ಮೈಸೂರು ಚಾಮುಂಡಿ ಬೆಟ್ಟ  
ರಾಜ್ಯ

ಚಾಮುಂಡಿ ಬೆಟ್ಟದಲ್ಲಿ ಮಹಿಷ ಮಂಡಲೋತ್ಸವ ಆಚರಣೆ: ಭಕ್ತರಿಗೆ ನಾಳೆ ಪ್ರವೇಶ ನಿರ್ಬಂಧ

ಮೈಸೂರು ನಗರದಲ್ಲಿ ಮಹಿಷ ದಸರಾ ಆಚರಣೆ ಮಾಡಲು ಮಹಿಷಾ ದಸರಾ ಆಚರಣೆ ಸಮಿತಿಯಿಂದ ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ. ಇದರ ಮಧ್ಯೆ ಈಗಾಗಲೇ ಮಹಿಷಾ ದಸರಾಗೆ ಪ್ರತಾಪ್‌ ಸಿಂಹ ವಿರೋಧ ವ್ಯಕ್ತಪಡಿಸಿದ್ದಾರೆ.

ಮೈಸೂರು: ದಸರಾ ಹಬ್ಬಕ್ಕೆ ಮುನ್ನ ಚಾಮುಂಡಿ ಬೆಟ್ಟದಲ್ಲಿ ನಾಳೆ ಮಹಿಷ ಮಂಡಲೋತ್ಸವ ಆಚರಣೆ ಹಿನ್ನೆಲೆ ಮುಂಜಾಗ್ರತಾ ಕ್ರಮವಾಗಿ ಚಾಮುಂಡಿ ಬೆಟ್ಟಕ್ಕೆ ಭಕ್ತರಿಗೆ ನಿರ್ಬಂಧ ಹೇರಲಾಗಿದೆ. ಮಧ್ಯಾಹ್ನದವರೆಗೂ ನಾಡದೇವತೆ ತಾಯಿ ಚಾಮುಂಡೇಶ್ವರಿ ದರ್ಶನಕ್ಕೆ ಅವಕಾಶವಿರುವುದಿಲ್ಲ. ದಸರಾ ಹಿನ್ನೆಲೆಯಲ್ಲಿ ಸದ್ಯ ಬೆಟ್ಟದ ಮಹಿಷಾಸುರ ಪ್ರತಿಮೆಗೆ ಬಣ್ಣ ಬಳಿಯುವ ಕೆಲಸ ನಡೆಯುತ್ತಿದ್ದು, ಬಣ್ಣ ಒಣಗುವ ತನಕ ಪ್ರತಿಮೆಗೆ ಧೂಳು ಅಂಟದಂತೆ ಬಟ್ಟೆ ಹೊದಿಕೆ ಮಾಡಲಾಗಿದೆ.

ಇನ್ನು ಮೈಸೂರು ನಗರದಲ್ಲಿ ಮಹಿಷ ದಸರಾ ಆಚರಣೆ ಮಾಡಲು ಮಹಿಷಾ ದಸರಾ ಆಚರಣೆ ಸಮಿತಿಯಿಂದ ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ. ಇದರ ಮಧ್ಯೆ ಈಗಾಗಲೇ ಮಹಿಷಾ ದಸರಾಗೆ ಪ್ರತಾಪ್‌ ಸಿಂಹ ವಿರೋಧ ವ್ಯಕ್ತಪಡಿಸಿದ್ದಾರೆ.

ಇತ್ತ ಮಹಿಷ ಮಂಡಲೋತ್ಸವ ಆಚರಣೆ ವಿಚಾರವಾಗಿ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಹೆಚ್​.ಸಿ.ಮಹದೇವಪ್ಪ ಮಾತನಾಡಿ, ಯಾರು ಬೇಕಾದರೂ, ಯಾವ ತೊಂದರೆಯಾಗದಂತೆ ಅವರ ಧಾರ್ಮಿಕ ಆಚರಣೆ ಮಾಡಿಕೊಳ್ಳಬಹುದು. ಆದರೆ, ಕಾನೂನು ಸುವ್ಯವಸ್ಥೆಗೆ ಧಕ್ಕೆ ಆಗಬಾರದು ಎಂದು ಹೇಳುವ ಮೂಲಕ ಮಹಿಷ ದಸರಾ ಆಚರಣೆಗೆ ಪರೋಕ್ಷವಾಗಿ ಮಹದೇವಪ್ಪ ಒಪ್ಪಿಗೆ ಸೂಚಿಸಿದ್ದಾರೆ.

ನಿಷೇಧಾಜ್ಞೆ ಜಾರಿ: ಚಾಮುಂಡಿ ಬೆಟ್ಟ ಸೇರಿದಂತೆ ನಗರದಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ಇಂದು ಮಧ್ಯರಾತ್ರಿ 12 ಗಂಟೆಯಿಂದೆ ಸೆಪ್ಟೆಂಬರ್ 30ರ ಬೆಳಗ್ಗೆ 6 ಗಂಟೆಯವರೆಗೆ ಕಲಂ 163 ಬಿ.ಎನ್.ಎಸ್.ಎಸ್ ಅಡಿ ನಿಷೇಧಾಜ್ಞೆ ಜಾರಿಯಲ್ಲಿರಲಿದೆ.

ಸಭೆ ಸಮಾರಂಭ,  ರ್ಯಾಲಿ ಹಾಗೂ ಮೆರವಣಿಗೆಗೆ ನಿಷೇಧ ವಿಧಿಸಲಾಗಿದ್ದು ಟೌನ್ ಹಾಲ್ ಒಳ ಆವರಣ ಹೊರತುಪಡಿಸಿ ಉಳಿದೆಡೆ ನಿಷೇಧಾಜ್ಞೆ ಜಾರಿಯಲ್ಲಿರಲಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Strait of Hormuz: 'ಅಡ್ಡ ಬರುವ Iran ಸಣ್ಣ ಬೋಟ್ ಗಳ ಗುಂಡಿಟ್ಟು ಉಡಾಯಿಸಿ': ಅಮೆರಿಕ ಸೇನೆಗೆ Donald Trump ಆದೇಶ!

ಸ್ವಾತಂತ್ರ್ಯದ ನಂತರ ತಮಿಳುನಾಡು, ಪ.ಬಂಗಾಳದಲ್ಲಿ ದಾಖಲೆ ಪ್ರಮಾಣದ ಮತದಾನ, ಮತದಾರರಿಗೆ ಧನ್ಯವಾದ ಹೇಳಿದ ಚುನಾವಣಾ ಆಯೋಗ!

Hassan: 'ಬಡ್ಡಿ ಸಮೇತ ತೀರಿಸೋವರ್ಗೂ ರಾಜಕೀಯದಲ್ಲಿ ಇರ್ತೀನಿ': ಎಚ್ ಡಿಕೆ ಮುಂದೆಯೇ HD Revanna ಕಣ್ಣೀರಿನ ಶಪಥ

IPL 2026: ಮತ್ತೆ ಮುಗ್ಗರಿಸಿದ MI, 103 ರನ್ ಅಂತರದಲ್ಲಿ CSKಗೆ ಜಯ!

IPL 2026: MI ವಿರುದ್ಧ ಸ್ಫೋಟಕ ಬ್ಯಾಟಿಂಗ್, ಶತಕದ ಮೂಲಕ ಐತಿಹಾಸ ನಿರ್ಮಿಸಿದ Sanju Samson, ಎಲೈಟ್ ಗ್ರೂಪ್ ಸೇರ್ಪಡೆ

SCROLL FOR NEXT