ಸಚಿವ ಶಿವಾನಂದ ಪಾಟೀಲ್. 
ರಾಜ್ಯ

APMCಗಳ ಡಿಜಿಟಲೀಕರಣ ಕಾರ್ಯ ಶೀಘ್ರದಲ್ಲೇ ಪೂರ್ಣ: ಸಚಿವ ಶಿವಾನಂದ ಪಾಟೀಲ್‌

ಮಾರುಕಟ್ಟೆ ವ್ಯವಸ್ಥೆಯನ್ನು ಡಿಜಿಟಲೀಕರಣಗೊಳಿಸುವುದು ಪ್ರಮುಖ ಬೇಡಿಕೆಯಾಗಿದ್ದು, ಈಗಾಗಲೇ ಈ ಪ್ರಕ್ರಿಯೆ ಪ್ರಗತಿಯಲ್ಲಿದ್ದು, ಶೀಘ್ರದಲ್ಲೇ ಪೂರ್ಣಗೊಳ್ಳಲಿದೆ.

ಬೆಂಗಳೂರು: ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಗಳ (ಎಪಿಎಂಸಿ) ಡಿಜಿಟಲೀಕರಣವು ರಾಜ್ಯಾದ್ಯಂತ ಪ್ರಗತಿಯಲ್ಲಿದ್ದು, ಶೀಘ್ರದಲ್ಲೇ ಪೂರ್ಣಗೊಳ್ಳಲಿದೆ ಎಂದು ಕೃಷಿ ಮಾರುಕಟ್ಟೆ, ಜವಳಿ ಮತ್ತು ಸಕ್ಕರೆ ಇಲಾಖೆ ಸಚಿವ ಶಿವಾನಂದ ಪಾಟೀಲ್‌ ಅವರು ಶುಕ್ರವಾರ ಹೇಳಿದರು.

ಕರ್ನಾಟಕ ವಾಣಿಜ್ಯ ಮತ್ತು ಕೈಗಾರಿಕಾ ಒಕ್ಕೂಟದ (ಎಫ್‌ಕೆಸಿಸಿಐ) 107ನೇ ವಾರ್ಷಿಕ ಮಹಾಸಭೆಯಲ್ಲಿ ಮಾತನಾಡಿದ ಸಚಿವರು, ಮಾರುಕಟ್ಟೆ ವ್ಯವಸ್ಥೆಯನ್ನು ಡಿಜಿಟಲೀಕರಣಗೊಳಿಸುವುದು ಪ್ರಮುಖ ಬೇಡಿಕೆಯಾಗಿದ್ದು, ಈಗಾಗಲೇ ಈ ಪ್ರಕ್ರಿಯೆ ಪ್ರಗತಿಯಲ್ಲಿದ್ದು, ಶೀಘ್ರದಲ್ಲೇ ಪೂರ್ಣಗೊಳ್ಳಲಿದೆ. ಈ ವ್ಯವಸ್ಥೆಯಲ್ಲಿ ಹಲವಾರು ಪಾಲುದಾರರು ಇದ್ದಾರೆ. ಯಾರಿಗೂ ಸಮಸ್ಯೆ ಆಗದಿರುವ ರೀತಿಯಲ್ಲಿ ಹೊಸ ವ್ಯವಸ್ಥೆ ಅಳವಡಿಸುವ ಕಾರ್ಯ ಮಾಡಬೇಕಾಗಿದ್ದು, ಆ ನಿಟ್ಟಿನಲ್ಲಿ ಕಾರ್ಯಗಳನ್ನು ಕೈಗೊಳ್ಳಲಾಗುತ್ತಿದೆ ಎಂದು ಹೇಳಿದರು.

ಇದಲ್ಲದೆ, ಕಾಂಗ್ರೆಸ್ ಚುನಾವಣಾ ಪ್ರಣಾಳಿಕೆಯಲ್ಲಿ ವಿವರಿಸಿರುವಂತೆ ರಾಜ್ಯದಲ್ಲಿ ಕೃಷಿ ಮಾರುಕಟ್ಟೆ ವ್ಯವಸ್ಥೆಯನ್ನು ಪುನಶ್ಚೇತನಗೊಳಿಸಲು ಸರ್ಕಾರ ಅಗತ್ಯ ಕಾನೂನು ರೂಪಿಸಿದೆ ಎಂದು ತಿಳಿಸಿದರು.

ಎಫ್‌ಕೆಸಿಸಿಐ ಅಧ್ಯಕ್ಷ ರಮೇಶ್ ಚಂದ್ರ ಲಾಹೋಟಿ ಮಾತನಾಡಿ, ಎಪಿಎಂಸಿಗಳ ಡಿಜಿಟಲೀಕರಣದಿಂದ ಕೈಗಾರಿಕಾ ಸಮುದಾಯಕ್ಕೆ ಹೆಚ್ಚಿನ ಲಾಭವಾಗಲಿದೆ ಎಂದರು

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಭಾರತ-ರಷ್ಯಾ ಆರ್ಥಿಕ ಬಾಂಧವ್ಯಕ್ಕೆ ಹೊಸ ಬಲ; ಪುಟಿನ್ ಭೇಟಿಯಾದ ಜೈಶಂಕರ್, ಪರಮಾಣು ಸಹಕಾರ ಸೇರಿ ಹಲವು ಅಂಶಗಳ ಕುರಿತು ಚರ್ಚೆ!

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!

ಬಿಜೆಪಿ MLC ಎನ್. ರವಿಕುಮಾರ್‌ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್

Cricket: ಪಂತ್‌ರಂತೆ ಆಡಲು ಪ್ರಯತ್ನಿಸಲ್ಲ, ಅವರ ಜೊತೆ ಆಡೋದು ದೊಡ್ಡ ಅನುಭವ: ಫಿಟ್ನೆಸ್ ಅಪ್ಡೇಟ್ ಕೊಟ್ಟ Dhruv Jurel

ಜೈ ಜವಾನ್, ಜೈ ಕಿಸಾನ್: ಐತಿಹಾಸಿಕ ಶತಕದ ಬಳಿಕ ಹೊಸ ಟ್ಯಾಟೂ ರಿವೀಲ್ ಮಾಡಿದ Dhruv Jurel