ನಿತಿನ್ ಗಡ್ಕರಿ ಸನ್ಮಾನಿಸಿದ ಸತೀಶ್ ಜಾರಕಿಹೊಳಿ 
ರಾಜ್ಯ

ರಾಜಕೀಯ ಪಕ್ಷದಂತೆ ಕೆಲಸ ಮಾಡುವುದನ್ನು ನಿಲ್ಲಿಸಿ: ಇಂಡಿಯನ್ ರೋಡ್ ಕಾಂಗ್ರೆಸ್​​ ಗೆ ನಿತಿನ್ ಗಡ್ಕರಿ ಸೂಚನೆ

ನಗರದ ಖಾಸಗಿ ಹೋಟೆಲ್ ನಲ್ಲಿ ಇಂಡಿಯನ್ ರೋಡ್ ಕಾಂಗ್ರೆಸ್ ಆಯೋಜಿಸಿದ್ದ ಅಡ್ವಾನ್ಸ್ ಇನ್ ಬ್ರಿಡ್ಜ್ ಮ್ಯಾನೇಜ್ ಮೆಂಟ್ ಅಂತಾರಾಷ್ಟ್ರೀಯ ವಿಚಾರ ಸಂಕಿರಣದಲ್ಲಿ ಪಾಲ್ಗೊಂಡು ಮಾತನಾಡಿದ ನಿತಿನ್ ಗಡ್ಕರಿ

ಬೆಂಗಳೂರು: ದೇಶದ ಮೂಲಸೌಕರ್ಯ ನಿರ್ಮಾಣದ ತಾಂತ್ರಿಕ ಅಂಶಗಳಿಗೆ ಸಂಬಂಧಿಸಿದಂತೆ ಮಾರ್ಗದರ್ಶನ ನೀಡುತ್ತಾ ಬಂದಿರುವ 90 ವರ್ಷಗಳಷ್ಟು ಹಳೆಯದಾದ ಇಂಡಿಯನ್ ರೋಡ್ ಕಾಂಗ್ರೆಸ್ ರಾಜಕೀಯ ಪಕ್ಷದಂತೆ ಕಾರ್ಯನಿರ್ವಹಿಸುತ್ತಿದೆ ಎಂದು ಕೇಂದ್ರ ಸಚಿವ ನಿತಿನ್ ಗಡ್ಕರಿ ಗುರುವಾರ ಟೀಕಿಸಿದ್ದಾರೆ.

ನಗರದ ಖಾಸಗಿ ಹೋಟೆಲ್ ನಲ್ಲಿ ಇಂಡಿಯನ್ ರೋಡ್ ಕಾಂಗ್ರೆಸ್ ಆಯೋಜಿಸಿದ್ದ ಅಡ್ವಾನ್ಸ್ ಇನ್ ಬ್ರಿಡ್ಜ್ ಮ್ಯಾನೇಜ್ ಮೆಂಟ್ ಅಂತಾರಾಷ್ಟ್ರೀಯ ವಿಚಾರ ಸಂಕಿರಣದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಇಂಡಿಯನ್ ರೋಡ್ ಕಾಂಗ್ರೆಸ್ ರಾಜಕೀಯ ಪಕ್ಷದಂತೆ ಕೆಲಸ ಮಾಡುತ್ತಿದ್ದೀರಿ ಎಂದು ಅನಿಸುತ್ತದೆ. ಇದು ವೃತ್ತಿಪರ ಸಂಸ್ಥೆಯಾಗಿದ್ದು, ಪ್ರಯೋಗಾಲಯಗಳೊಂದಿಗೆ ಶಾಶ್ವತ ಕಚೇರಿ ಹೊಂದಿರಬೇಕು. ಸಂಶೋಧನೆ ತಂತ್ರಜ್ಞಾನದಲ್ಲಿ ಆಸಕ್ತಿ ಹೊಂದಿರುವ ಜನರನ್ನು ಪೂರ್ಣವಧಿ ಕೆಲಸಕ್ಕೆ ನೇಮಿಸಿಕೊಳ್ಳಬೇಕು ಮತ್ತು ಅವರ ಅನುಭವ ಮತ್ತು ಜ್ಞಾನವನ್ನು ಸದ್ಬಳಕೆ ಮಾಡಿಕೊಳ್ಳಬೇಕು ಎಂದು ತಿಳಿಸಿದರು.

ಇಂಡಿಯನ್ ರೋಡ್ ಕಾಂಗ್ರೆಸ್ ಉತ್ತಮ ಕಾರ್ಯನಿರ್ವಹಣೆಗೆ ಜಾಗ ಮತ್ತು ಅನುದಾನವನ್ನು ಒದಗಿಸಲಾಗುವುದು. ಆದರೆ ನೀವು ಸ್ವತಂತ್ರ, ನಿಷ್ಪಕ್ಷಪಾತ ಮತ್ತು ನ್ಯಾಯಯುತ ಸಂಘಟನೆಯಾಗಿರಬೇಕು. ಕರ್ನಾಟಕ ಸೇರಿದಂತೆ ಎಲ್ಲಾ ರಾಜ್ಯ ಸರ್ಕಾರಗಳು ಇದಕ್ಕೆ ಕೊಡುಗೆ ನೀಡುತ್ತವೆ ಎಂಬ ವಿಶ್ವಾಸ ನನಗಿದೆ ಎಂದರು.

ಗುಣಮಟ್ಟದ ಕಾಮಗಾರಿ ನಡೆಯಬೇಕಾದರೆ ಸರ್ಕಾರದ ಚೌಕಟ್ಟಿನಿಂದ ಸ್ವತಂತ್ರವಾಗಿರುವುದು ಮುಖ್ಯವಾಗಿರುತ್ತದೆ. ಬೇಜವಾಬ್ದಾರಿ ವಹಿಸುವ ಅಧಿಕಾರಿಗಳು ಹಾಗೂ ಗುತ್ತಿಗೆದಾರರ ವಿರುದ್ದ ಅಮಾನತಿನ ಕ್ರಮವನ್ನು ಕೈಗೊಳ್ಳಲಾಗುತ್ತಿದೆಯ

ಈಗಿನ ವೇಗವನ್ನು ನೋಡಿದರೆ ಅಮೆರಿಕದ ಮಾದರಿಯಲ್ಲಿ ಹೆದ್ದಾರಿ ರಸ್ತೆಗಳ ಅಭಿವೃದ್ಧಿ ಮತ್ತು ಗುಣಮಟ್ಟವನ್ನು ಭಾರತ ಕೆಲವೇ ವರ್ಷದಲ್ಲಿ ಮುಟ್ಟಲಿದೆ. ನಮ್ಮ ದೇಶದ ಇಂಜಿನಿಯರ್​ಗಳ ಪಾತ್ರ ನಮ್ಮ ರಸ್ತೆಗಳು, ಹೆದ್ದಾರಿಗಳು, ಸೇತುವೆಗಳ ಬಹಳಷ್ಟಿದೆ ಎಂದು ನಿತಿನ್ ಗಡ್ಕರಿ ಶ್ಲಾಘಿಸಿದರು.

ದೇಶದಲ್ಲಿ ಸೇತುವೆಗಳ ನಿರ್ಮಾಣ, ವಿಶೇಷವಾಗಿ ಕರಾವಳಿ ಪ್ರದೇಶಗಳಲ್ಲಿ ಬಹಳಷ್ಟು ಸಮಸ್ಯೆಗಳನ್ನು ಎದುರಿಸುತ್ತಿರುವ ಕಾರಣ ಅಸ್ತಿತ್ವದಲ್ಲಿರುವ ತಂತ್ರಜ್ಞಾನಕ್ಕೆ ಗುಣಮಟ್ಟದ ಪರ್ಯಾಯಗಳ ಅಗತ್ಯವಿದೆ. ಸಮಯ ತೆಗೆದುಕೊಳ್ಳುವ ಪ್ರಕ್ರಿಯೆಗಳಿಂದಾಗಿ ಯೋಜನೆಗಳು ಆಗಾಗ್ಗೆ ಸ್ಥಗಿತಗೊಳ್ಳುತ್ತವೆ ಮತ್ತು ಇದನ್ನು ಆರಂಭಿಕ ಮತ್ತು ಪ್ರತಿ ಹಂತದಲ್ಲೂ ಪರಿಹರಿಸಬೇಕು ಎಂದು ಅವರು ಹೇಳಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT