ಮಳಖೇಡ ಕೋಟೆಯ ಗೋಡೆ ಮತ್ತೆ ಕುಸಿತ 
ರಾಜ್ಯ

Video: ಭಾರಿ ಮಳೆ; ಮಳಖೇಡ ಕೋಟೆಯ ಗೋಡೆ ಮತ್ತೆ ಕುಸಿತ

ಗುರುವಾರ ಬೆಳಿಗ್ಗೆ ಇದ್ದಕ್ಕಿದ್ದಂತೆ ದಿಢೀರ್ ಕೋಟೆಯ ಗೋಡೆ ನೆಲಕ್ಕುರುಳಿದೆ. ಈ ಕುರಿತ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ.

ಕಲಬುರಗಿ: ಕಲಬುರಗಿಯಲ್ಲಿ ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಇಲ್ಲಿನ ಸೇಡಂ ತಾಲ್ಲೂಕಿನ ಇತಿಹಾಸ ಪ್ರಸಿದ್ಧ ಮಳಖೇಡ ಕೋಟೆಯ ಗೋಡೆ ಮತ್ತೆ ಗುರುವಾರ ಕುಸಿದುಬಿದ್ದಿದೆ.

ಸೇಡಂ ಪಟ್ಟಣ ಸೇರಿದಂತೆ ತಾಲ್ಲೂಕಿನ ‌ವಿವಿಧೆಡೆ ಮಂಗಳವಾರ ಮತ್ತು ಬುಧವಾರ ರಾತ್ರಿ ಜೋರು ಮಳೆಯಾಗಿದ್ದು, ಸತತ ಮಳೆಗೆ ಐತಿಹಾಸಿಕ ಮಳಖೇಡ ಕೋಟೆಯ ಗೋಡೆ ತೇವಗೊಂಡು ಕುಸಿದಿದೆ.

ಗುರುವಾರ ಬೆಳಿಗ್ಗೆ ಇದ್ದಕ್ಕಿದ್ದಂತೆ ದಿಢೀರ್ ಕೋಟೆಯ ಗೋಡೆ ನೆಲಕ್ಕುರುಳಿದೆ. ಈ ಕುರಿತ ವಿಡಿಯೋ ಸಾಮಾಜಿಕಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ.

ಕಳೆದ ತಿಂಗಳ ಆಗಸ್ಟ್ 31ರಂದು ಸಹ ಸತತ ಮಳೆಗೆ ಕೋಟೆಯ ಮತ್ತೊಂದು ಗೋಡೆ ಉರುಳಿ ಬಿದ್ದಿತ್ತು. ಆಗ ವೈದ್ಯಕೀಯ ಶಿಕ್ಷಣ ಸಚಿವ ಡಾ.ಶರಣಪ್ರಕಾಶ ಪಾಟೀಲ, ಜಿಲ್ಲಾಧಿಕಾರಿ ಫೌಜಿಯಾ ತರನ್ನುಮ್, ಉಪವಿಭಾಗ ಅಧಿಕಾರಿ ಪ್ರಭುರೆಡ್ಡಿ, ತಹಶೀಲ್ದಾರ್ ಶ್ರೀಯಾಂಕಾ ಧನಶ್ರೀ ಭೇಟಿ ನೀಡಿದ್ದರು.‌ ಪುರಾತತ್ವ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತರುವುದಾಗಿ ಹೇಳಿದ್ದರು.

ಆದರೆ ಕಳೆದೆರಡು ದಿನಗಳಿಂದ ಸುರಿದ ಮಳೆಗೆ ತಿಂಗಳಲ್ಲಿ ಎರಡನೇ ಬಾರಿ ಕೋಟೆಯ ಗೋಡೆ ಉರುಳಿ ಬಿದ್ದಿದೆ. ಸತತ ಮಳೆಯಿಂದಾಗಿ ಕೋಟೆಯ ಕೆಲ ಭಾಗಕ್ಕೆ ಹಾನಿಯಾಗಿದ್ದು, ಅವು ಕೂಡ ಕುಸಿಯುವ ಭೀತಿ ಎಂದು ಸ್ಥಳೀಯರು ಆತಂಕ ವ್ಯಕ್ತಪಡಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'24 ಗಂಟೆಯೊಳಗೆ ಬಂಧಿತರ ಬಿಡುಗಡೆ ಮಾಡದಿದ್ದರೆ ನಾನೂ ಪ್ರತಿಭಟನೆ ಮಾಡುತ್ತೇನೆ': ಸೋನಮ್ ವಾಂಗ್‌ಚುಕ್ ಎಚ್ಚರಿಕೆ

ವೀರಶೈವ-ಲಿಂಗಾಯತ ಬೇರೆ ಮಾಡಲು ಹೋದಾಗ ಮಠಾಧೀಶರ ಕ್ಷಮೆ ಕೇಳಿದ್ದೆ: ನಾವು ಸೂಜಿಯಂತೆ ಹೊಲಿಯುವವರೇ ಹೊರತು ಕತ್ತರಿಯಲ್ಲ ಎಂದ ಸಿಎಂ ಡಿಕೆಶಿ

ಡಿಕೆಶಿನೇ ಹೇಳಿದ್ದಾರೆ ನಿನ್ನ ಕ್ಷೇತ್ರಕ್ಕೆ ನಾನೇ ಬಾಸ್ ಅಂತ: ನನ್ನ ಕ್ಷೇತ್ರಕ್ಕೆ ಕೈ ಹಾಕಿದ್ರೆ ಬಿಡಲ್ಲ; MC Sudhakarಗೆ ಪ್ರದೀಪ್ ಪರೋಕ್ಷ ಟಾಂಗ್‌

'SIR ನಿಲ್ಲಲ್ಲ, ಜ್ಞಾನೇಶ್ ಕುಮಾರ್ ಕೂಡ ಹೋಗಲ್ಲ’; ಪ್ರಶ್ನೆ ಏನು ಅಂದ್ರೆ ಪ್ರತಿಭಟನೆಗಳ ಗತಿ ಏನು?: ಪತ್ರಕರ್ತ ಭೂಪೇಂದ್ರ ಚೌಬೆ

Super Emergency: ತಾರಕಕ್ಕೇರಿದ ದೆಹಲಿ ಪ್ರತಿಭಟನೆ, ಬರೊಬ್ಬರಿ 3 ಸಾವಿರ ಮಂದಿ ವಶಕ್ಕೆ, ವಿಪಕ್ಷಗಳ ಆಕ್ರೋಶ!