ರಾಜ್ಯ

ಬೆಂಗಳೂರು: ಸಿಗರೇಟ್ ತುಂಡುಗಳ ಎಸೆಯಲು ಪ್ರತ್ಯೇಕ ಡಬ್ಬ ಒದಗಿಸಲು ಬಿಬಿಎಂಪಿ ಚಿಂತನೆ!

ಸಿಗರೇಟ್ ತುಂಡುಗಳು ಹಾನಿಕಾರಕ ರಾಸಾಯನಿಕಗಳನ್ನು ಹೊಂದಿದ್ದು ಅದು ಚರಂಡಿಗಳು, ಅಂತರ್ಜಲ, ಮಣ್ಣು ಮತ್ತು ಪರಿಸರವನ್ನು ಕಲುಷಿತಗೊಳಿಸುತ್ತದೆ.

ಬೆಂಗಳೂರು: ಕೇಂದ್ರ ಮಾಲಿನ್ಯ ನಿಯಂತ್ರಣ ಮಂಡಳಿಯು 2022ರ ನವೆಂಬರ್‌ನಲ್ಲಿ ಸಿಗರೇಟ್ ಮತ್ತು ‘ಬೀಡಿ’ ತುಂಡುಗಳನ್ನು ವೈಜ್ಞಾನಿಕವಾಗಿ ವಿಲೇವಾರಿ ಮಾಡಲು ಮಾರ್ಗಸೂಚಿಗಳನ್ನು ರೂಪಿಸಿದ್ದರೂ, ನಗರದಲ್ಲಿ ಇನ್ನೂ ಜಾರಿಗೆ ಬಂದಿಲ್ಲ.

ನಗರದಲ್ಲಿ ಪ್ರತಿದಿನ ಸಾವಿರಾರು ಸಿಗರೇಟ್ ತುಂಡುಗಳನ್ನು ವಿಲೇವಾರಿ ಮಾಡಲಾಗುತ್ತದೆ. ಅವುಗಳ ತುಂಡುಗಳು ಹಾನಿಕಾರಕ ರಾಸಾಯನಿಕಗಳನ್ನು ಹೊಂದಿದ್ದು ಅದು ಚರಂಡಿಗಳು, ಅಂತರ್ಜಲ, ಮಣ್ಣು ಮತ್ತು ಪರಿಸರವನ್ನು ಕಲುಷಿತಗೊಳಿಸುತ್ತದೆ.

ನಗರದಲ್ಲಿ ಸಿಗರೇಟ್ ತುಂಡುಗಳನ್ನು ನಿರ್ಲಕ್ಷಿಸಿ ವಿಲೇವಾರಿ ಮಾಡುವುದರಿಂದ ಪರಿಸರಕ್ಕೆ ಆಗುವ ಅನಾಹುತಗಳನ್ನು ತಡೆಯಲು ಬಿಬಿಎಂಪಿಯು ರಾಷ್ಟ್ರೀಯ ಹಸಿರು ನ್ಯಾಯಮಂಡಳಿ ಮತ್ತು ಸಿಪಿಸಿಬಿ ಮಾರ್ಗಸೂಚಿಯಂತೆ ಸಿಗರೇಟ್ ತುಂಡುಗಳ ಸಂಗ್ರಹಕ್ಕೆ ಸೂಕ್ಷ್ಮ ಯೋಜನೆ ರೂಪಿಸಿದೆ ಎಂದು ಪಾಲಿಕೆ ಮೂಲಗಳು ತಿಳಿಸಿವೆ. ಸೂಕ್ಷ್ಮ ಯೋಜನೆಯ ಭಾಗವಾಗಿ, ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (BBMP), ಪ್ರಮುಖ ಸಿಗರೇಟ್ ತಯಾರಕ ITC ಸಹಯೋಗದೊಂದಿಗೆ, ಸಿಗರೇಟ್ ತುಂಡುಗಳ ಸಂಗ್ರಹಕ್ಕಾಗಿ ನಗರದ ಹಾಟ್ ಸ್ಪಾಟ್‌ಗಳಲ್ಲಿ ಪ್ರತ್ಯೇಕ ಡಸ್ಟ್‌ಬಿನ್‌ಗಳನ್ನು ಇರಿಸುತ್ತದೆ. ನಂತರ ತುಂಡುಗಳನ್ನು ತ್ಯಾಜ್ಯದಿಂದ ಶಕ್ತಿ ಅಥವಾ ಸಹ-ಸಂಸ್ಕರಣೆ ಮೂಲಕ ಮರುಬಳಕೆ ಮಾಡಲಾಗುತ್ತದೆ.

ಸಿಗರೇಟ್ ತುಂಡುಗಳನ್ನು ಮರುಬಳಕೆ ಮಾಡುವ ಜವಾಬ್ದಾರಿ ತಯಾರಕರ ಮೇಲಿದ್ದು, ಬಿಬಿಎಂಪಿಯೊಂದಿಗಿನ ಹಿಂದಿನ ಸಭೆಯಲ್ಲಿ ಅವರು ಸಹ ಇದಕ್ಕೆ ಒಪ್ಪಿಗೆ ನೀಡಿದ್ದಾರೆ ಎಂದು ಮೂಲಗಳು ತಿಳಿಸಿವೆ. ಸಿಗರೇಟ್ ಪ್ಯಾಕ್‌ಗಳ ಮೇಲೆ ವಿಲೇವಾರಿ ಸೂಚನೆಗಳನ್ನು ಮುದ್ರಿಸಲು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಅಡಿಯಲ್ಲಿ ಬರುವ ರಾಜ್ಯ ತಂಬಾಕು ನಿಯಂತ್ರಣ ಕೋಶವು ಕ್ರಮಗಳನ್ನು ತೆಗೆದುಕೊಳ್ಳುತ್ತಿದೆ.

ಸಿಗರೇಟ್ ತುಂಡುಗಳ ವೈಜ್ಞಾನಿಕ ಸಂಗ್ರಹಣೆ ವಿಳಂಬವಾಗಿದೆ ಎಂದು ನಾಗರಿಕ ಸಂಸ್ಥೆ ಒಪ್ಪಿಕೊಂಡಿದೆ. ವಿಳಂಬಕ್ಕೆ ಸಿಗರೇಟ್ ತಯಾರಕರನ್ನು ದೂಷಿಸಿದೆ. ಬೆಂಗಳೂರಿನ ಎರಡು ವಾರ್ಡ್‌ಗಳಲ್ಲಿ ಪ್ರಾಯೋಗಿಕವಾಗಿ ಸಿಗರೇಟ್ ತುಂಡು ವಿಲೇವಾರಿಗೆ ಕ್ರಮ ಕೈಗೊಳ್ಳುವಂತೆ ಐಟಿಸಿಗೆ ಪತ್ರ ಕಳುಹಿಸಿದೆ.

ಬಿಬಿಎಂಪಿಯು ಜಿಲ್ಲಾ ತಂಬಾಕು ನಿಯಂತ್ರಣ ಕಾರ್ಯಕ್ರಮದಡಿ ಸೆಪ್ಟೆಂಬರ್ 19 ರಂದು ಬರೆದಿರುವ ಪತ್ರವು ದಿ ನ್ಯೂ ಇಂಡಿಯನ್ ಎಕ್ಸ್ ಪ್ರೆಸ್ ಗೆ ಲಭ್ಯವಾಗಿದೆ. ಕಂಪನಿಯು ನಾಗರಿಕ ಸಂಸ್ಥೆಯೊಂದಿಗೆ ಹಿಂದಿನ ಸಭೆಯಲ್ಲಿ ಒಪ್ಪಿಕೊಂಡಂತೆ ಮೈಕ್ರೋ ಪ್ಲಾನ್ ತೆಗೆದುಕೊಳ್ಳುವಂತೆ ಸೂಚಿಸಿದೆ. ಮೈಕ್ರೋ ಪ್ಲಾನ್ ಆರಂಭಿಸಲು ಐಟಿಸಿ ವಿಫಲವಾದಲ್ಲಿ ಕಂಪನಿ ವಿರುದ್ಧ ಕ್ರಮ ಕೈಗೊಳ್ಳುವುದಾಗಿ ಪಾಲಿಕೆ ತಿಳಿಸಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

US tariff: ಚೀನಾ ಮೇಲೆ ಅಮೆರಿಕ ಶೇ.100 ರಷ್ಟು ಸುಂಕ; ಭಾರತಕ್ಕೆ ಎಚ್ಚರಿಕೆಯ ಗಂಟೆ!

ದ್ವಿಶತಕ ಮಿಸ್: ಗಿಲ್ ತಪ್ಪಿನಿಂದ ರನ್ ಔಟ್ ಆಗಿ ತಲೆ ಚಚ್ಚಿಕೊಂಡ ಜೈಸ್ವಾಲ್; ಮೈದಾನ ತೊರೆಯುವಂತೆ ಅಂಪೈರ್ ತಾಕೀತು, Video!

ಅಧಿಕೃತವಾಗಿ 'ಹೊಸ ಗರ್ಲ್‌ ಫ್ರೆಂಡ್‌' ಪರಿಚಯಿಸಿದ ಹಾರ್ದಿಕ್ ಪಾಂಡ್ಯ! Video

2nd Test, Day 2: ವಿಂಡೀಸ್ ವಿರುದ್ಧ ಶತಕ, ವಿರಾಟ್ ಕೊಹ್ಲಿ ದಾಖಲೆ ಸರಿಗಟ್ಟಿದ ಶುಭ್ ಮನ್ ಗಿಲ್!

BBk 12: ಟಾಸ್ಕ್‌ನೇ ಮರೆತುಬಿಟ್ರಾ ಅಸುರಾಧಿಪತಿ ಕಾಕ್ರೋಚ್? ಬಾಗಿಲನ್ನು ಓಪನ್ ಮಾಡಿ ಎಂದ ಕಿಚ್ಚ ಸುದೀಪ್!

SCROLL FOR NEXT