ಅಪಘಾತದ ದೃಶ್ಯ. 
ರಾಜ್ಯ

ಬೆಂಗಳೂರು-ಮೈಸೂರು ಎಕ್ಸ್ ಪ್ರೆಸ್ ವೇ: KSRTC ಬಸ್ ಉರುಳಿ 20 ಮಂದಿಗೆ ಗಾಯ!

ತುರ್ತು ಸೇವೆಗಳ ಸಿಬ್ಬಂದಿಗಳು ಸ್ಥಳಕ್ಕೆ ಧಾವಿಸಿ ಗಾಯಾಳುಗಳನ್ನು ಮಂಡ್ಯದ ಮಿಮ್ಸ್ ಆಸ್ಪತ್ರೆಗೆ ದಾಖಲಿಸಿದ್ದಾರೆ.

ಬೆಂಗಳೂರು: ಬೆಂಗಳೂರು- ಮೈಸೂರು ಎಕ್ಸ್ ಪ್ರೆಸ್ ವೇ ನಲ್ಲಿ ರಸ್ತೆ ಅಪಘಾತ ಸಂಭವಿಸಿದ್ದು, 20 ಮಂದಿ ಗಾಯಗೊಂಡಿದ್ದಾರೆ.

ಕೆಎಸ್ ಆರ್ ಟಿ ಸಿ ಬಸ್ ಉರುಳಿಬಿದ್ದ ಪರಿಣಾಮ ಮಂಡ್ಯದ ಸಂಜೋ ಆಸ್ಪತ್ರೆ ಎದುರು ಈ ಅಪಘಾತ ಸಂಭವಿಸಿದ್ದು ಹಲವರ ಸ್ಥಿತಿ ಚಿಂತಾಜನಕವಾಗಿದೆ. ಬೆಂಗಳೂರಿನಿಂದ ಮಂಡ್ಯಕ್ಕೆ ತೆರಳುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್ ತಿರುವು ಪಡೆಯುವಾಗ ನಿಯಂತ್ರಣ ತಪ್ಪಿ ಕಂಟೈನರ್ ಲಾರಿಗೆ ಡಿಕ್ಕಿ ಹೊಡೆದು ಪಲ್ಟಿಯಾಗಿದೆ.

ತುರ್ತು ಸೇವೆಗಳ ಸಿಬ್ಬಂದಿಗಳು ಸ್ಥಳಕ್ಕೆ ಧಾವಿಸಿ ಗಾಯಾಳುಗಳನ್ನು ಮಂಡ್ಯದ ಮಿಮ್ಸ್ ಆಸ್ಪತ್ರೆಗೆ ದಾಖಲಿಸಿದ್ದಾರೆ. ಮಂಡ್ಯ ಗ್ರಾಮಾಂತರ ಪೊಲೀಸರು ತನಿಖೆ ನಡೆಸುತ್ತಿದ್ದು, ಈ ಭಾಗದಲ್ಲಿ ರಸ್ತೆ ಸುರಕ್ಷತೆ ಬಗ್ಗೆ ಆತಂಕ ಮೂಡಿಸಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಸರ್ವೋಚ್ಚ ನಾಯಕನ ಆಯ್ಕೆಗಾಗಿ 88 ಸದಸ್ಯರು ಸೇರಿದ್ದ ಕಟ್ಟಡ ಧ್ವಂಸಗೈದ ಇಸ್ರೇಲ್; 9 ಸಾವಿರ ಕೋಟಿಯ ಅಮೆರಿಕದ ರೇಡಾರ್ ಧ್ವಂಸ!

ಕೊಲ್ಲಿ ದೇಶಗಳಿಂದ ಇಂಧನ ಪೂರೈಕೆ ಬಿಕ್ಕಟ್ಟು: ಭಾರತದ ಕೈಹಿಡಿಯಲು ಮುಂದಾದ ರಷ್ಯಾ!

ಚಿಕ್ಕಬಳ್ಳಾಪುರ: 70 ಸಾವಿರ ಲಂಚ ಪಡೆಯುತ್ತಿದ್ದಾಗ PSI, ASI ಲೋಕಾಯುಕ್ತ ಬಲೆಗೆ

'ತುಂಬಾ ಲೇಟ್ ಆಯಿತು': ಇರಾನ್​ ಮಾತುಕತೆ ಪ್ರಸ್ತಾಪಕ್ಕೆ ಟ್ರಂಪ್ ತಿರುಗೇಟು

Israel Iran war: ಭಾರತಕ್ಕೆ ಬಿಗ್ ಶಾಕ್, ಕತಾರ್ ನಿಂದ ಕೈಗಾರಿಕೆಗಳಿಗೆ ಅನಿಲ ಸರಬರಾಜು ಕಡಿತ!

SCROLL FOR NEXT