ಮುಖ್ಯಮಂತ್ರಿ ಸಿದ್ದರಾಮಯ್ಯ 
ರಾಜ್ಯ

ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಬೇಕೋ ಬೇಡವೋ...?: ಜನರ ಅಭಿಪ್ರಾಯ ಸಂಗ್ರಹಿಸಲು ರಾಜ್ಯ ಪ್ರವಾಸಕ್ಕೆ ಸಿದ್ದರಾಮಯ್ಯ ಮುಂದು..!

ದಸರಾ ಮಹೋತ್ಸವ ಮುಗಿದ ಬಳಿಕ ರಾಜ್ಯಾದ್ಯಂತ ಸಾರ್ವಜನಿಕ ರ್ಯಾಲಿಗಳನ್ನು ಆಯೋಜಿಸುವ ಮೂಲಕ ಜನರ ಅಭಿಪ್ರಾಯ ಸಂಗ್ರಹಿಸಿ, ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಬೇಕೋ ಅಥವಾ ಬೇಡವೋ ಎಂಬುದರ ಬಗ್ಗೆ ನಿರ್ಧಾರಕ್ಕೆ ಬರಲು ನಿರ್ಧರಿಸಿದ್ದಾರೆಂದು ಮೂಲಗಳು ತಿಳಿಸಿವೆ.

ಬೆಂಗಳೂರು: ಮುಡಾ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಪಕ್ಷಕ್ಕಾಗುವ ಹಾನಿಯನ್ನು ನಿಯಂತ್ರಿಸಲು ಹಾಗೂ ವರ್ಚಸ್ಸು ಕಾಪಾಡುವ ಸಲುವಾಗಿ ರಾಜ್ಯ ಪ್ರವಾಸ ಕೈಗೊಂಡು, ಜನರ ಅಭಿಪ್ರಾಯ ಸಂಗ್ರಹಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮುಂದಾಗಿದ್ದಾರೆಂದು ತಿಳಿದುಬಂದಿದೆ.

ದಸರಾ ಮಹೋತ್ಸವ ಮುಗಿದ ಬಳಿಕ ರಾಜ್ಯಾದ್ಯಂತ ಸಾರ್ವಜನಿಕ ರ್ಯಾಲಿಗಳನ್ನು ಆಯೋಜಿಸುವ ಮೂಲಕ ಜನರ ಅಭಿಪ್ರಾಯ ಸಂಗ್ರಹಿಸಿ, ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಬೇಕೋ ಅಥವಾ ಬೇಡವೋ ಎಂಬುದರ ಬಗ್ಗೆ ನಿರ್ಧಾರಕ್ಕೆ ಬರಲು ನಿರ್ಧರಿಸಿದ್ದಾರೆಂದು ಮೂಲಗಳು ತಿಳಿಸಿವೆ.

ಈ ಹಿಂದೆ ಕರ್ನಾಟಕ ವಿದ್ಯುತ್ ನಿಗಮ ನಿಯಮಿತ ವತಿಯಿಂದ, ಯಲಹಂಕದ ಕೆಪಿಸಿಎಲ್​ ಆವರಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದ್ದ ಸಿದ್ದರಾಮಯ್ಯ ಅವರು, ಯಾವ ತಪ್ಪನ್ನೂ ಮಾಡದ ನನ್ನನ್ನು ಷಡ್ಯಂತರದಿಂದ ಇಳಿಸಲು ನೋಡುತ್ತಿದ್ದೀರಾ. ನಾನು ರಾಜಿನಾಮೆ ಕೊಡುತ್ತೇನೆ ಎಂದು ಕಾಯ್ಕೊಂಡು ಕೂತಿದ್ದೀರಾ. ಅದು ಸಾಧ್ಯವಿಲ್ಲ, ನಿಮ್ಮನ್ನು ರಾಜಕೀಯವಾಗಿ ಎದುರಿಸಿ ಗೆಲ್ಲುತ್ತೇನೆಂದು ಬಿಜೆಪಿ ಮತ್ತು ಜೆಡಿಎಸ್​ ವಿರುದ್ಧ ವಾಗ್ದಾಳಿ ನಡೆಸಿದ್ದರು.

ನನ್ನ ಮೇಲೆ ಮಾಡುತ್ತಿರುವ ಸುಳ್ಳು ಆರೋಪಗಳಿಗೆ ಯಾವತ್ತಿಗೂ ಎದರುವುದಿಲ್ಲ. ರಾಜಕೀಯವಾಗಿ ಹೋರಾಡಿ ಗೆಲ್ಲುತ್ತೇನೆ. ನಿಮ್ಮ ಆಶಿವಾರ್ದವಿರಲಿ ಎಂದು ನೆರೆದಿದ್ದವರಲ್ಲಿ ವಿನಂತಿಸಿದರು ಇದೇ ವೇಳೆ ರಾಜೀನಾಮೆ ನೀಡಬೇಕೋ, ಬೇಡವೋ ಎಂಬು ನೆರೆದಿದ್ದ ಜನರನ್ನು ಕೇಳಿದ್ದು, ಈ ವೇಳೆ ಬೇಡ ಎಂಬ ಕೂಗುಗಳು ಜನರಿಂದ ಕೇಳಿ ಬಂದಿತ್ತು. ಇದರ ಬೆನ್ನಲ್ಲೇ ಇದೀಗ ಸಿದ್ದರಾಮಯ್ಯ ಅವರು ರಾಜ್ಯ ಪ್ರವಾಸ ಕೈಗೊಂಡು, ರಾಜೀನಾಮೆ ಕುರಿತು ಜನರು ಅಭಿಪ್ರಾಯ ಸಂಗ್ರಹಿಸಲು ಮುಂದಾಗಿದ್ದಾರೆಂದು ತಿಳಿದುಬಂದಿದೆ.

ರಾಜ್ಯದಲ್ಲಿನ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರವನ್ನು ಅಸ್ಥಿರಗೊಳಿಸಲು ಬಿಜೆಪಿ ರಾಜ್ಯಪಾಲರ ಕಚೇರಿಯನ್ನು ಹೇಗೆ ದುರುಪಯೋಗಪಡಿಸಿಕೊಂಡಿದೆ ಎಂಬ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸಲು ನಾವು ರಾಷ್ಟ್ರಪತಿಗಳನ್ನು ಸಂಪರ್ಕಿಸುವ ಜೊತೆಗೆ ಜನತಾ ನ್ಯಾಯಾಲಯದ ಮೊರೆ ಹೋಗುತ್ತೇವೆ ಎಂದು ಸಚಿವರೊಬ್ಬರು ಹೇಳಿದ್ದಾರೆ.

ಇದೇ ವೇಳೆ ಮುಡಾ ಪ್ರಕರಣದಲ್ಲಿ ಸಿದ್ದರಾಮಯ್ಯನವರ ಮೂಲಕ ಪಕ್ಷಕ್ಕೆ ಆಗಿರುವ ನಷ್ಟವನ್ನು ನಿಯಂತ್ರಿಸಲು ಈ ಕಸರತ್ತು ಸಹಕಾರಿಯಾಗಲಿದೆ ಎಂದು ಕಾಂಗ್ರೆಸ್ ಪಕ್ಷದ ಹೈಕಮಾಂಡ್ ಕೂಡ ಅಭಿಪ್ರಾಯಪಟ್ಟಿದ್ದು, ತಂತ್ರವನ್ನೂ ರೂಪಿಸಿದೆ ಎಂದು ತಿಳಿದುಬಂದಿದೆ.

ವಿರೋಧ ಪಕ್ಷಗಳು ತಮ್ಮನ್ನು ಅಧಿಕಾರದಿಂದ ಕೆಳಗಿಳಿಸಲು ಯಾವ ರೀತಿಯ ಷಡ್ಯಂತ್ರ ರೂಪಿಸುತ್ತಿವೆ ಎಂಬುದನ್ನು ಜನತೆ ಮುಂದಿಡಲು ಸಿದ್ದರಾಮಯ್ಯ ಅವರು ಮುಂದಾಗಿದ್ದು, ಈ ಮೂಲಕ ಮುಡಾ ಪ್ರಕರಣ ಕೂಡ ಸೇಡಿನ ಒಂದು ಭಾಗ ಎಂಬ ಸಂದೇಶವನ್ನು ರವಾನಿಸಲಿದ್ದಾರೆಂದು ಕಾಂಗ್ರೆಸ್ ಮುಖಂಡರೊಬ್ಬರು ಹೇಳಿದ್ದಾರೆ.

ಅಕ್ಟೋಬರ್ 2, ಗಾಂಧಿ ಜಯಂತಿಯ ನಂತರ ಬಿಜೆಪಿ ಮತ್ತು ಜೆಡಿಎಸ್ ಪಕ್ಷಗಳ ನಾಯಕರ ಷಡ್ಯಂತ್ರಗಳ ಜನರಿಗೆ ತಿಳಿಸಲು ಪ್ರವಾಸ ಕೈಗೊಳ್ಳಲಾಗುತ್ತದೆ ಎಂದು ಕೆಪಿಸಿಸಿ ಮಾಧ್ಯಮ ಮತ್ತು ಸಂವಹನ ಮುಖ್ಯಸ್ಥ, ಮಾಜಿ ಎಂಎಲ್‌ಸಿ ರಮೇಶ್ ಬಾಬು ಅವರು ಹೇಳಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

'ನನ್ನ ಕುರ್ಚಿ'ಗೆ ಪ್ರಧಾನಿ ಮೋದಿ ಗೌರವ ನೀಡಬೇಕು: ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಕಿಡಿ!

ಸುಪ್ರೀಂ ಕೋರ್ಟ್‌ಗೆ ನ್ಯಾ. ಪಾಂಚೋಲಿ ಹೆಸರು ಶಿಫಾರಸು: ನ್ಯಾ. ಬಿ. ವಿ. ನಾಗರತ್ನ ತೀವ್ರ ಅಸಮಾಧಾನ!

SCROLL FOR NEXT