ಸಚಿವ ಜಮೀರ್ ಅಹ್ಮದ್ ಖಾನ್ 
ರಾಜ್ಯ

ಸಚಿವ ಜಮೀರ್ ಅಹ್ಮದ್ ಖಾನ್ ವಿರುದ್ಧ ನ್ಯಾಯಾಂಗ ನಿಂದನೆ ಪ್ರಕರಣ!

ಹೈಕೋರ್ಟ್‌ ತೀರ್ಪನ್ನು ಪೊಲಿಟಿಕಲ್‌ ಜಡ್ಜ್‌ಮೆಂಟ್‌ (Political Judgement) ಎಂದಿದ್ದ ಅಲ್ಪಸಂಖ್ಯಾತ ಕಲ್ಯಾಣ ಖಾತೆಯ ಸಚಿವ ಜಮೀರ್‌ ಅಹ್ಮದ್‌ (Zameer Ahmed) ವಿರುದ್ಧ ಸಾಮಾಜಿಕ ಕಾರ್ಯಕರ್ತ ಟಿ ಜೆ ಅಬ್ರಹಾಂ ದೂರು ನೀಡಿದ್ದಾರೆ.

ಬೆಂಗಳೂರು: ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ನಾಟಕ ಹೈಕೋರ್ಟ್ ನೀಡಿದ್ದ ತೀರ್ಪಿನ ಕುರಿತು ಮಾತನಾಡಿದ್ದ ಸಚಿವ ಜಮೀರ್ ಅಹ್ಮದ್ ಖಾನ್ ವಿರುದ್ಧ ನಿಂದನೆ ಪ್ರಕರಣ ದಾಖಲಿಸುವಂತೆ ದೂರು ನೀಡಲಾಗಿದೆ.

ಹೈಕೋರ್ಟ್‌ ತೀರ್ಪನ್ನು ಪೊಲಿಟಿಕಲ್‌ ಜಡ್ಜ್‌ಮೆಂಟ್‌ (Political Judgement) ಎಂದಿದ್ದ ಅಲ್ಪಸಂಖ್ಯಾತ ಕಲ್ಯಾಣ ಖಾತೆಯ ಸಚಿವ ಜಮೀರ್‌ ಅಹ್ಮದ್‌ (Zameer Ahmed) ವಿರುದ್ಧ ಸಾಮಾಜಿಕ ಕಾರ್ಯಕರ್ತ ಟಿ ಜೆ ಅಬ್ರಹಾಂ (TJ Abraham) ದೂರು ನೀಡಿದ್ದಾರೆ.

ಹೈಕೋರ್ಟ್‌ ತೀರ್ಪನ್ನು ಪೊಲಿಟಿಕಲ್‌ ಜಡ್ಜ್‌ಮೆಂಟ್‌ ಎಂದು ಕರೆದಿದ್ದಾರೆ. ಹೀಗಾಗಿ ಜಮೀರ್‌ ವಿರುದ್ಧ ನ್ಯಾಯಾಂಗ ನಿಂದನೆ (Contempt of Court) ಪ್ರಕರಣ ದಾಖಲಿಸುವಂತೆ ಅಡ್ವೋಕೆಟ್‌ ಜನರಲ್‌ ಶಶಿಕಿರಣ್ ಶೆಟ್ಟಿಗೆ ಟಿ ಜೆ ಅಬ್ರಹಾಂ ದೂರು ಕೊಟ್ಟಿದ್ದಾರೆ.

ಚಾಮರಾಜಪೇಟೆ ಕಾಂಗ್ರೆಸ್ ಶಾಸಕರಾಗಿದ್ದ ಜಮೀರ್ ಅಹ್ಮದ್ ಖಾನ್ ವಿರುದ್ಧ ಕ್ರಿಮಿನಲ್ ಪ್ರಕ್ರಿಯೆ ಆರಂಭಿಸಲು ನ್ಯಾಯಾಂಗ ನಿಂದನೆ ಕಾಯಿದೆ 1971 ಸೆಕ್ಷನ್ 15(ಅ)(ಬಿ) ಅಡಿ ಒಪ್ಪಿಗೆ ನೀಡುವಂತೆ ಅಡ್ವೊಕೇಟ್ ಜನರಲ್‌ಗೆ ಮೂಲ ದಾವೆಯಲ್ಲಿ ಪ್ರತಿವಾದಿ ಆಗಿರುವ ಅಬ್ರಹಾಂ ಮನವಿ ಮಾಡಿದ್ದಾರೆ ಎಂದು ತಿಳಿದುಬಂದಿದೆ.

ಮುಡಾ(ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ – MUDA) ಪ್ರಕರಣದಲ್ಲಿ ಸಿಎಂ ಸಿದ್ದರಾಮಯ್ಯ ವಿರುದ್ಧ ತನಿಖೆಗೆ ಹೈಕೋರ್ಟ್‌ ಗ್ರೀನ್‌ ಸಿಗ್ನಲ್‌ ನೀಡಿತ್ತು. ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿದ್ದ ರಾಜ್ಯಪಾಲರ ಆದೇಶವನ್ನು ಎತ್ತಿ ಹಿಡಿದ ಹೈಕೋರ್ಟ್‌ ಸಿದ್ದರಾಮಯ್ಯ ಸಲ್ಲಿಸಿದ್ದ ರಿಟ್‌ ಅರ್ಜಿಯನ್ನು ವಜಾಗೊಳಿಸಿತ್ತು.

ಈ ಆದೇಶಕ್ಕೆ ಸಂಬಂಧಿಸಿದಂತೆ ಬುಧವಾರ ಮಾಧ್ಯಮಗಳ ಜೊತೆ ಮಾತನಾಡಿದ್ದ ಜಮೀರ್‌, ನಾನು ಬಿಡಿಸಿ ಹೇಳುವಂತಿಲ್ಲ. ನಿನ್ನೆ ಬಂದಿರುವುದು ಎಲ್ಲೋ ಒಂದು ಕಡೆ ಪೊಲಿಟಿಕಲ್‌ ಜಡ್ಜ್‌ಮೆಂಟ್‌. ಇದು ನನ್ನ ವೈಯಕ್ತಿಕ ಅಭಿಪ್ರಾಯ. ತನಿಖೆ ನಡೆದರೆ ಸತ್ಯಾಂಶ ಆಚೆ ಬರುತ್ತೆ ತಾನೆ? ಈ ಪ್ರಕರಣದಲ್ಲಿ ಸಿದ್ದರಾಮಯ್ಯ ಅವರ ಪಾತ್ರ ಇಲ್ಲ ಎಂದಿದ್ದರು.

ಈ ಬಗ್ಗೆ ಮಾತನಾಡಿರುವ ಸಾಮಾಜಿಕ ಕಾರ್ಯಕರ್ತ ಟಿ.ಜೆ. ಅಬ್ರಹಾಂ, 'ಹೈಕೋರ್ಟ್ ತೀರ್ಪು ಬಗ್ಗೆ ಮಾತನಾಡುವುದು ಅಂದರೆ ಹುಡುಗಾಟನಾ. ರಾಜಕಾರಣದಲ್ಲಿ ಭಾಷಣ ಮಾಡಿದ ಹಾಗೆ ಮಾತನಾಡಿದರೆ ಆಗುತ್ತಾ. ನ್ಯಾಯಾಲಯದ ಬಗ್ಗೆ ಭಯ, ಭಕ್ತಿ ಬೇಡವಾ? ಯಾರ ಬಗ್ಗೆ ಮಾತನಾಡುತ್ತಿದ್ದೀರಿ ಗೊತ್ತಿದೆಯಾ? ಜಮೀರ್ ಅವರು ಸಾರಿಗೆ ಸಿಬ್ಬಂದಿ ಹತ್ತಿರ ಮಾತನಾಡಿದ ಹಾಗೆ ಮಾತನಾಡಿದ್ದಾರೆ. ನನ್ನ ಬಗ್ಗೆ ಮಾತನಾಡಲಿ ಪರವಾಗಿಲ್ಲ. ನ್ಯಾಯಾಲಯದ ಬಗ್ಗೆ ಈ ರೀತಿ ಮಾತನಾಡಬಾರದು ಎಂದು ಕಿಡಿಕಾರಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ರಾಜೀನಾಮೆ ಬಗ್ಗೆ ಖುದ್ದು ಸುಳಿವು ನೀಡಿದ CM ಸಿದ್ದರಾಮಯ್ಯ; ಸಾಮಾಜಿಕ ಮಾಧ್ಯಮದಲ್ಲಿ ಮಹತ್ವದ ಪೋಸ್ಟ್​!

ಹೈಕಮಾಂಡ್ ಅದೇಶ ಪಾಲನೆ: ಗುರುವಾರ ಬೆಳಗ್ಗೆ 10.30ಕ್ಕೆ ರಾಜ್ಯಪಾಲರ ಭೇಟಿಗೆ ಸಮಯ ಕೇಳಿದ ಸಿಎಂ ಸಿದ್ದರಾಮಯ್ಯ; Video

ಗಡಿಯಲ್ಲಿ ಕಟ್ಟುನಿಟ್ಟಿನ ಕ್ರಮ: 15 ಕಿ.ಮೀ. ಒಳಗಿನ ಅಕ್ರಮ ನಿರ್ಮಾಣ ಕೆಡವಲು ಅಮಿತ್ ಶಾ ಸೂಚನೆ

SIR ಪ್ರಕ್ರಿಯೆಗೆ ಸುಪ್ರೀಂ ಕೋರ್ಟ್ ಗ್ರೀನ್ ಸಿಗ್ನಲ್; ಮುಕ್ತ ಹಾಗೂ ನ್ಯಾಯಸಮ್ಮತ ಚುನಾವಣೆಗೆ ಅಗತ್ಯ ಎಂದ ನ್ಯಾಯಪೀಠ..!

ಸಿಎಂ ಸಿದ್ದರಾಮಯ್ಯ ಪದತ್ಯಾಗ; ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಮಹತ್ವದ ಸಭೆ

SCROLL FOR NEXT