತೆ ಇರುವ ಗೊಂದಲಗಳ ಕುರಿತು ಸವಿಸ್ತಾರವಾಗಿ ಪರಿಶೀಲಿಸಿ, ಸಚಿವ ಸಂಪುಟ ಉಪಸಮಿತಿಯ ಆದೇಶಗಳ ಪಾಲನೆಯ ಕುರಿತು ಸಹ, ಸಚಿವ ಸಂಪುಟದ ಮುಂದೆ ವಿಷಯ ಮಂಡಿಸಲು ಸೂಚಿಸಿದರು.

ಸಚಿವ ಸಂಪುಟ ಉಪ ಸಮಿತಿಯ ಸೂಚನೆಗಳನ್ನು ಇಲಾಖಾ ಮುಖ್ಯಸ್ಥರು ಪಾಲಿಸಬೇಕು ಎಂದು ಮುಖ್ಯಮಂತ್ರಿಗಳು ಸೂಚಿಸಿದರು. ತಪ್ಪಿದಲ್ಲಿ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದರು.

ಪ್ರತಿ ನೇಮಕಾತಿ ಪ್ರಕ್ರಿಯೆಯು ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆಯ ಕಲ್ಯಾಣ ಕರ್ನಾಟಕ ಕೋಶದ ಸಹಮತಿಯೊಂದಿಗೆ ಅಧಿಸೂಚನೆ ಹೊರಡಿಸಬೇಕೆಂದು ಸೂಚನೆ ನೀಡಿದರು.

ಅಂತಿಮ ಆಯ್ಕೆ ಪಟ್ಟಿ ಪ್ರಕಟವಾದ ನಂತರ ಸಿಂಧುತ್ವ ಪ್ರಮಾಣ ಪತ್ರ ನೀಡುವಲ್ಲಿ ವಿಳಂಬವಾಗುವುದರಿಂದ ನೇಮಕಾತಿ ಆದೇಶ ನೀಡುವಲ್ಲಿಯೂ ವಿಳಂಬವಾಗುತ್ತಿದೆ. ಈ ಹಿನ್ನೆಲೆಯಲ್ಲಿ ನೇಮಕಾತಿ ಬಗ್ಗೆ ಇಲಾಖಾ ಮುಖ್ಯಸ್ಥರು, ಪ್ರತಿ ವಾರ ಪರಿಶೀಲನೆ ಮಾಡಬೇಕು. ಸುತ್ತೋಲೆಗಳ ಕೈಪಿಡಿಗಳನ್ನು ಸಂಬಂಧಿಸಿದ ಅಧಿಕಾರಿಗಳಿಗೆ ಕಳುಹಿಸಬೇಕೆಂದು ಸೂಚಿಸಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಉಪ ಚುನಾವಣೆ ಫಲಿತಾಂಶ| ಅಸ್ಸಾಂ, ಪ.ಬಂಗಾಳ, ತಮಿಳುನಾಡು, ಪುದುಚೇರಿಯ ಆರು ಕ್ಷೇತ್ರಗಳಲ್ಲಿ ಮತ ಎಣಿಕೆ ಪ್ರಗತಿಯಲ್ಲಿ

ಬಾಲಿವುಡ್ ನಟ ನಾನಾ ಪಾಟೇಕರ್ ನಿಧನಕ್ಕೆ ಬಿಗ್ ಟ್ವಿಸ್ಟ್: ಅಸಹಜ ಸಾವು ಕೇಸ್ ದಾಖಲಿಸಿದ ಗೋವಾ ಪೊಲೀಸರು!

ರೈಲಿನಲ್ಲಿ 'ನನ್ನ ಸುತ್ತಲೂ ಬರೀ ಪುರುಷರೇ ಇದ್ದಾರೆ': ಆಂಧ್ರದಲ್ಲಿ ಶವವಾಗಿ ಪತ್ತೆಯಾದ ಡ್ಯಾನ್ಸರ್‌ ಕೊನೆಯ ಸಂದೇಶ!

ಬೇಕಾದರೆ ನನ್ನ ವಿರುದ್ಧವೂ ಫಾರ್ಮ್‌ - 7 ಸಲ್ಲಿಸಿ: ಕಾಂಗ್ರೆಸ್'ಗೆ BJP ಸಂಸದ ಯದುವೀರ್ ಒಡೆಯರ್ ಸವಾಲು

Sting operation ಮೂಲಕ ನಿಮ್ಮನ್ನು ಸಿಲುಕಿಸಲು ಯತ್ನಿಸಿರುವುದು ನಿಜವೇ ಆಗಿದ್ದರೆ ತನಿಖೆಗೆ ಆದೇಶಿಸಿ: ಸಿಎಂ ಡಿಕೆ.ಶಿವಕುಮಾರ್'ಗೆ HDK ಸವಾಲು