ಬೆಂಗಳೂರಿನಲ್ಲಿ ಭೀಕರ ರಸ್ತೆ ಅಪಘಾತ: ಆಟೋಗೆ ಲಾರಿ ಡಿಕ್ಕಿ, ಯುವತಿ ದುರ್ಮರಣ
ಬೆನ್ಸನ್ ಟೌನ್ ಚಿನ್ನಪ್ಪ ಗಾರ್ಡನ್ ನಿಂದ ಬರುತ್ತಿದ್ದ ಆಟೋ ಮೆಜೆಸ್ಟಿಕ್ ಗೆ ಪ್ಯಾಸೆಂಜರ್ ಡ್ರಾಪ್ ಮಾಡಲು ಹೊರಟಿತ್ತು. ಸಿಗ್ನಲ್ ಜಂಪ್ ಮಾಡಿದ ಲಾರಿ ಡ್ರೈವರ್ ನಿಯಂತ್ರಣ ತಪ್ಪಿ ಆಟೋಗೆ ಡಿಕ್ಕಿ ಹೊಡೆದಿದ್ದಾನೆ.
ಬೆಂಗಳೂರು: ನಗರದಲ್ಲಿ ಬೆಳ್ಳಂಬೆಳಗ್ಗೆ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಲಾರಿ ಮತ್ತು ಆಟೋ ನಡುವೆ ಡಿಕ್ಕಿ ಸಂಭವಿಸಿ ಯುವತಿಯೊಬ್ಬಳು ಸಾವನ್ನಪ್ಪಿದ ಘಟನೆ ವಿಧಾನಸೌಧದ ಕೂಗಳತೆ ದೂರದಲ್ಲಿರುವ ಕಾಫಿ ಬೋರ್ಡ್ ಸಿಗ್ನಲ್ ಬಳಿ ಶನಿವಾರ ನಡೆದಿದೆ.
ಶಾಲಿನಿ ಮೃತ ದುರ್ದೈವಿ. ಬೆನ್ಸನ್ ಟೌನ್ ಚಿನ್ನಪ್ಪ ಗಾರ್ಡನ್ ನಿಂದ ಬರುತ್ತಿದ್ದ ಆಟೋ ಮೆಜೆಸ್ಟಿಕ್ ಗೆ ಪ್ಯಾಸೆಂಜರ್ ಡ್ರಾಪ್ ಮಾಡಲು ಹೊರಟಿತ್ತು. ಸಿಗ್ನಲ್ ಜಂಪ್ ಮಾಡಿದ ಲಾರಿ ಡ್ರೈವರ್ ನಿಯಂತ್ರಣ ತಪ್ಪಿ ಆಟೋಗೆ ಡಿಕ್ಕಿ ಹೊಡೆದಿದ್ದಾನೆ. ಪರಿಣಾಮ ಆಟೋ ಹಿಂಬದಿ ಸೀಟ್‌ನಲ್ಲಿ ಕುಳಿತಿದ್ದ ಯುವತಿ ಸ್ಥಳದಲ್ಲೇ ಮೃತಪಟ್ಟಿದ್ದಾಳೆ.
ಘಟನೆ ಸಂಭವಿಸುತ್ತಿದ್ದಂತೆ ಸ್ಥಳದಲ್ಲೇ ಲಾರಿ ವಾಹನವನ್ನು ಸ್ಥಳದಲ್ಲೇ ಬಿಟ್ಟು ಪರಾರಿಯಾಗಿದ್ದಾನೆ. ಘಟನೆಯಲ್ಲಿ ಆಟೋ ಚಾಲಕ ಇಮ್ರಾನ್ ಪವಾಡ ಸದೃಶ ರೀತಿಯಲ್ಲಿ ಬದುಕುಳಿದಿದ್ದಾನೆ. ಕಬ್ಬನ್ ಪಾರ್ಕ್ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.