ಪ್ರಲ್ಹಾದ್ ಜೋಶಿ  
ರಾಜ್ಯ

ಎಚ್ ಡಿಕೆಗೆ ಹಂದಿ ಪದ ಬಳಕೆ: ADGP ಬೆಲೆ ತೆರಬೇಕಾಗುತ್ತದೆ, ಕೇಡರ್ ಕಂಟ್ರೋಲ್ ಮೂಲಕ ಕ್ರಮ- ಪ್ರಲ್ಹಾದ್ ಜೋಶಿ

ಈ ಲೋಕಾಯುಕ್ತ ಎಡಿಜಿಪಿಗೆ ಏನಾದರೂ ಸರ್ವೀಸ್ ಕಂಡಕ್ಟ್ ರೂಲ್ ಬಗ್ಗೆ ಜ್ಞಾನವಿದ್ದರೆ ತಕ್ಷಣ ಕ್ಷಮಾಪಣೆ ಕೇಳಲಿ.ಒಬ್ಬ ಜನಪ್ರತಿನಿಧಿ, ಅದರಲ್ಲೂ ಕೇಂದ್ರ ಸಚಿವರ ಬಗ್ಗೆ ಹೀಗೆ ಅಸಭ್ಯ ಭಾಷೆಯಲ್ಲಿ, ಕೆಟ್ಟ ಪದ ಬಳಸುವುದನ್ನು ಯಾವುದೇ ಕಾರಣಕ್ಕೂ ಸಹಿಸಲು ಸಾಧ್ಯವಿಲ್ಲ. ಕೇಡರ್ ಕಂಟ್ರೋಲ್ ಇದನ್ನು ಗಂಭೀರವಾಗಿ ಪರಿಗಣಿಸಲಿದೆ.

ಹುಬ್ಬಳ್ಳಿ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ "ಹಂದಿ" ಪದ ಬಳಸಿ ಅವಹೇಳನ ಮಾಡಿದ ಲೋಕಾಯುಕ್ತ ಎಡಿಜಿಪಿ ಎಂ.ಚಂದ್ರಶೇಖರ್ ವಿರುದ್ಧ ಕೇಡರ್ ಕಂಟ್ರೋಲ್ ಮೂಲಕ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಕೇಂದ್ರ ಆಹಾರ ಮತ್ತು ಗ್ರಾಹಕ ವ್ಯವಹಾರ ಸಚಿವ ಪ್ರಲ್ಹಾದ ಜೋಶಿ ಎಚ್ಚರಿಸಿದ್ದಾರೆ.

ಹುಬ್ಬಳ್ಳಿಯಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಲೋಕಾಯುಕ್ತ ಎಡಿಜಿಪಿಗೆ ಏನಾದರೂ ಸರ್ವೀಸ್ ಕಂಡಕ್ಟ್ ರೂಲ್ ಬಗ್ಗೆ ಜ್ಞಾನವಿದ್ದರೆ ತಕ್ಷಣ ಕ್ಷಮಾಪಣೆ ಕೇಳಲಿ ಎಂದು ಸೂಚಿಸಿದರು.

ಒಬ್ಬ ಜನಪ್ರತಿನಿಧಿ, ಅದರಲ್ಲೂ ಕೇಂದ್ರ ಸಚಿವರ ಬಗ್ಗೆ ಹೀಗೆ ಅಸಭ್ಯ ಭಾಷೆಯಲ್ಲಿ, ಕೆಟ್ಟ ಪದ ಬಳಸುವುದನ್ನು ಯಾವುದೇ ಕಾರಣಕ್ಕೂ ಸಹಿಸಲು ಸಾಧ್ಯವಿಲ್ಲ. ಕೇಡರ್ ಕಂಟ್ರೋಲ್ ಇದನ್ನು ಗಂಭೀರವಾಗಿ ಪರಿಗಣಿಸಲಿದೆ ಎಂದು ತಿಳಿಸಿದರು.

ಕುಮಾರಸ್ವಾಮಿ ಅವರು ಯಾವತ್ತೂ ಯಾರ ಬಗ್ಗೆಯೂ ಹೀಗೆ ಅಸಭ್ಯ ಭಾಷೆ ಬಳಸಿದವರಲ್ಲ. ಈ ಅಧಿಕಾರಿ ಬಗ್ಗೆಯೂ ಹಾಗೆಲ್ಲ ಏಕವಚನದಲ್ಲಿ ಮಾತನಾಡಿಲ್ಲ ಎಂದು ಜೋಶಿ ಸ್ಪಷ್ಟಪಡಿಸಿದರು.

ಎಡಿಜಿಪಿ ಇದಕ್ಕೆ ಬೆಲೆ ತೆರಬೇಕಾಗುತ್ತದೆ: ಕುಮಾರಸ್ವಾಮಿ ಅವರ ಬಗ್ಗೆ ಕೆಟ್ಟ ಪದದಲ್ಲಿ ಸಂಬೋಧನೆ ಮಾಡಿರುವುದು ಅಧಿಕಾರಿಯ ಅಹಂಕಾರದ ಪರಮಾವಧಿಯಾಗಿದ್ದು, ಮುಂದಿನ ದಿನಗಳಲ್ಲಿ ಇದಕ್ಕೆ ಬೆಲೆ ತೆರಬೇಕಾಗುತ್ತದೆ ಎಂದು ಜೋಶಿ ಎಚ್ಚರಿಸಿದರು.

ಸರ್ಕಾರದ ಆದೇಶವಿದ್ದರೆ ತನಿಖೆ ನಡೆಸಲಿ. ಎಚ್ ಡಿಕೆ ಆರೋಪ ಮಾಡಿದ್ದರೆ ಗೌರವಯುತ ಭಾಷೆಯಲ್ಲಿ, ಸಭ್ಯ ಪದಗಳಲ್ಲಿ ಸ್ಪಷ್ಟನೆ ಕೊಡಲಿ. ಅದು ಬಿಟ್ಟು ಈ ರೀತಿ ಕೆಟ್ಟದಾಗಿ ಸಂಬೋಧಿಸುವುದು ಯಾವುದೇ ಅಧಿಕಾರಿಗಳಿಗೂ ಶೋಭೆ ತರುವುದಿಲ್ಲ ಎಂದು ಸಚಿವ ಜೋಶಿ ಹೇಳಿದರು

ಸರ್ಕಾರದ ಆಡಳಿತಕ್ಕೆ ಹಿಡಿದ ಕೈಗನ್ನಡಿ: ಒಬ್ಬ ಜನಪ್ರತಿನಿಧಿ ಬಗ್ಗೆ ಲೋಕಾಯುಕ್ತ ಎಡಿಜಿಪಿ ಕೆಟ್ಟ ಪದ ಬಳಸಿದ್ದು, ರಾಜ್ಯ ಕಾಂಗ್ರೆಸ್ ಸರ್ಕಾರದ ಆಡಳಿತಕ್ಕೆ ಹಿಡಿದ ಕೈಗನ್ನಡಿ. ಇದು ಕಾಂಗ್ರೆಸ್ಗೆ ಮುಳುವಾಗಲಿದೆ. ಕಾಂಗ್ರೆಸ್ ಎಂಥೆಂಥ ಅಧಿಕಾರಿಗಳನ್ನು ಬೆಳೆಸುತ್ತಿದೆಯಲ್ಲ! ಎಂದು ಕಿಡಿ ಕಾರಿದರು. ಈ ಸರ್ಕಾರವೇ ಶಾಶ್ವತವಲ್ಲ; ಎಚ್ಚರ: ರಾಜ್ಯದಲ್ಲಿ ಈ ಸರ್ಕಾರವೇ ಶಾಶ್ವತವಾಗಿ ಇರೋದಿಲ್ಲ. ಸ್ವಲ್ಪ ಎಚ್ಚರ ವಹಿಸಿ ಮಾತನಾಡಿ, ಕೆಲಸ ಮಾಡಿ ಎಂದು ಲೋಕಾಯುಕ್ತ ಎಡಿಜಿಪಿ ಚಂದ್ರಶೇಖರ್ ಗೆ ಕೇಂದ್ರ ಸಚಿವ ಜೋಶಿ ಚಾಟಿ ಬೀಸಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಎಲ್ಲವನ್ನೂ ತಡೆಯಲು ಸಾಧ್ಯವಿಲ್ಲ': CJP ದೆಹಲಿ ಪ್ರತಿಭಟನೆಗೆ ನಿರ್ಬಂಧ ಕುರಿತು ಕೇಂದ್ರಕ್ಕೆ ಸುಪ್ರೀಂ ಕೋರ್ಟ್ ಚಾಟಿ

'ಮಕ್ಕಳನ್ನು ಪ್ರತಿಭಟನೆಗಳಿಂದ ದೂರವಿಡಿ': ದೆಹಲಿ ಪ್ರತಿಭಟನೆಗೆ ಸಿದ್ಧತೆ, ಮಸೀದಿ ಮೈಕ್‌ನಲ್ಲಿ ಪೊಲೀಸರ ಮನವಿ! Video

ಭಾರತೀಯ ಮೂಲದ ನ್ಯಾಯಶಾಸ್ತ್ರಜ್ಞೆಗೆ ಈ ಬಾರಿಯ ನೊಬೆಲ್ ಶಾಂತಿ ಪ್ರಶಸ್ತಿ; ನವನೇತಮ್ ನವಿ ಪಿಳ್ಳೈಗೆ ಒಲಿದ ನೊಬೆಲ್ ಶಾಂತಿ ಗರಿ

Ramayana: ಕೊನೆಗೂ 'ರಾಮಾಯಣ' ರಿಲೀಸ್ ಡೇಟ್ ಫಿಕ್ಸ್; ದೀಪಾವಳಿಗೂ ಮೊದಲೇ ಬಿಡುಗಡೆ

ಯಮನಿಗೇ ಚಳ್ಳೇಹಣ್ಣು: ಗುದ್ದಿದ ಲಾರಿಯನ್ನೇ ಹಿಡಿದು ಪ್ರಾಣ ಉಳಿಸಿಕೊಂಡ ಯುವತಿ!-ರೋಚಕ Video